AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕೆಲಸದ ಆಮಿಷ ಒಡ್ಡಿ ಬೆಂಗಳೂರಿನ ವ್ಯಕ್ತಿಗೆ 26 ಲಕ್ಷ ರೂ. ವಂಚನೆ: ನಾಲ್ವರ ವಿರುದ್ಧ ಎಫ್‌ಐಆರ್!

ಗ್ರಾಮೀಣ ಅಭಿವೃದ್ಧಿ ಇಲಾಖೆಯಲ್ಲಿ ಪಿಡಿಒ ಹುದ್ದೆ ಕೊಡಿಸುವುದಾಗಿ ನಂಬಿಸಿ ಬೆಂಗಳೂರಿನ ಖಾಸಗಿ ಕಂಪನಿ ವ್ಯವಸ್ಥಾಪಕರೊಬ್ಬರಿಗೆ 26 ಲಕ್ಷ ರೂಪಾಯಿ ವಂಚಿಸಿರುವ ಘಟನೆ ನಡೆದಿದೆ. ಕೆಪಿಎಸ್‌ಸಿ ಹೆಸರಿನಲ್ಲಿ ನಕಲಿ ಕರೆಗಳನ್ನು ಮಾಡಿ ವಂಚಿಸಲಾಗಿದ್ದು, ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸಂತೋಷ್ ಹೊಸಮನಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸರ್ಕಾರಿ ಕೆಲಸದ ಆಮಿಷ ಒಡ್ಡಿ ಬೆಂಗಳೂರಿನ ವ್ಯಕ್ತಿಗೆ 26 ಲಕ್ಷ ರೂ. ವಂಚನೆ: ನಾಲ್ವರ ವಿರುದ್ಧ ಎಫ್‌ಐಆರ್!
ಸಾಂದರ್ಭಿಕ ಚಿತ್ರ Image Credit source: gettyimages.com
ಭಾವನಾ ಹೆಗಡೆ
|

Updated on: Jul 25, 2026 | 10:18 AM

Share

ಮುಖ್ಯಾಂಶಗಳು

  • PDO ಹುದ್ದೆ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಗೆ 26 ಲಕ್ಷ ರೂ. ವಂಚಿಸಲಾಗಿದೆ.
  • ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
  • KPSC ಲ್ಯಾಂಡ್‌ಲೈನ್‌ನಿಂದ ನಕಲಿ ಕರೆ ಮಾಡಿ ವಂಚಕರು ಜಾಲ ಬೀಸಿದ್ದರು.

ಬೆಂಗಳೂರು, ಜುಲೈ 25: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹುದ್ದೆ ಕೊಡಿಸುವುದಾಗಿ ನಂಬಿಸಿ ಖಾಸಗಿ ಕಂಪನಿಯ ಹಿರಿಯ ವ್ಯವಸ್ಥಾಪಕರೊಬ್ಬರಿಗೆ 26 ಲಕ್ಷ ರೂಪಾಯಿ ವಂಚಿಸಿರುವ ಜಾಲವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವೈಟ್‌ಫೀಲ್ಡ್‌ನ ಖಾಸಗಿ ಗೋಲ್ಡ್ ಫರ್ಮ್‌ನಲ್ಲಿ ಕೆಲಸ ಮಾಡುತ್ತಿರುವ ಜಿ.ಕೆ. ರಘುನಂದನ್ (36) ಎಂಬುವರೇ ಹಣ ಕಳೆದುಕೊಂಡ ಸಂತ್ರಸ್ತ. ಈ ಸಂಬಂಧ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸಂತೋಷ್ ಹೊಸಮನಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

50 ಲಕ್ಷಕ್ಕೆ ಡೀಲ್, 26 ಲಕ್ಷ ರೂ. ಅಡ್ವಾನ್ಸ್!

ಸಂತ್ರಸ್ತ ರಘುನಂದನ್ ಅವರಿಗೆ 2024 ರ ಡಿಸೆಂಬರ್‌ನಲ್ಲಿ ಸಂತೋಷ್ ಹೊಸಮನಿ ಎಂಬಾತನ ಪರಿಚಯವಾಗಿತ್ತು. ತಾನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಲ್ಲಿ (DPAR) ಕೆಲಸ ಮಾಡುತ್ತಿದ್ದು, ಕೆಪಿಎಸ್‌ಸಿ (KPSC) ಅಧಿಕಾರಿಗಳೊಂದಿಗೆ ಉತ್ತಮ ಸಂಪರ್ಕವಿದೆ ಎಂದು ಸಂತೋಷ್ ನಂಬಿಸಿದ್ದ. ಪಿಡಿಒ ಹುದ್ದೆ ಕೊಡಿಸಲು 50 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದ ಆರೋಪಿ, ಹಂತ ಹಂತವಾಗಿ ಒಟ್ಟು 26 ಲಕ್ಷ ರೂಪಾಯಿ ನಗದನ್ನು ಪಡೆದುಕೊಂಡಿದ್ದ.

ಕೆಪಿಎಸ್‌ಸಿ ಕಚೇರಿ ಲ್ಯಾಂಡ್‌ಲೈನ್‌ ಹೆಸರಿನಲ್ಲಿ ನಕಲಿ ಕರೆ!

ಹಣ ನೀಡಿದ ಮೇಲೂ ನೇಮಕಾತಿ ಆದೇಶ ಪತ್ರ ಬಾರದೇ ಇದ್ದಾಗ ರಘುನಂದನ್ ಆರೋಪಿಯನ್ನು ಪ್ರಶ್ನಿಸಲು ಆರಂಭಿಸಿದ್ದರು. ಈ ವೇಳೆ ಸಂಶಯ ಬಾರದಂತೆ ತಡೆಯಲು, ಕೆಪಿಎಸ್‌ಸಿ ಕಚೇರಿಯ ಲ್ಯಾಂಡ್‌ಲೈನ್ ಸಂಖ್ಯೆಗಳಿಂದ ‘ರಾವ್’ ಎಂಬ ವ್ಯಕ್ತಿ ರಘುನಂದನ್ ಅವರಿಗೆ ಕರೆ ಮಾಡಿ, “ನಿಮಗೆ ಪಿಡಿಒ ಕೆಲಸ ಖಚಿತವಾಗಿದೆ” ಎಂದು ಹಲವು ಬಾರಿ ಭರವಸೆ ನೀಡಿದ್ದ. ಆದರೆ, ದಿನಗಳು ಕಳೆದರೂ ನೇಮಕಾತಿ ಆದೇಶ ಸಿಗದೆ, ಆರೋಪಿ ಸಂತೋಷ್ ಕರೆಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದಾಗ ತಾನು ವಂಚನೆಗೆ ಒಳಗಾಗಿರುವುದು ರಘುನಂದನ್‌ಗೆ ಅರಿವಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ವಿಧಾನಸೌಧ ಠಾಣೆ ಪೊಲೀಸರು ಸಂತೋಷ್ ಹೊಸಮನಿ, ರಾವ್, ಮಹೇಶ್ ಕುಮಾರ್ ಮತ್ತು ಬಸವರಾಜ್ ಎಂಬ ನಾಲ್ವರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ