
ಮಂಗಳೂರು, ಅಕ್ಟೋಬರ್ 03: ಬೆಂಗಳೂರು ಹಾಗೂ ಮಂಗಳೂರು ನಡುವೆ ಸಂಚರಿಸುವ ಪ್ರಮುಖ ರೈಲುಗಳ ಸಂಚಾರದಲ್ಲಿ ಅಕ್ಟೋಬರ್ 3 ಮತ್ತು ಅಕ್ಟೋಬರ್ 4ರಂದು ಅಲ್ಪಾವಧಿಯ ವ್ಯತ್ಯಯ ಉಂಟಾಗಲಿದೆ ಎಂದು ನೈರುತ್ಯ ರೈಲ್ವೆ (SWR) ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಮಾರ್ಗಮಧ್ಯೆ ಕೈಗೊಳ್ಳಲಾಗುತ್ತಿರುವ ತಾಂತ್ರಿಕ ಹಾಗೂ ಕಾರ್ಯಚರಣೆಯ ಕಟ್ಟುಪಾಡುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇದರ ಪರಿಣಾಮವಾಗಿ, ಅಕ್ಟೋಬರ್ 3ರಂದು ಯಶವಂತಪುರ ರೈಲು ನಿಲ್ದಾಣದಿಂದ ಮಂಗಳೂರು ಜಂಕ್ಷನ್‌ಗೆ ಹೊರಡುವ ರೈಲು ಸಂಖ್ಯೆ 16539 ಯಶವಂತಪುರ – ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ (Yesvantpur-Mangaluru Junction Express) ಸೇವೆಯು ನಿಗದಿಗಿಂತ 25 ನಿಮಿಷಗಳ ಕಾಲ ತಡವಾಗಿ ಮಾರ್ಗಮಧ್ಯೆ ಸಂಚರಿಸಲಿದೆ.
ಅದೇ ರೀತಿ, ಅಕ್ಟೋಬರ್ 4ರಂದು ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ಪ್ರಯಾಣ ಬೆಳೆಸಲಿರುವ ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್ – ಯಶವಂತಪುರ ಎಕ್ಸ್‌ಪ್ರೆಸ್ (Mangaluru Junction-Yesvantpur Express) ರೈಲಿನ ಸಂಚಾರದಲ್ಲಿಯೂ 20 ನಿಮಿಷಗಳ ಕಾಲ ಮಾರ್ಗಮಧ್ಯೆ ನಿಯಂತ್ರಣ ಇರಲಿದೆ.
ಈ ಮಾರ್ಗದಲ್ಲಿ ಪ್ರಯಾಣಿಸುವ ಸಾರ್ವಜನಿಕರು ಹಾಗೂ ಪ್ರಯಾಣಿಕರು ರೈಲುಗಳ ಈ ಪರಿಷ್ಕೃತ ಸಮಯ ಮತ್ತು ವ್ಯತ್ಯಯವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಯೋಜನೆ ಮಾಡಿಕೊಳ್ಳಬೇಕಾಗಿ ನೈರುತ್ಯ ರೈಲ್ವೆ ಅಧಿಕಾರಿಗಳು ವಿನಂತಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ