AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ಟೋಪಿ ಹಾಕಲು ಹೋಗಿ ಸಿಕ್ಕಿಬಿದ್ದ ಭೂಪ!

ಬೆಂಗಳೂರಿನ ಆರ್‌ಬಿಐ ಕಚೇರಿಯಲ್ಲಿ 7.5 ಲಕ್ಷ ಮೌಲ್ಯದ 2000 ರೂ. ನಕಲಿ ನೋಟುಗಳನ್ನು ಬದಲಾಯಿಸಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಚಲಾವಣೆ ರದ್ದಾದ ನೋಟುಗಳನ್ನು ಅಕ್ರಮವಾಗಿ ಬದಲಾಯಿಸಲು ಯತ್ನಿಸಿದ ರಮೇಶ್ ಎಂಬಾತ ಹಲಸೂರು ಗೇಟ್ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತನ ಬಳಿ 375 ನಕಲಿ ನೋಟುಗಳು ಪತ್ತೆಯಾಗಿವೆ. ನಕಲಿ ನೋಟುಗಳ ಜಾಲದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ಟೋಪಿ ಹಾಕಲು ಹೋಗಿ ಸಿಕ್ಕಿಬಿದ್ದ ಭೂಪ!
ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ಟೋಪಿ ಹಾಕಲು ಹೋಗಿ ಸಿಕ್ಕಿಬಿದ್ದ ಭೂಪ! Image Credit source: google Gemini
ಭಾವನಾ ಹೆಗಡೆ
|

Updated on:Apr 15, 2026 | 3:18 PM

Share

ಬೆಂಗಳೂರು, ಏಪ್ರಿಲ್ 15: ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಚೇರಿಯಲ್ಲಿ ಚಲಾವಣೆ ರದ್ದಾಗಿರುವ 2,000 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಬದಲಾಯಿಸಲು ಯತ್ನಿಸಿದ 52 ವರ್ಷದ ವ್ಯಕ್ತಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. 2 ಸಾವಿರ ಮುಖಬೆಲೆಯ 300ಕ್ಕೂ ಹೆಚ್ಚು ನೋಟುಗಳನ್ನು ತಂದಿದ್ದ ವ್ಯಕ್ತಿ, 7 ಲಕ್ಷ ರೂ.ಗೂ ಹೆಚ್ಚು ಮೊತ್ತವನ್ನು ಜಮಾ ಮಾಡುವಂತೆ ಕೇಳಿದ್ದ ಎನ್ನಲಾಗಿದೆ.

ಆರೋಪಿಗೆ ಇಷ್ಟೊಂದು ನಕಲಿ ನೋಟುಗಳು ಸಿಕ್ಕಿದ್ದು ಹೇಗೆ?

ನಾಗಶೆಟ್ಟಿಹಳ್ಳಿಯ ನಿವಾಸಿ ಎಸ್.ವಿ. ರಮೇಶ್ ಬಂಧಿತ ಆರೋಪಿ. ಈತ ಏಪ್ರಿಲ್ 9ರಂದು ನೃಪತುಂಗ ರಸ್ತೆಯಲ್ಲಿರುವ ಆರ್‌ಬಿಐ ಕಚೇರಿಗೆ ಭೇಟಿ ನೀಡಿ, ತನ್ನ ಬಳಿಯಿದ್ದ 375 ನೋಟುಗಳನ್ನು ನೀಡಿ ಒಟ್ಟು 7.5 ಲಕ್ಷ ರೂಗಳನ್ನು ಬ್ಯಾಂಕ್ ಖಾತೆಗೆ ಜಮೆ ಮಾಡುವಂತೆ ಕೋರಿದ್ದ. ಆದರೆ, ಅಧಿಕಾರಿಗಳು ನೋಟುಗಳನ್ನು ತಪಾಸಣೆ ನಡೆಸಿದಾಗ ಅವುಗಳು ನಕಲಿ ಎಂದು ತಿಳಿದುಬಂದಿದೆ. ಆರ್‌ಬಿಐ ಸಹಾಯಕ ಜನರಲ್ ಮ್ಯಾನೇಜರ್ ಭೀಮ್ ಚೌಧರಿ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಪ್ರಕರಣದ ಹಿಂದೆ ದೊಡ್ಡ ಜಾಲವಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗೆ ಈ ನಕಲಿ ನೋಟುಗಳನ್ನು ಪೂರೈಸಿದವರು ಯಾರು ಮತ್ತು ಇವುಗಳನ್ನು ಎಲ್ಲಿ ಮುದ್ರಿಸಲಾಗಿದೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

2023ರಲ್ಲಿ ಆರ್‌ಬಿಐ 2,000 ರೂ. ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿದ್ದರೂ, ಸಾರ್ವಜನಿಕರಿಗೆ ಆರ್‌ಬಿಐ ಕಚೇರಿಗಳಲ್ಲಿ ಇವುಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಒಬ್ಬ ವ್ಯಕ್ತಿ ಏಕಕಾಲಕ್ಕೆ ಗರಿಷ್ಠ 20,000 ರೂ. ಮೌಲ್ಯದ ನೋಟುಗಳನ್ನು ಮಾತ್ರ ಬದಲಾಯಿಸಬಹುದು. ಆದರೆ ರಮೇಶ್ ಅತಿ ದೊಡ್ಡ ಮೊತ್ತದ ನಕಲಿ ನೋಟುಗಳೊಂದಿಗೆ ಸಿಕ್ಕಿಬಿದ್ದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:16 pm, Wed, 15 April 26

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ