ಬೆಂಗಳೂರು ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬೆಂಗಳೂರು ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರ ಏಕಾಏಕಿ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಎಂಸಿ ಹಾಸ್ಟೆಲ್​​ನಲ್ಲಿದ್ದ ಬೆಂಗಳೂರಲ್ಲಿ ಮೆಡಿಕಲ್ ಕಾಲೇಜು 47 ವಿದ್ಯಾರ್ಥಿನಿಯರು ದಿಢೀರ್ ಅಸ್ವಸ್ಥರಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರು ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಬೆಂಗಳೂರು ಮೆಡಿಕಲ್ ಕಾಲೇಜು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Apr 05, 2024 | 10:42 PM

ಬೆಂಗಳೂರು, (ಏಪ್ರಿಲ್ 05): ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ(Bangalore Medical College and Research Institute-BMCRI) ಹಾಸ್ಟೆಲ್‌ನ 47 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, 28 ವಿದ್ಯಾರ್ಥಿನಿಯರಿಗೆ ಟ್ರಾಮಾ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಐವರಿಗೆ ಹೆಚ್​​ ಬ್ಲಾಕ್ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.

ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ಎಲ್ಲ ವಿದ್ಯಾರ್ಥಿನಿಯರ ಆರೋಗ್ಯ ಉತ್ತಮವಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥಗೊಳ್ಳಲು ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಬಿಎಂಸಿಆರ್‌ಐ ಮುಖ್ಯಸ್ಥ ಮತ್ತು ನಿರ್ದೇಶಕ ಡಾ.ರಮೇಶ್‌ ಕೃಷ್ಣ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಲರಾ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಹೆಚ್ಚು ತಾಪಮಾನ ನಡುವೆ ಬೆಂಗಳೂರಿನಲ್ಲಿ ಕಾಲರಾ ಭೀತಿ ಶುರುವಾಗಿದೆ. ಇದರ ಮಧ್ಯೆ ಏಕಾಏಕಿ ಬೆಂಗಳೂರು ಮೆಡಿಕಲ್‌ ಕಾಲೇಜಿನ ಹಾಸ್ಟೆಲ್​ ವಿದ್ಯಾರ್ಥಿನಿಯರು ಏಕಾಏಕಿ ವಾಂತಿ-ಭೇದಿಯಿಂದಾಗಿ ಅಸ್ವಸ್ಥಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲರಾ ಶಂಕೆ ವ್ಯಕ್ತವಾಗಿದೆ. ಇದರಿಂದ ಆರೋಗ್ಯ ಇಲಾಖೆಗೆ ಟೆನ್ಷನ್ ಶುರುವಾಗಿದೆ.

ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಲು ಕಾರಣವೇನು? ನೀರಿನಲ್ಲಿ ಏನಾದರೂ ಹೆಚ್ಚು ಕಡಿಮೆಯಾಗಿದ್ಯಾ? ಅಥವಾ ಊಟದಲ್ಲಿ ಏನಾದರೂ ಸಮಸ್ಯೆಯಾಗಿದ್ಯಾ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.