AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಂಗಳೂರು ನಡುವಿನ ರೈಲುಗಳ ಸಂಚಾರ ವ್ಯತ್ಯಯ: ಅಕ್ಟೋಬರ್ 3 ಮತ್ತು 4ರಂದು ವೇಳಾಪಟ್ಟಿ ಬದಲಾವಣೆ

ಕಾರ್ಯಾಚರಣೆಯ ತಾಂತ್ರಿಕ ಕಾರಣಗಳಿಂದಾಗಿ ಬೆಂಗಳೂರು ಹಾಗೂ ಮಂಗಳೂರು ನಡುವಿನ ರೈಲು ಸಂಚಾರದಲ್ಲಿ ಅಕ್ಟೋಬರ್ 3 ಮತ್ತು 4ರಂದು ವ್ಯತ್ಯಯವಾಗಲಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಯಶವಂತಪುರ-ಮಂಗಳೂರು ಎಕ್ಸ್‌‌ಪ್ರೆಸ್ 25 ನಿಮಿಷ ಹಾಗೂ ಮಂಗಳೂರು-ಯಶವಂತಪುರ ಎಕ್ಸ್‌ಪ್ರೆಸ್ 20 ನಿಮಿಷಗಳ ಕಾಲ ತಡವಾಗಿ ಚಲಿಸಲಿವೆ. ಪ್ರಯಾಣಿಕರು ವೇಳಾಪಟ್ಟಿ ಗಮನಿಸಲು ಕೋರಲಾಗಿದೆ.

ಬೆಂಗಳೂರು ಮಂಗಳೂರು ನಡುವಿನ ರೈಲುಗಳ ಸಂಚಾರ ವ್ಯತ್ಯಯ: ಅಕ್ಟೋಬರ್ 3 ಮತ್ತು 4ರಂದು ವೇಳಾಪಟ್ಟಿ ಬದಲಾವಣೆ
ಸಾಂದರ್ಭಿಕ ಚಿತ್ರ
ಭಾವನಾ ಹೆಗಡೆ
|

Updated on: Oct 03, 2026 | 2:14 PM

Share

ಮುಖ್ಯಾಂಶಗಳು

  • ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರದಲ್ಲಿ ಅಕ್ಟೋಬರ್ 3, 4ರಂದು ವ್ಯತ್ಯಯ.
  • ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ರೈಲು ಮಾರ್ಗಮಧ್ಯೆ 25 ನಿಮಿಷ ತಡ.
  • ಮಂಗಳೂರು ಜಂಕ್ಷನ್-ಯಶವಂತಪುರ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯಲ್ಲಿ 20 ನಿಮಿಷ ವ್ಯತ್ಯಾಸ.

ಮಂಗಳೂರು, ಅಕ್ಟೋಬರ್ 03: ಬೆಂಗಳೂರು ಹಾಗೂ ಮಂಗಳೂರು ನಡುವೆ ಸಂಚರಿಸುವ ಪ್ರಮುಖ ರೈಲುಗಳ ಸಂಚಾರದಲ್ಲಿ ಅಕ್ಟೋಬರ್ 3 ಮತ್ತು ಅಕ್ಟೋಬರ್ 4ರಂದು ಅಲ್ಪಾವಧಿಯ ವ್ಯತ್ಯಯ ಉಂಟಾಗಲಿದೆ ಎಂದು ನೈರುತ್ಯ ರೈಲ್ವೆ (SWR) ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಮಾರ್ಗಮಧ್ಯೆ ಕೈಗೊಳ್ಳಲಾಗುತ್ತಿರುವ ತಾಂತ್ರಿಕ ಹಾಗೂ ಕಾರ್ಯಚರಣೆಯ ಕಟ್ಟುಪಾಡುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ನಿಗದಿಗಿಂತ 25 ನಿಮಿಷಗಳ ಕಾಲ ಸಂಚಾರ ತಡ

ಇದರ ಪರಿಣಾಮವಾಗಿ, ಅಕ್ಟೋಬರ್ 3ರಂದು ಯಶವಂತಪುರ ರೈಲು ನಿಲ್ದಾಣದಿಂದ ಮಂಗಳೂರು ಜಂಕ್ಷನ್‌ಗೆ ಹೊರಡುವ ರೈಲು ಸಂಖ್ಯೆ 16539 ಯಶವಂತಪುರ – ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ (Yesvantpur-Mangaluru Junction Express) ಸೇವೆಯು ನಿಗದಿಗಿಂತ 25 ನಿಮಿಷಗಳ ಕಾಲ ತಡವಾಗಿ ಮಾರ್ಗಮಧ್ಯೆ ಸಂಚರಿಸಲಿದೆ.

ಭಾನುವಾರವೂ ಸಂಚಾರ ವ್ಯತ್ಯಯ

ಅದೇ ರೀತಿ, ಅಕ್ಟೋಬರ್ 4ರಂದು ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ಪ್ರಯಾಣ ಬೆಳೆಸಲಿರುವ ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್ – ಯಶವಂತಪುರ ಎಕ್ಸ್‌ಪ್ರೆಸ್ (Mangaluru Junction-Yesvantpur Express) ರೈಲಿನ ಸಂಚಾರದಲ್ಲಿಯೂ 20 ನಿಮಿಷಗಳ ಕಾಲ ಮಾರ್ಗಮಧ್ಯೆ ನಿಯಂತ್ರಣ ಇರಲಿದೆ.

ಈ ಮಾರ್ಗದಲ್ಲಿ ಪ್ರಯಾಣಿಸುವ ಸಾರ್ವಜನಿಕರು ಹಾಗೂ ಪ್ರಯಾಣಿಕರು ರೈಲುಗಳ ಈ ಪರಿಷ್ಕೃತ ಸಮಯ ಮತ್ತು ವ್ಯತ್ಯಯವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಯೋಜನೆ ಮಾಡಿಕೊಳ್ಳಬೇಕಾಗಿ ನೈರುತ್ಯ ರೈಲ್ವೆ ಅಧಿಕಾರಿಗಳು ವಿನಂತಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More