ಬೆಂಗಳೂರಿನ ಫೈವ್, ತ್ರಿ ಸ್ಟಾರ್ ಹೋಟೆಲ್‌ಗಳ ಬಂಡವಾಳ ಬಯಲು: ಕೊಳೆತ ತರಕಾರಿ, ಅವಧಿ ಮೀರಿದ ಎಣ್ಣೆ-ಹಾಲು ಪತ್ತೆ
ಬೆಂಗಳೂರು ನಗರದಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ದಾಳಿ ಇಂದು ಕೂಡ ಮುಂದುವರಿದಿದೆ. ನಗರದಲ್ಲಿರುವ ಫೈವ್ ಹಾಗೂ 3 ಸ್ಟಾರ್ ಹೋಟೆಲ್‌ಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯಿಂದ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದು, ಹೋಟೆಲ್‌ಗಳ ಆಹಾರ ಸುರಕ್ಷತೆ ಮತ್ತು ಗುಣಮಟ್ಟ, ಅಡುಗೆಮನೆ, ಆಹಾರ ಸಂಗ್ರಹಣೆ ಮತ್ತು ನೈರ್ಮಲ್ಯ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು, (ಆಗಸ್ಟ್ 08): ಬೆಂಗಳೂರು ನಗರದಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ದಾಳಿ ಇಂದು ಕೂಡ ಮುಂದುವರಿದಿದೆ. ನಗರದಲ್ಲಿರುವ ಫೈವ್ ಹಾಗೂ 3 ಸ್ಟಾರ್ ಹೋಟೆಲ್‌ಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯಿಂದ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದು, ಹೋಟೆಲ್‌ಗಳ ಆಹಾರ ಸುರಕ್ಷತೆ ಮತ್ತು ಗುಣಮಟ್ಟ, ಅಡುಗೆಮನೆ, ಆಹಾರ ಸಂಗ್ರಹಣೆ ಮತ್ತು ನೈರ್ಮಲ್ಯ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 70 ಕೆ.ಜಿ. ಸೋಯಾ ಸಾಸ್ , ಅವಧಿ ಮೀರಿದ ಮೊಸರು, ವಿವಿಧ ಬಗೆಯ ಹಾಳಾದ ತರಕಾರಿಗಳು, 10 ಲೀಟರ್ ಅವಧಿ ಮೀರಿದ ಪಾನೀಯಗಳು ಪತ್ತೆಯಾಗಿದೆ. ಇನ್ನು 5 ಮಾಂಸದ ಮಾದರಿ ಹಾಗೂ 13 ಇತರೆ ಆಹಾರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.
ಕೆಲವು ಮಳಿಗೆಗಳಲ್ಲಿ ಆಹಾರವನ್ನು –18°Cಕ್ಕಿಂತ ಕಡಿಮೆ ತಾಪಮಾನದಲ್ಲಿ ಡೀಪ್ ಫ್ರೀಜಿಂಗ್ ಮಾಡಿರುವುದು ಕಂಡುಬಂದಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟಕ್ಕೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006 ಹಾಗೂ ನಿಯಮಗಳು, 2011ರ ಅನ್ವಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
