AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಂದ್​: ಮನೆಗೆ ಹೋಗಲು ವಾಹನ ಸಿಗದೆ 12 ಕಿಮೀ ನಡೆದುಕೊಂಡು ಹೋದ ವ್ಯಕ್ತಿ

ಬೆಂಗಳೂರು ಬಂದ್​ ದಿನ ನಗರಕ್ಕೆ ಆಗಮಿಸಿದ ವ್ಯಕ್ತಿಯೊಬ್ಬರು ತಮ್ಮ ಮನೆಗೆ ತೆರಳಲು ಯಾವುದೇ ವಾಹನ ಸಿಗದೇ 12 ಕಿ.ಮೀ ನಡೆದುಕೊಂಡು ಹೋಗಿದ್ದಾರೆ.

ಬೆಂಗಳೂರು ಬಂದ್​: ಮನೆಗೆ ಹೋಗಲು ವಾಹನ ಸಿಗದೆ 12 ಕಿಮೀ ನಡೆದುಕೊಂಡು ಹೋದ ವ್ಯಕ್ತಿ
ಬೆಂಗಳೂರು ಟ್ರಾಫಿಕ್​
TV9 Web
| Edited By: ವಿವೇಕ ಬಿರಾದಾರ|

Updated on:Sep 29, 2023 | 2:52 PM

Share

ಬೆಂಗಳೂರು ಸೆ.29: ತಮಿಳುನಾಡಿಗೆ ಕಾವೇರಿ ನೀರು (Cauvery Water Dispute) ಬಿಡುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಬುಧವಾರ ಬೆಂಗಳೂರು ಬಂದ್​​ಗೆ (Bengaluru Bandh) ಕರೆ ನೀಡಿದ್ದವು. ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಲ್ಲದೆ ಖಾಸಗಿ ವಾಹನ ಮತ್ತು ಸರ್ಕಾರಿ ಸಾರಿಗೆ ಬಸ್​​​ ವ್ಯವಸ್ತೆ ಇಲ್ಲದೆ ಜನರು ಪರದಾಡುವಂತಾಯಿತು. ಬಂದ್​ ದಿನ ಬೆಂಗಳೂರಿಗೆ ಬಂದ ವ್ಯಕ್ತಿಯೊಬ್ಬರು ತಮ್ಮ ಮನೆಗೆ ತೆರಳಲು ಯಾವುದೇ ವಾಹನ ಸಿಗದೇ 12 ಕಿ.ಮೀ ನಡೆದುಕೊಂಡು ಹೋಗಿದ್ದಾರೆ.

ಈ ಬಗ್ಗೆ ಓರ್ವ ವ್ಯಕ್ತಿ ತನ್ನ ಸ್ನೇಹಿತನ ಈ ಅನುಭವದ ಬಗ್ಗೆ ಎಕ್ಸ್​ (ಹಿಂದಿನ ಟ್ವಿಟರ್​​​) ನಲ್ಲಿ ಟ್ವೀಟ್​ ಮಾಡಿದ್ದಾರೆ. “ಯಾವುದೇ ಸಾರಿಗೆ ವ್ಯವಸ್ಥೆ ಸಿಗದೆ ನನ್ನ ಸ್ನೇಹಿತ ಸುಮಾರು 12 ಕಿಮೀ ನಡೆದುಕೊಂಡು ಹೋಗಿದ್ದಾರೆ. ಅವನಿಗೆ ಯಾವುದೇ ಕ್ಯಾಬ್‌ಗಳು, ಆಟೋಗಳು, ರಾಪಿಡೋ ಅಥವಾ ಯಾವುದೇ ವಾಹನ ಸಿಗಲಿಲ್ಲ” ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಸೆ.27ರ ಸಂಜೆ ನಾಲ್ಕು ಗಂಟೆಗೆ ಶಾಲೆ ಬಿಟ್ಟ ಮಕ್ಕಳು ಮನೆಗೆ ತಲುಪಿದ್ದು ರಾತ್ರಿ ಎಂಟಕ್ಕೆ !!

ಈ ಟ್ವೀಟ್​​ಗೆ ಹಲವರು ಪ್ರತಿಕ್ರಿಯೆ ನೀಡಿದ್ದು, ನಗರದಲ್ಲಿ ಉಂಟಾಗುತ್ತಿರುವ ಟ್ರಾಫಿಕ್​ ಜಾಮ್​ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅವರಿಗೆ 2 ದಿನಗಳ ಕಾಲ ವರ್ಕ್​​ಫ್ರಾಮ್​ ಹೋಮ್​​ ನೀಡುವುದು ಅಗತ್ಯವಿದೆ. ಮತ್ತೊಬ್ಬರು ಪ್ರತಿಕ್ರಿಯಿ “ನಿಮ್ಮ ಸ್ನೇಹಿತ ನಡೆಯುವಾಗಲೂ ಟ್ರಾಫಿಕ್ ಜಾಮ್​​ ಎದುರಿಸಿರಬೇಕು. ಏಕೆಂದರೆ ಸಾಮಾನ್ಯವಾಗಿ 12 ಕಿ.ಮೀ ದೂರ ನಡೆಯಲಿ 120-140 ಸಾಕು” ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:42 pm, Fri, 29 September 23

Follow Us
TV9 Web
TV9 Web

TV9 Kannada

Read More
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು