ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ತಲೆಗೆ‌ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ವ್ಯಕ್ತಿಯೊಬ್ಬರು ಡೆತ್​ನೋಟ್ ಬರೆದಿಟ್ಟು ಕಾರಿನಲ್ಲೇ ತಲೆಗೆ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ನಡೆದಿದೆ.

ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ತಲೆಗೆ‌ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ಬಿಜೆಪಿ ಶಾಸಕ ಅರವಿಂದ ಲಿಂಬಾಳಿ
Follow us
TV9 Web
| Updated By: Rakesh Nayak Manchi

Updated on:Jan 01, 2023 | 9:51 PM

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ ಲಿಂಬಾಳಿ (Aravind Limbavali) ಹೆಸರು ಬರೆದಿಟ್ಟು ಕಾರಿನಲ್ಲೇ ತಲೆಗೆ‌ ಗುಂಡು ಹಾರಿಸಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ನಗರದ ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ನಡೆದಿದೆ. ಹೆಚ್‌ಎಸ್‌ಆರ್ ಲೇಔಟ್‌ ನಿವಾಸಿ ಪ್ರದೀಪ್ (47) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಡೆತ್​ನೋಟ್​ನಲ್ಲಿ ಮಹದೇವಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಪ್ರಭಾವಿ ರಾಜಕಾರಣಿಗಳ ಹೆಸರನ್ನು ಉಲ್ಲೇಖಿಸಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾಜಿ ಸಚಿವ ಅರವಿಂದ ಲಿಂಬಾವಳಿ, ಜಿ.ರಮೇಶ್‌ ರೆಡ್ಡಿ, ಕೆ.ಗೋಪಿ‌, ಜಯರಾಮ್ ರೆಡ್ಡಿ, ರಾಘವ ಭಟ್, ಸೋಮಯ್ಯ ಹೆಸರು ಉಲ್ಲೇಖಿಸಿ 6 ಜನರ ಮೇಲೆ ಕ್ರಮ ಜರುಗಿಸಿ ನನ್ನ ಸಾವಿಗೆ ನ್ಯಾಯ ಒದಗಿಸಿ ಎಂದು ಪ್ರದೀಪ್ ಡೆತ್​ನೋಟ್​ನಲ್ಲಿ ಮನವಿ ಮಾಡಿದ್ದಾರೆ. ಹೆಸರಿನ ಮುಂದೆ ಮೊಬೈಲ್ ನಂಬರ್ ಬರೆದು ಪ್ರದೀಪ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ವ್ಯವಹಾರದಲ್ಲಿ ವಂಚನೆ ಸಂಬಂಧ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆ.ಗೋಪಿ‌ ಮತ್ತು ಸೋಮಯ್ಯ ಅವರಿಗೆ ಅರವಿಂದ ಲಿಂಬಾವಳಿ ಅವರು ಬೆಂಬಲ ನೀಡಿದ್ದಾರೆ ಎಂದು ಪ್ರದೀಪ್ ಹೇಳಿದ್ದಾರೆ.

ನಿನ್ನೆ ಹೊಸ ವರ್ಷಾಚರಣೆ ಹಿನ್ನಲೆ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಕುಟುಂಬ ಸಮೇತರಾಗಿ ಪ್ರದೀಪ್ ರೆಸಾರ್ಟ್‌ವೊಂದಕ್ಕೆ ಹೋಗಿದ್ದರು ಎಂದು ತಿಳಿದುಬಂದಿದೆ. ಸದ್ಯ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡ ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಾಮನಗರ ಎಸ್‌ಪಿ ಸಂತೋಷ್ ಬಾಬು ಕೂಡ ಆಗಮಿಸಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:35 pm, Sun, 1 January 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ