AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಸಾಲ ತೀರಿಸದಿದ್ದಕ್ಕೆ ಅಶ್ಲೀಲ ಫೋಟೋ ಕಳುಹಿಸಿ ಬ್ಲಾಕ್​ಮೇಲ್; ಬೆಂಗಳೂರಿನ ಬ್ಯಾಂಕ್ ನೌಕರ ಆತ್ಮಹತ್ಯೆ

Bangalore News: ಆರೋಪಿಗಳು ನಂದಕುಮಾರ್​ಗೆ ಕೆಲವು ಲಿಂಕ್​ಗಳನ್ನು ಕಳುಹಿಸಿ, ಅದನ್ನು ಓಪನ್ ಮಾಡಲು ಹೇಳಿದ್ದರು. ಆ ಲಿಂಕ್ ಓಪನ್ ಮಾಡಿದ ನಂತರ ನಂದಕುಮಾರ್ ಖಾಸಗಿ ವಿವರಗಳೆಲ್ಲವೂ ಆರೋಪಿಗಳಿಗೆ ಸಿಕ್ಕಿತ್ತು ಎನ್ನಲಾಗಿದೆ.

Bengaluru Crime: ಸಾಲ ತೀರಿಸದಿದ್ದಕ್ಕೆ ಅಶ್ಲೀಲ ಫೋಟೋ ಕಳುಹಿಸಿ ಬ್ಲಾಕ್​ಮೇಲ್; ಬೆಂಗಳೂರಿನ ಬ್ಯಾಂಕ್ ನೌಕರ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 29, 2022 | 1:04 PM

Share

ಬೆಂಗಳೂರು: ಆನ್​ಲೈನ್​ ಲೋನ್ ಆ್ಯಪ್‌ಗಳ (Online Loan App) ಮೂಲಕ ಪಡೆದ ಸಾಲವನ್ನು ಮರುಪಾವತಿಸದ ಬ್ಯಾಂಕ್ ನೌಕರನಿಗೆ ಆ ಆ್ಯಪ್​ನವರು ಇನ್ನಿಲ್ಲದ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ 55 ವರ್ಷದ ಬ್ಯಾಂಕ್ ಉದ್ಯೋಗಿಯೊಬ್ಬರು ಸೋಮವಾರ ಬೆಳಗ್ಗೆ ಸಿಟಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಂಗಳೂರಿನ (Bangalore) ಕೆಂಗೇರಿ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 40 ಲೋನ್ ಆ್ಯಪ್​ಗಳಲ್ಲಿ ಸಾಲ ಪಡೆದಿದ್ದ ನಂದಕುಮಾರ್ ಎಂಬ ಬ್ಯಾಂಕ್ ನೌಕರ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಕೋ ಆಪರೇಟಿವ್ ಬ್ಯಾಂಕ್​ನಲ್ಲಿ ಕೆಲಸ ಮಾಡುತ್ತಿದ್ದ ನಾಗದೇವನಹಳ್ಳಿ ನಿವಾಸಿ ನಂದಕುಮಾರ್ ಆನ್​ಲೈನ್ ಆ್ಯಪ್ ಮೂಲಕ ಸಾಲ ಪಡೆದಿದ್ದರು. ಸಾಲ ವಾಪಾಸ್ ನೀಡುವುದು ತಡವಾಗಿದ್ದರಿಂದ ಆ ಆ್ಯಪ್​ನವರು ನಂದಕುಮಾರ್ ಅವರ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಅದನ್ನು ಅವರ ಸ್ನೇಹಿತರು ಹಾಗೂ ಸಂಬಂಧಿಕರಿಗೆ ಕಳುಹಿಸಿದ್ದರು. ಇದರಿಂದ ನಂದಕುಮಾರ್ ಅವಮಾನದಿಂದ ಕುಗ್ಗಿ ಹೋಗಿದ್ದರು. ಇದರಿಂದ ಪಾರಾಗಲು ಆತ್ಮಹತ್ಯೆಯ ನಿರ್ಧಾರ ಮಾಡಿದ್ದರು.

ಮೃತ ನಂದಕುಮಾರ್ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನಗಾದ ಅವಮಾನದ ಬಗ್ಗೆ ಬರೆದಿದ್ದಾರೆ. ನಾನು 40 ಲೋನ್ ಆ್ಯಪ್ ಮೂಲಕ ಸಾಲ ಪಡೆದುಕೊಂಡಿದ್ದು, ಅದರಲ್ಲಿ ಒಂದು ಆ್ಯಪ್ ನಿಂದ 3 ಸಾವಿರ ಹಾಗೂ ಉಳಿದ ಆ್ಯಪ್​ನಿಂದ 16 ಸಾವಿರ ರೂ. ಸಾಲ ತೆಗೆದುಕೊಂಡಿದ್ದೇನೆ. ಆದರೆ ಸಾಲ ಮರುಪಾವತಿ ಮಾಡಲು ಸಾಧ್ಯವಾಗದ ಕಾರಣ ಕಿರುಕುಳ ಹೆಚ್ಚಾಯಿತು. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Crime News: ತಮಿಳುನಾಡಿನಲ್ಲಿ ಮತ್ತೊಬ್ಬಳು ವಿದ್ಯಾರ್ಥಿನಿ ಆತ್ಮಹತ್ಯೆ; 2 ವಾರದಲ್ಲಿ ಇದು 4ನೇ ಸಾವು!

ಸಾಲದ ಹೊರೆ ಒಂದೆಡೆಯಾದರೆ ನಂದಕುಮಾರ್ ಅವರ ವೈವಾಹಿಕ ಜೀವನವೂ ಚೆನ್ನಾಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸಾಲ ನೀಡಿದ್ದವರು ನಂದ ಕುಮಾರ್‌ಗೆ ಮಾರ್ಫ್ ಮಾಡಿದ ಚಿತ್ರಗಳನ್ನು ಕಳುಹಿಸಿ ಪೋರ್ನ್ ಸೈಟ್‌ಗಳಲ್ಲಿ ಅಪ್‌ಲೋಡ್ ಮಾಡುತ್ತಿದ್ದರು. ಇದರ ಜೊತೆಗೆ ನಂದಕುಮಾರ ಅವರ ಫೋನ್​ನಲ್ಲಿದ್ದ ಕಾಂಟಾಕ್ಟ್ ನಂಬರ್​ಗಳಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದರು, ಇದನ್ನು ನಂದಕುಮಾರ್ ಅವರೇ ಕಳುಹಿಸಿದ್ದಾರೆ ಎಂದು ಅವರು ಅಂದುಕೊಳ್ಳುವಂತೆ ಮಾಡಿದ್ದರು ಎನ್ನಲಾಗಿದೆ.

ಮೃತನ ವೈಯಕ್ತಿಕ ವಿವರಗಳು ಸಾಲ ನೀಡಿದವರಿಗೆ ಹೇಗೆ ದೊರೆಯಿತು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು ನಂದಕುಮಾರ್​ಗೆ ಕೆಲವು ಲಿಂಕ್​ಗಳನ್ನು ಕಳುಹಿಸಿ, ಅದನ್ನು ಓಪನ್ ಮಾಡಲು ಹೇಳಿದ್ದರು. ಆ ಲಿಂಕ್ ಓಪನ್ ಮಾಡಿದ ನಂತರ ನಂದಕುಮಾರ್ ಖಾಸಗಿ ವಿವರಗಳೆಲ್ಲವೂ ಆರೋಪಿಗಳಿಗೆ ಸಿಕ್ಕಿತ್ತು ಎನ್ನಲಾಗಿದೆ. ಆ ಲಿಂಕ್ ಮೂಲಕ ನಂದಕುಮಾರ್ ಅವರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಹ್ಯಾಕ್ ಮಾಡಿ ಅಲ್ಲಿಂದ ಅವರ ಸ್ನೇಹಿತರ ಸಂಪರ್ಕ ಪಡೆದು ವಂಚಿಸಿದ್ದಾರೆ ಎನ್ನಲಾಗಿದೆ.

Published On - 12:53 pm, Fri, 29 July 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ