AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಪ್ರಿಯಕರನಿಂದಲೇ ನಡೀತು ಪತಿಯ ಕೊಲೆ! ಸ್ನೇಹಿತನಂತೆ ನಟಿಸಿದ ವ್ಯಕ್ತಿ ಕೊಲೆ ಮಾಡಿದ್ದು ಹೇಗೆ ಗೊತ್ತಾ?

ಬೆಂಗಳೂರಿನಲ್ಲಿ ನಡೆದ ಕ್ರೂರ ಹತ್ಯೆ ಪ್ರಕರಣದಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಪ್ರೇಮಿಯಿಂದ ಕೊಲ್ಲಲ್ಪಟ್ಟಿದ್ದಾರೆ. ಆರೋಪಿಯು ಮೃತನ ಹೆಂಡಿತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಆಕೆಯ ಪತಿಯೊಂದಿಗೆ ಸ್ನೇಹ ಬೆಳೆಸಿ, ಮದ್ಯಪಾನ ಮಾಡಿಸಿ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪತ್ನಿಯ ಪ್ರಿಯಕರನಿಂದಲೇ ನಡೀತು ಪತಿಯ ಕೊಲೆ! ಸ್ನೇಹಿತನಂತೆ ನಟಿಸಿದ ವ್ಯಕ್ತಿ ಕೊಲೆ ಮಾಡಿದ್ದು ಹೇಗೆ ಗೊತ್ತಾ?
ಪತ್ನಿಯ ಪ್ರಿಯಕರನಿಂದಲೇ ನಡೀತು ಪತಿಯ ಕೊಲೆ! ಸ್ನೇಹಿತನಂತೆ ನಟಿಸಿದ ವ್ಯಕ್ತಿ ಮಾಡಿದ್ದೇನು ಗೊತ್ತಾ? Image Credit source: onlinedegrees.kent.edu
ಭಾವನಾ ಹೆಗಡೆ
|

Updated on:Apr 08, 2026 | 11:45 AM

Share

ಬೆಂಗಳೂರು, ಏಪ್ರಿಲ್ 08: ಹೆಂಡತಿಯ ಅಕ್ರಮ ಸಂಬಂಧಕ್ಕೆ (Extramarital Affair) ಗಂಡ ಬಲಿಯಾದ ಘಟನೆ ಮಾರ್ಚ್ 26 ರಂದು ಬೊಮ್ಮಸಂದ್ರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪತ್ನಿಯ ಪ್ರಿಯಕರ ಆಕೆಯ ಪತಿಯೊಂದಿಗೆ ಸ್ನೇಹ ಬೆಳೆಸಿ, ಮಧ್ಯಪಾನ ಮಾಡಿಸಿ ಕೊನೆಗೆ ಚಾಕುವಿನಿಂದ ಕತ್ತು ಸೀಳಿ ಆತನ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮದ್ಯಪಾನ ಮಾಡಿಸಿ ಕತ್ತು ಸೀಳಿದ

ಮೃತ ವ್ಯಕ್ತಿಯನ್ನು 42 ವರ್ಷದ ಸುನಿಲ್ ನಾಯಕ್ ಎಂದು ಗುರುತಿಸಲಾಗಿದೆ. ಆರೋಪಿ ಬಸುದೇವ್ ಮಲಿಕ್ ಮತ್ತು ಸುನಿಲ್ ನಾಯಕ್ ಅವರ ಪತ್ನಿ ಪುಷ್ಪ ನಡುವೆ ಅಕ್ರಮ ಸಂಬಂಧವಿತ್ತು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮಲಿಕ್, ಸುನಿಲ್ ನಾಯಕ್ ಜೊತೆ ಸ್ನೇಹ ಬೆಳೆಸಿ, ಅವರೊಂದಿಗೆ ಮದ್ಯಪಾನ ಮಾಡುತ್ತಿದ್ದನು. ಬಳಿಕ ಸೂಕ್ತ ಸಂದರ್ಭ ನೋಡಿಕೊಂಡು ಸುನಿಲ್ ನಾಯಕ್ ಮೇಲೆ ದಾಳಿ ನಡೆಸಿ, ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ ಶರಣ್ಯ ಸಿಕ್ಕ ಬೆನ್ನಲ್ಲೇ ಮತ್ತೋರ್ವ ಬಾಲಕಿ ಕಾಣೆ: ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

ಆರೋಪಿಯ ಬಂಧನ

ಮಾರ್ಚ್ 26ರಂದು ಘಟನೆ ನಡೆದಿದ್ದು, ಮಾಲಿಕ್ ಚಾಕುವಿನಿಂದ ಸುನಿಲ್ ನಾಯಕ್ ಅವರ ಕತ್ತು ಕತ್ತರಿಸಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ, ಬೆಂಗಳೂರು ನಗರದ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಸಮೀಪದ ಬಾರ್ ಬಳಿ ಎಸೆದು ಪರಾರಿಯಾಗಿದ್ದಾನೆ. ಘಟನೆ ಬೆಳಕಿಗೆ ಬಂದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103(1) ಅಡಿಯಲ್ಲಿ ಹತ್ಯೆ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಹತ್ಯೆಗೆ ಬಳಸಿದ ಆಯುಧವನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿರುವ ಸಾಧ್ಯತೆ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:35 am, Wed, 8 April 26

Follow Us