ಕಾಲ್​​ ಗರ್ಲ್​ಗಾಗಿ ಕರೆ ಮಾಡಿ ಎಂದು ಫೇಸ್​​ಬುಕ್​ನಲ್ಲಿ ಪತ್ನಿಯ ಫೋಟೊ, ಮೊಬೈಲ್ ನಂಬರ್ ಪೋಸ್ಟ್ ಮಾಡಿದ ವ್ಯಕ್ತಿ!

2019ರಲ್ಲಿ ವಿವಾಹವಾಗಿದ್ದ ಈ ದಂಪತಿ ಒಂದು ವರ್ಷದಿಂದ ಬೇರೆ ಬೇರೆಯಾಗಿದ್ದಾರೆ. ಕಳೆದ ಒಂದು ವರ್ಷದಿಂದ ಪತಿಯು ದೈಹಿಕ ಮತ್ತು ಮಾನಸಿಕ ಹಿಂದು ನೀಡುತ್ತಿದ್ದುದರಿಂದ ಪತ್ನಿ ಆತನಿಂದ ದೂರವಾಗಿದ್ದಳು. ಇದನ್ನೇ ನೆಪ ಮಾಡಿಕೊಂಡಿದ್ದ ಆರೋಪಿ ಪತ್ನಿ ವಿರುದ್ಧ ಸೇಡು ತೀರಿಸಲು ಫೇಸ್​​ಬುಕ್ಕಿನಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.

ಕಾಲ್​​ ಗರ್ಲ್​ಗಾಗಿ ಕರೆ ಮಾಡಿ ಎಂದು ಫೇಸ್​​ಬುಕ್​ನಲ್ಲಿ ಪತ್ನಿಯ ಫೋಟೊ, ಮೊಬೈಲ್ ನಂಬರ್ ಪೋಸ್ಟ್ ಮಾಡಿದ ವ್ಯಕ್ತಿ!
ಸಾಂದರ್ಭಿಕ ಚಿತ್ರ
Edited By:

Updated on: Apr 11, 2024 | 10:13 AM

ಬೆಂಗಳೂರು, ಏಪ್ರಿಲ್ 11: ಕಾಲ್ ಗರ್ಲ್ ಬೇಕಿದ್ದರೆ ಕರೆ ಮಾಡಿ ಎಂದು ಪತ್ನಿಯ ಫೋಟೋ ಹಾಗೂ ದೂರವಾಣಿ ಸಂಖ್ಯೆಯಲ್ಲಿ ವ್ಯಕ್ತಿ ಒಬ್ಬ ಫೇಸ್ಬುಕ್​ನಲ್ಲಿ (Facebook) ಪೋಸ್ಟ್ ಮಾಡಿದ ವಿಲಕ್ಷಣ ವಿದ್ಯಮಾನ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಸದ್ಯ ಈ ಬಗ್ಗೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಂಪತ್ಯ ಕಲಹವೇ ಘಟನೆಗೆ ಮುಖ್ಯ ಕಾರಣ ಎಂಬುದು ಪ್ರಾಥಮಿಕ ಹಂತದ ತನಿಖೆ ಎಂದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂದಿನಿ ಲೇಔಟ್ ವ್ಯಾಪ್ತಿಯ ಸತ್ಯನಾರಾಯಣ ರೆಡ್ಡಿ ಮತ್ತು ಆತನ ಪತ್ನಿ ಮಧ್ಯೆ ದಾಂಪತ್ಯ ಕಲಹವಿತ್ತು. 2019ರಲ್ಲಿ ವಿವಾಹವಾಗಿದ್ದ ಈ ದಂಪತಿ ಒಂದು ವರ್ಷದಿಂದ ಬೇರೆ ಬೇರೆಯಾಗಿದ್ದಾರೆ. ಕಳೆದ ಒಂದು ವರ್ಷದಿಂದ ಪತಿಯು ದೈಹಿಕ ಮತ್ತು ಮಾನಸಿಕ ಹಿಂದು ನೀಡುತ್ತಿದ್ದುದರಿಂದ ಪತ್ನಿ ಆತನಿಂದ ದೂರವಾಗಿದ್ದಳು. ಇದನ್ನೇ ನೆಪ ಮಾಡಿಕೊಂಡಿದ್ದ ಆರೋಪಿ ಪತ್ನಿ ವಿರುದ್ಧ ಸೇಡು ತೀರಿಸಲು ಸಾಮಾಜಿಕ ಮಾಧ್ಯಮ ಫೇಸ್​​ಬುಕ್ಕಿನಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.

‘ಕಲಾ ಶಶಿ’ ಎಂದು ಫೇಸ್ಬುಕ್ ಪೇಜ್ ಕ್ರಿಯೇಟ್ ಮಾಡಿದ್ದ ಆರೋಪಿ ಅದರಲ್ಲಿ ಪತ್ನಿಯ ದೂರವಾಣಿ ಸಂಖ್ಯೆ, ಫೋಟೋ ಮತ್ತು ಆಕೆಯ ಸಹೋದರನ ಮೊಬೈಲ್ ಸಂಖ್ಯೆ ಕೂಡ ಪೋಸ್ಟ್ ಮಾಡಿದ್ದ. ಇಷ್ಟೇ ಅಲ್ಲದೆ, ಕಾಲ್ ಗರ್ಲ್ ಬೇಕಿದ್ದಲ್ಲಿ ಸಂಪರ್ಕಿಸಿ ಎಂದು ಪೋಸ್ಟ್ ಹಾಕಿದ್ದ. ಇದರಿಂದಾಗಿ ಸಂತ್ರಸ್ತೆ ಮತ್ತು ಆಕೆಯ ಸಹೋದರನಿಗೆ ಸಿಕ್ಕಾಪಟ್ಟೆ ಫೋನ್ ಕರೆಗಳು ಬರಲು ಆರಂಭವಾಗಿದ್ದವು.

ಇದನ್ನೂ ಓದಿ: ತುಮಕೂರು: ಡಾ. ಮಂಜುನಾಥ್​ ಪರ ಪ್ರಚಾರ ಮಾಡಿದ ವ್ಯಕ್ತಿ ಮೇಲೆ ಹಲ್ಲೆ

ಇದರಿಂದ ಬೇಸತ್ತ ಸಂತ್ರಸ್ತೆ ಮತ್ತು ಆಕೆಯ ಸಹೋದರ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಆಧಾರದಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:17 am, Thu, 11 April 24

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us