ಬೆಂಗಳೂರಿನಲ್ಲಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ: ಕಾರಣವೇನು?

ಬೆಂಗಳೂರಿನ ನಾಯಂಡಹಳ್ಳಿ ಫ್ಲೈಓವರ್​​ ಮೇಲಿಂದ ಜಿಗಿದು ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ನೇಹಿತನೊಂದಿಗೆ ಆಟೋದಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬ್ಯಾಟರಾಯನಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಬೆಂಗಳೂರಿನಲ್ಲಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ: ಕಾರಣವೇನು?
ಮೃತ ವ್ಯಕ್ತಿ
Edited By:

Updated on: Nov 10, 2025 | 5:53 PM

ಬೆಂಗಳೂರು, ನವೆಂಬರ್​ 10: ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಜಿಗಿದು ವ್ಯಕ್ತಿಯೋರ್ವ (man) ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಪ್ರಸಂಜಿತ್ ದಾಸ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಸಂಜಿತ್ ದಾಸ್​​ ಗಾರೆ ಕೆಲಸ ಮಾಡಿಕೊಂಡಿದ್ದರು. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಾಗಿದೆ.

ಪ್ರಸಂಜಿತ್ ದಾಸ್​​ ತಮ್ಮ ಸ್ನೇಹಿತನೊಂದಿಗೆ ಆಟೋದಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋ ನಿಲ್ಲಿಸಲು ಹೇಳಿ ಫ್ಲೈ ಓವರ್ ಮೇಲಿಂದ ಹಾರಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆತ್ಮಹತ್ಯೆ ಬಗ್ಗೆ ನಿಖರ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾಸಲಾಗಿದೆ.

ನೇಣು ಬಿಗಿದುಕೊಂಡು 16 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣು

ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ನಡೆದಿದೆ. ಶರ್ಮಿಳಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಮೂವರು ಮಕ್ಕಳ ತಾಯಿಯ ಕಾಮದಾಹಕ್ಕೆ 5 ತಿಂಗಳ ಶಿಶು ಬಲಿ: ಸಲಿಂಗ ಕಾಮಕೇಳಿಗೆ ಅಡ್ಡಿಯೆಂದು ತಾನೇ ಹೆತ್ತ ಮಗುವನ್ನೇ ಕೊಂದ ಮಹಿಳೆ

ಪೋಷಕರು ತಮಿಳುನಾಡಿಗೆ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.

ಮಾರಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಬರ್ಬರ ಕೊಲೆ: ಇಬ್ಬರು ವಶಕ್ಕೆ 

ಶಿವಮೊಗ್ಗ ತಾಲೂಕಿನ ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಗಂಗಮ್ಮ(45) ಕೊಲೆಯಾದ ಮಹಿಳೆ.

ಇದನ್ನೂ ಓದಿ: ಪತ್ನಿ ಪಾಲಿಗೆ ಪ್ರೀತಿಸಿ ಮದುವೆಯಾದಾತನೇ ವಿಲನ್​: ಪತಿ ಅಟ್ಟಹಾಸಕ್ಕೆ 6 ತಿಂಗಳ ಭ್ರೂಣ ಸಾವು

ಹಳೇ ದ್ವೇಷದ ಹಿನ್ನೆಲೆ ಮಹಿಳೆಯನ್ನು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ನಾಗೇಶ ನಾಯ್ಕ್‌ ಹಾಗೂ ಹರೀಶ್‌ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದು, ತುಂಗಾನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.