AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಜನರ ಹತ್ಯೆ ಕೇಸ್​​: ಈವರೆಗೆ ಐವರ ಮೃತದೇಹ ಪತ್ತೆ; ಉಳಿದ 2 ಶವಗಳಿಗಾಗಿ ಮುಂದುವರಿದ ಶೋಧ

ಬೆಂಗಳೂರಿನ 7 ಜನರ ಭೀಕರ ಕೊಲೆ ಪ್ರಕರಣದಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮತ್ತಿಬ್ಬರ ಶವ ಪತ್ತೆಯಾಗಿದ್ದು, ಒಟ್ಟು ಮೃತದೇಹಗಳ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಉಳಿದಿಬ್ಬರ ಶವಕ್ಕಾಗಿ ಶಿರಾಡಿ ಘಾಟ್‌ನಲ್ಲಿ ಶೋಧ ಮುಂದುವರಿದಿದೆ. ಮತ್ತೊಂದೆಡೆ ಆರೋಪಿಯ ವಿಚಾರಣೆಯೂ ತೀವ್ರಗೊಂಡಿದ್ದು, ಕೊಲೆ ಪ್ರಕರಣ ಸಂಬಂಧ ಇನ್ನಷ್ಟು ಮಾಹಿತಿಗಳು ಬಯಲಾಗಬೇಕಿವೆ.

7 ಜನರ ಹತ್ಯೆ ಕೇಸ್​​: ಈವರೆಗೆ ಐವರ ಮೃತದೇಹ ಪತ್ತೆ; ಉಳಿದ 2 ಶವಗಳಿಗಾಗಿ ಮುಂದುವರಿದ ಶೋಧ
ಆರೋಪಿ ಮತ್ತು ಮೃತರು
ವಿಕಾಸ್​ ಬಿಎಂ
| Edited By: |

Updated on: Nov 08, 2026 | 9:58 AM

Share

ಬೆಂಗಳೂರು, ನವೆಂಬರ್​​ 08: ಒಂದೇ ಕುಟುಂಬದ 7 ಜನರ ಬರ್ಬರ ಹತ್ಯೆ ಕೇಸ್ ಸಂಬಂಧ ರಾಜಾಜಿನಗರ ಪೊಲೀಸರು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮತ್ತೆರಡು ಮೃತದೇಹಗಳನ್ನು ಪತ್ತೆ ಹಚ್ಚಿದ್ದಾರೆ. ಪತ್ತೆಯಾಗಿರುವ ಮೃತದೇಹಗಳು ಶಿವಕುಮಾರ್ ಮತ್ತು ದಿವ್ಯಾ ದಂಪತಿಯದ್ದು ಎನ್ನಲಾಗಿದೆ. ಆರೋಪಿ ಇಂದುಶೇಖರ್​​ನನ್ನು ಕರೆದೊಯ್ದು ಶವ ಪತ್ತೆ ಮಾಡಲಾಗಿದ್ದು, ಕುಟುಂಬಸ್ಥರ ಸಮ್ಮುಖದಲ್ಲಿ ಮೃತದೇಹ ಹೊರತೆಗೆಯುವ ಕಾರ್ಯ ನಡೆದಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಪೊಲೀಸರು ಮೃತದೇಹವನ್ನು ಹಸ್ತಾಂತರಿಸಲಿದ್ದಾರೆ.

ಒಂದೇ ಕಡೆ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರಿಂದ ಸಿದ್ಧತೆ

ಪ್ರಕರಣ ಸಂಬಂಧ ಈವರೆಗೆ ಐವರ ಮೃತದೇಹಗಳು ಸಿಕ್ಕಂತಾಗಿದ್ದು, ಈ ಹಿಂದೆ 7 ವರ್ಷದ ಬಾಲಕ ಪುನೀತ್ ಮೃತದೇಹವು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದ ತಪ್ಪಲಿನಲ್ಲಿ ಪತ್ತೆಯಾಗಿತ್ತು. ನಂತರ ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರ ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆ ಬೆನ್ನಲ್ಲೇ ಸೇಲಂನಲ್ಲಿ ಸುನೀತಾ ಹಾಗೂ ರೂಪವತಿ ಮೃತದೇಹ ಕೂಡ ಸಿಕ್ಕಿತ್ತು. ಈಗ ಮತ್ತಿಬ್ಬರ ಶವಗಳು ಸಿಕ್ಕಿರುವ ಹಿನ್ನೆಲೆ ನಾಲ್ಕು ಮೃತದೇಹಗಳನ್ನ ಒಂದೇ ಕಡೆ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ. ಸದ್ಯ ಸೇಲಂನಲ್ಲಿ ಇಬ್ಬರ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದರೆ, ಶಿವಕುಮಾರ್ ಮತ್ತು ದಿವ್ಯಾ ದಂಪತಿಯ ಮೃತದೇಹಗಳ ಮರಣೋತ್ತರ ಪರೀಕ್ಷೆ ಮೈಸೂರಲ್ಲಿ ನಡೆಯಲಿದೆ .

ಇದನ್ನೂ ಓದಿ: 7 ಜನರ ಹತ್ಯೆ ಪ್ರಕರಣ: ಆರೋಪಿ ಇಂದುಶೇಖರ್ ಸಹೋದರನೂ ಬೆಂಗಳೂರಲ್ಲಿ ಡಬಲ್​​ ಮರ್ಡರ್​​ ಮಾಡಿ ಸೃಷ್ಟಿಸಿದ್ದ ಸಂಚಲನ!

ಶಂಕರ್ ಮತ್ತು ನಳಿನಿ ಶವಗಳಿಗಾಗಿ ಹುಡುಕಾಟ

ಮೃತಪಟ್ಟಿದ್ದ 7 ಜನರ ಪೈಕಿ ಶಂಕರ್ ಮತ್ತು ನಳಿನಿ ಶವಗಳು ಸಿಗಬೇಕಿದ್ದು, ಅವುಗಳಿಗಾಗಿ ಶೋಧ ಮುಂದುವರಿದಿದೆ. ಆರೋಪಿ ನೀಡಿರುವ ಮಾಹಿತಿ ಪ್ರಕಾರ ಇವರಿಬ್ಬರ ಮೃತದೇಹಗಳನ್ನು ಶಿರಾಡಿ ಘಾಟ್​ನಲ್ಲಿ ಬಿಸಾಡಲಾಗಿದೆ. ಹೀಗಾಗಿ ಇಂದುಶೇಖರ್​​ ನೀಡಿದ ಮಾಹಿತಿ ಆಧರಿಸಿ ಶವ ಬಿಸಾಡಿರುವ ಜಾಗದಲ್ಲಿ ಪೊಲೀಸರಿಂದ ಹುಡುಕಾಟ ನಡೆಸಲಾಗುತ್ತಿದೆ. ಮತ್ತೊಂದೆಡೆ ಆರೋಪಿಯ ವಿಚಾರಣೆಯೂ ತೀವ್ರಗೊಂಡಿದ್ದು, ಕೊಲೆ ಪ್ರಕರಣ ಸಂಬಂಧ ಇನ್ನಷ್ಟು ಮಾಹಿತಿಗಳು ಬಯಲಾಗಬೇಕಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ವಿಕಾಸ್​ ಬಿಎಂ
ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
ಆನೆ ದಂತ ಕಳ್ಳಸಾಗಣೆ: ತಮಿಳುನಾಡು ಮೂಲದ ಮೂವರು ಅರೆಸ್ಟ್
ಆನೆ ದಂತ ಕಳ್ಳಸಾಗಣೆ: ತಮಿಳುನಾಡು ಮೂಲದ ಮೂವರು ಅರೆಸ್ಟ್
ರಾಗಿಯಲ್ಲಿ ಕಲ್ಲು, ಮಣ್ಣು ಮಿಶ್ರಣ ಮಾಡ್ತಿದ್ದ ಘಟಕದ ಮೇಲೆ ದಾಳಿ
ರಾಗಿಯಲ್ಲಿ ಕಲ್ಲು, ಮಣ್ಣು ಮಿಶ್ರಣ ಮಾಡ್ತಿದ್ದ ಘಟಕದ ಮೇಲೆ ದಾಳಿ
ಬಿಗ್ ಬಾಸ್ ಮನೆಯಲ್ಲಿ ತಾಂಡವ್ ಡ್ಯಾನ್ಸ್; ಕ್ರೇಜಿಸ್ಟಾರ್ ಶೈಲಿಯಲ್ಲಿ ನೃತ್ಯ
ಬಿಗ್ ಬಾಸ್ ಮನೆಯಲ್ಲಿ ತಾಂಡವ್ ಡ್ಯಾನ್ಸ್; ಕ್ರೇಜಿಸ್ಟಾರ್ ಶೈಲಿಯಲ್ಲಿ ನೃತ್ಯ
ನವೆಂಬರ್ 30 ರಿಂದ ಡಿಸೆಂಬರ್ 6ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 30 ರಿಂದ ಡಿಸೆಂಬರ್ 6ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ರಾಶಿಯವರು ಹೊಸ ಸಂಬಂಧಗಳನ್ನು ಸ್ವಾಗತಿಸಿ
ಇಂದು ರಾಶಿಯವರು ಹೊಸ ಸಂಬಂಧಗಳನ್ನು ಸ್ವಾಗತಿಸಿ