ರಾಜಸ್ಥಾನದಿಂದ ತರಿಸಿದ್ದು ನಾಯಿ ಮಾಂಸ ನಾ? ಕುರಿ ಮಾಂಸ ನಾ? ಹೈದರಾಬಾದ್ ಲ್ಯಾಬ್ ವರದಿ ಇಲ್ಲಿದೆ

ರಾಜಸ್ಥಾನದಿಂದ ವ್ಯಾಪಾರಿ ಅಬ್ದುಲ್‌ ರಜಾಕ್‌ ತರಿಸುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸವೂ ಮಿಶ್ರಣವಾಗಿರುತ್ತದೆ ಎಂದು ಪುನೀತ್‌ ಕೆರೆಹಳ್ಳಿ ಸೇರಿ ಹಲವು ಆರೋಪಿಸಿದ್ದರು. ಹಾಗಾಗಿ, ಕೆಲ ಬಾಕ್ಸ್‌ಗಳಲ್ಲಿದ್ದ ಮಾಂಸದ ಸ್ಯಾಂಪಲ್‌ಅನ್ನು ಲ್ಯಾಬ್‌ಗೆ ಕಳುಹಿಸಲಾಗಿತ್ತು. ಈಗ ಅದರ ವರದಿ ಬಂದಿದೆ.

ರಾಜಸ್ಥಾನದಿಂದ ತರಿಸಿದ್ದು ನಾಯಿ ಮಾಂಸ ನಾ? ಕುರಿ ಮಾಂಸ ನಾ? ಹೈದರಾಬಾದ್ ಲ್ಯಾಬ್ ವರದಿ ಇಲ್ಲಿದೆ
Follow us
ರಮೇಶ್ ಬಿ. ಜವಳಗೇರಾ
|

Updated on:Aug 11, 2024 | 12:09 PM

ಬೆಂಗಳೂರು, (ಆಗಸ್ಟ್ 11): ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ ಪತ್ತೆಯಾಗಿರುವುದು ಕುರಿ ಮಾಂಸವೇ ಎಂದು ಈಗಾಗಲೇ ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್‌ ಹೇಳಿದ್ದಾರೆ. ಲ್ಯಾಬ್ ರಿಪೋರ್ಟ್‌ನಲ್ಲಿ ಇದು ಕುರಿ ಮಾಂಸ ಎಂದು ಸಾಬೀತಾಗಿದೆ ಎಂದು ಅವರು ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ಹೈದರಾಬಾದ್‌ ಲ್ಯಾಬ್‌ ವರದಿ ಕೂಡ ಬಂದಿದ್ದು, ಬಾಕ್ಸ್‌ನಲ್ಲಿದ್ದಿದ್ದು ಕುರಿ ಮಾಂಸವೇ ಎಂದು ಸ್ಪಷ್ಟಪಡಿಸಿದೆ. ಇದರೊಂದಿಗೆ ಅಲ್ಲಿಗೆ ನಾಯಿ ಮಾಂಸ ವಿವಾದವು ಸತ್ವ ಕಳೆದುಕೊಂಡಂತಾಗಿದೆ.

ರಾಜಸ್ಥಾನದಿಂದ ವ್ಯಾಪಾರಿ ಅಬ್ದುಲ್‌ ರಜಾಕ್‌ ತರಿಸುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸವೂ ಮಿಶ್ರಣವಾಗಿರುತ್ತದೆ ಎಂದು ಪುನೀತ್‌ ಕೆರೆಹಳ್ಳಿ ಸೇರಿ ಹಲವು ಆರೋಪಿಸಿದ್ದರು. ಹಾಗಾಗಿ, ಬಾಕ್ಸ್‌ನಲ್ಲಿದ್ದ ಮಾಂಸದ ಸ್ಯಾಂಪಲ್‌ಅನ್ನು ಹೈದರಾಬಾದ್‌ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಈಗ ಲ್ಯಾಬ್‌ ವರದಿ ಬಂದಿದ್ದು, ಅದು ಕುರಿ ಮಾಂಸವೇ ಎಂಬುದು ದೃಢವಾಗಿದೆ ಎಂದು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಆಗುತ್ತಿದೆಯಾ? ರಾಜಸ್ಥಾನದಿಂದ ಬಂದ ಮಾಂಸದ ಬಾಕ್ಸ್​ಗೆ ತಡೆ

ಹೈದರಾಬಾದ್ ವರದಿ ಬಗ್ಗೆ ಅಬ್ದುಲ್ ರಜಾಕ್ ಹೇಳುವುದೇನು?

ಇನ್ನು ಹೈದರಾಬಾದ್ ವರದಿ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಬ್ದುಲ್​ ರಜಾಕ್, ನಾವು ಯಾವುದೇ ರೀತಿಯ ಅಕ್ರಮ ವ್ಯವಹಾರ ಮಾಡಿಲ್ಲ. ಕಳೆದ ಹನ್ನೆರಡು ವರ್ಷದಿಂದ ಈ ವ್ಯವಹಾರ ಮಾಡ್ತಿದ್ದೀವಿ. ರೋಲ್ ಕಾಲ್ ಕೊಡಲ್ಲ ಅಂದಿದ್ದಕ್ಕೆ ಇಲ್ಲ ಸಲ್ಲದ ಆರೋಪ ಮಾಡಿದ್ರು. ಇವತ್ತು ರಿಪೋರ್ಟ್ ಬಂದಿದೆ, ಅದು ಕುರಿ ಮಾಂಸ ಅನ್ನೋದು ಗೊತ್ತಾಗಿದೆ. ಬಿಜೆಪಿಯವರು ಪುನೀತ್ ಕೆರೆಹಳ್ಳಿ ಸಪೋರ್ಟ್ ಗೆ ನಿಂತಿದ್ರು, ಈಗ ಆ ನಾಯಕರು ಏನ್ ಹೇಳುತ್ತಾರೆ ಎಂದು ಪ್ರಶ್ನಿಸಿದರು.

ಮಾಂಸಕ್ಕೆ ಯಾವುದೇ ರೀತಿಯ ಕೆಮಿಕಲ್ ಹಾಕುತ್ತಿಲ್ಲ. ಹಾಗೆ ಹಾಕಿದ್ರೆ ಯಾರು ತಗೋಳಲ್ಲ.. ರಾಜಸ್ಥಾನದ ಕುರಿ ಮಾಂಸಕ್ಕೆ ತುಂಬಾ ಬೇಡಿಕೆ ಇದೆ. ಹಾಗಾಗಿ ನಾವು ತರುತ್ತೇವೆ. ನನ್ನ ವಿರುದ್ಧ ಪಿತೂರಿ ನಡೆಸಿದವರ ವಿರುದ್ಧ ಸೋಮವಾರ ಕಮೀಷನರ್ ಗೆ ದೂರು ನೀಡುತ್ತೇನೆ. ನಾನು ಕಾಂಗ್ರೆಸ್ ಕಾರ್ಯಕರ್ತ ಅಲ್ಲ, ಜಸ್ಟ್ ಬೆಂಬಲಿಗ ಅಷ್ಟೇ. ಅಷ್ಟಕ್ಕೆ ನನ್ನ ಕಾಂಗ್ರೆಸಿಗ ಎಂದು ಸರ್ಕಾರದ ಹೆಸರು ಕೆಡಿಸುವುದಕ್ಕೆ ನೋಡುತ್ತಿದ್ದಾರೆ. ನನ್ನ ವಿರುದ್ದ ಯಾರ್ಯಾರು ಏನೇನ್ ಮಾಡಿದ್ರು ಎಂದು ಗೊತ್ತಿದೆ, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಸ್ಪಷ್ಟಪಡಿಸಿದರು.

ಜುಲೈ 26ರಂದು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ 86 ಬಾಕ್ಸ್‌ಗಳಷ್ಟು ರಾಜಸ್ಥಾನದಿಂದ ತರಿಸಿದ ಮಾಂಸದ ಬಾಕ್ಸ್‌ಗಳು ಪತ್ತೆಯಾಗಿದ್ದವು. ಇವುಗಳನ್ನು ಹೈದರಾಬಾದ್‌ನ ICAR ನ್ಯಾಷನಲ್ ಮೀಟ್ ರಿಸರ್ಚ್ ಇನ್ಸ್ಟಿಟ್ಯೂಟ್‌ನಲ್ಲಿ ಪರೀಕ್ಷೆ ಮಾಡಿಸಲಾಗಿದೆ. ಅದರಲ್ಲಿ S Ovis Aries ಎಂದು ಲ್ಯಾಬ್ ವರದಿಯಲ್ಲಿ ಬಂದಿದೆ. ಹಾಗೆಂದರೆ ಅದು ಕುರಿಯ ವೈಜ್ಞಾನಿಕ ಹೆಸರು. ಹೀಗಾಗಿ ಇದು ಕುರಿ ಮಾಂಸ ಎಂದು ಇಲಾಖೆ ಆಯುಕ್ತ ಶ್ರೀನಿವಾಸ್ ಅಧಿಕೃತವಾಗಿ ಹೇಳಿಕೆ ನೀಡಿದ್ದರು.

FSSAI ಗೈಡ್‌ಲೈನ್ಸ್ ಪ್ರಕಾರ ಉದ್ಯಮಿ ರಜಾಕ್ ಕೊಟ್ಟ ದಾಖಲೆ ಎಲ್ಲವೂ ಸರಿಯಾಗಿಯೇ ಇದೆ. ಪಶ್ಚಿಮ ಬಂಗಾಳ, ಗುಜರಾತ್, ರಾಜಸ್ಥಾನ ಸೇರಿದಂತೆ ಹಲವು ಕಡೆಯಿಂದ ನಗರಕ್ಕೆ ಮಾಂಸ ಆಮದಾಗುತ್ತಿದೆ. ಮೀನು, ಕುರಿ ಸೇರಿದಂತೆ ವಿವಿಧ ರೀತಿಯ ಮಾಂಸ ಆಮದಾಗುತ್ತಿದೆ. ಎಲ್ಲವನ್ನೂ ಆಹಾರ ಗುಣಮಟ್ಟ ಇಲಾಖೆ ಪರೀಕ್ಷೆ ಮಾಡಿದೆ. ಮುಂದೆಯೂ ಮಾಡುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:09 pm, Sun, 11 August 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್