AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹಾಡಹಗಲೇ ಲೇಡಿಸ್ ಪಿಜಿಗೆ ನುಗ್ಗಿದ ಖದೀಮ; ಚಾಕು ತೋರಿಸಿ ಮಹಿಳಾ ಅಧಿಕಾರಿ ಮೇಲೆ ಲೈಂಗಿಕ ದೌರ್ಜನ್ಯ

ಇತ್ತೀಚೆಗೆ ಬೆಂಗಳೂರಿನಲ್ಲಿ ಪಿಜಿ ಒಂದಕ್ಕೆ ವಿದ್ಯಾರ್ಥಿನಿ ಸೇರಿ ಕೇವಲ 10 ದಿನಲ್ಲಿ ಮಾಲೀಕನಿಂದಲೇ ಅತ್ಯಾಚಾರವೆಸಲಾಗಿತ್ತು. ಇದೀಗ ಮತ್ತೊಂದು ಘಟನೆ ನಡೆದಿದೆ. ಮಹಿಳಾ ಅಧಿಕಾರಿಗೆ ಚಾಕು ತೋರಿಸಿ ಬೆದರಿಸಿ ಲೈಂಗಿಕ ದೌರ್ಜನ್ಯವೆಸಗಿ ದರೋಡೆ ಮಾಡಿರುವಂತಹ ಕೃತ್ಯ ನಡೆದಿದೆ. ಸದ್ಯ ಯಲಹಂಕ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು: ಹಾಡಹಗಲೇ ಲೇಡಿಸ್ ಪಿಜಿಗೆ ನುಗ್ಗಿದ ಖದೀಮ; ಚಾಕು ತೋರಿಸಿ ಮಹಿಳಾ ಅಧಿಕಾರಿ ಮೇಲೆ ಲೈಂಗಿಕ ದೌರ್ಜನ್ಯ
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 13, 2025 | 12:34 PM

Share

ಬೆಂಗಳೂರು, ಆಗಸ್ಟ್​ 13: ದರೋಡೆಕೋರನೋರ್ವ ಮಹಿಳಾ ಅಧಿಕಾರಿ ಕುತ್ತಿಗೆಗೆ ಚಾಕು ಇಟ್ಟು ಹೆದರಿಸಿ ಲೈಂಗಿಕ ದೌರ್ಜನ್ಯವೆಸಗಿ (sexually assaulting) ಮೊಬೈಲ್​ ಕಿತ್ತುಕೊಂಡು ಪರಾರಿ ಆಗಿರುವಂತಹ ಘಟನೆ ಆಗಸ್ಟ್​ 11ರಂದು ಜುಡಿಷಿಯಲ್ ಲೇಔಟ್​ನ ಲೇಡಿಸ್ ಪಿಜಿಯೊಂದರಲ್ಲಿ (Ladies PG) ನಡೆದಿದೆ. ಸದ್ಯ ಘಟನೆ ಸಂಬಂಧ ಯಲಹಂಕ ಠಾಣೆಗೆ  ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ನಡೆದಿದ್ದೇನು?

ಬೆಸ್ಕಾಂನಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿರುವ ಮಹಿಳೆ ಜುಡಿಷಿಯಲ್ ಲೇಔಟ್​ನ ಶಿವಾಸ್ ಲೇಡಿಸ್ ಪಿಜಿಗೆ 15 ದಿನಗಳ ಹಿಂದಷ್ಟೇ ಸೇರಿಕೊಂಡಿದ್ದರು. ಆಗಸ್ಟ್​ 11ರಂದು ಮಧ್ಯಾಹ್ನ ಕೆಲಸ ಮುಗಿಸಿ ಪಿಜಿಯಲ್ಲಿನ 3ನೇ ಮಹಡಿಯಲ್ಲಿರುವ ತನ್ನ ರೂಮಿಗೆ ಬಂದಿದ್ದಾರೆ.

ಇದನ್ನೂ ಓದಿ: ಗಾಂಜಾ ನಶೆಯಲ್ಲೇ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ಬೆಂಗಳೂರು ಹೊರವಲಯದಲ್ಲಿ ಭೀಕರ ಕೃತ್ಯ

ಇದನ್ನೂ ಓದಿ
Image
ಮಂಗಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಪತಿ, ಕಾನ್ಸ್​ಟೇಬಲ್​ನ ಬಂಧನ​
Image
ಪೊಲೀಸರಿಗೆ ಸವಾಲಾದ ಬೆಂಗಳೂರಿನ ಲೈಂಗಿಕ ದೌರ್ಜನ್ಯ ಕೇಸ್: ಆರೋಪಿ ಸುಳಿವಿಲ್ಲ!
Image
ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ, ಕೃತ್ಯದ ವಿಡಿಯೋ ವೈರಲ್​
Image
ಜಾತ್ರೆಗೆ ಬಂದಿದ್ದ ದಲಿತ ಮಹಿಳೆ ಮೇಲೆ ಬಸ್​ನಲ್ಲಿ ಲೈಂಗಿಕ ದೌರ್ಜನ್ಯ ಯತ್ನ

ಈ ವೇಳೆ ಚಾಕು ಸಮೇತ ಏಕಾಏಕಿ ಬಂದ ಖದೀಮ, ಮಹಿಳೆಯ ರೂಮ್​​ ಡೋರ್ ಬಡೆದಿದ್ದಾನೆ. ಪಿಜಿಯವರು ಇರಬಹುದೆಂದು ಮಹಿಳೆ ಡೋರ್ ಓಪನ್ ಮಾಡಿದ್ದಾರೆ. ಕೂಡಲೇ ಮಹಿಳೆಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿದ್ದ ಖದೀಮ, ಖಾಸಗಿ ಅಂಗಾಂಗಗಳನ್ನು ಮುಟ್ಟಿ ದೌರ್ಜನ್ಯವೆಸಗಿ ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಳ್ಳಲು ಯತ್ನಿಸಿದ್ದಾನೆ.

ಬಳಿಕ ಬೆಡ್​ ಮೇಲಿದ್ದ 2 ಮೊಬೈಲ್​ಗಳು ತೆಗೆದುಕೊಂಡು ಪರಾರಿ ಆಗಿದ್ದಾನೆ. ಹಾಡಹಗಲೇ ಲೇಡಿಸ್ ಪಿಜಿಯಲ್ಲಿ ದರೋಡೆಕೋರ ಕೃತ್ಯ ಎಸಗಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಪಿಜಿ ಮಾಲೀಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಇನ್ನು ಇತ್ತೀಚೆಗೆ ನಗರದಲ್ಲಿ ಪಿಜಿ ಮಾಲೀಕನಿಂದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ ಮೇಲೆ  ಅತ್ಯಾಚಾರವೆಸಗಿರುವಂತಹ ಘಟನೆ ನಡೆದಿತ್ತು. ಸೋಲದೇವನಹಳ್ಳಿಯಲ್ಲಿರುವ ಲೇಡಿಸ್ ಪಿಜಿಗೆ ಕೆಲ ದಿನಗಳ ಹಿಂದಷ್ಟೇ ವಿದ್ಯಾರ್ಥಿನಿ ಸೇರಿಕೊಂಡಿದ್ದರು.

ಇದನ್ನೂ ಓದಿ: ಬೆಳಗಾವಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ವಿಡಿಯೋ ಮಾಡಿದ್ದ ಆರೋಪಿಗಳು ಅರೆಸ್ಟ್​

ಪಿಜಿ ಮಾಲೀಕ ಅಶ್ರಫ್​​ ಶನಿವಾರ ತಡರಾತ್ರಿ ಕಾರಿನಲ್ಲಿ ವಿದ್ಯಾರ್ಥಿನಿಯನ್ನು ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಅತ್ಯಾಚಾರವೆಸಗಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸದ್ಯ ಅಶ್ರಫ್​ನನ್ನು ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!