AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತಾಂತ್ರಿಕ ದೋಷದಿಂದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ ಬಂದ್ ಆಗಿ ಪ್ರಯಾಣಿಕರ ಪರದಾಟ

Bengaluru Metro Alert: ವಿದ್ಯುತ್ ವ್ಯತ್ಯಯದ ಕಾರಣ ಬೆಂಗಳೂರಿನ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು ಸೋಮವಾರ ಬೆಳಗ್ಗೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಮೆಟ್ರೋ ರೈಲುಗಳು ಈ ನಿಲ್ದಾಣದಲ್ಲಿ ನಿಲುಗಡೆ ನೀಡುವುದಿಲ್ಲ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಈ ನಿಲ್ದಾಣದಲ್ಲಿ ಇಳಿಬೇಕಿರುವ ಪ್ರಯಾಣಿಕರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಬಿಎಂಆರ್​ಸಿಎಲ್ ಸೂಚಿಸಿದೆ.

ಬೆಂಗಳೂರು: ತಾಂತ್ರಿಕ ದೋಷದಿಂದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ ಬಂದ್ ಆಗಿ ಪ್ರಯಾಣಿಕರ ಪರದಾಟ
ನಮ್ಮ ಮೆಟ್ರೋ ರೈಲು (ಸಾಂದರ್ಭಿಕ ಚಿತ್ರ)Image Credit source: tv9
ಗಣಪತಿ ಶರ್ಮಾ
| Edited By: |

Updated on:May 04, 2026 | 2:23 PM

Share

ಬೆಂಗಳೂರು, ಮೇ 4: ನಮ್ಮ ಮೆಟ್ರೋ (Namma Metro) ನೇರಳೆ ಮಾರ್ಗದಲ್ಲಿರುವ ಪ್ರಮುಖ ನಿಲ್ದಾಣಗಳಲ್ಲಿ ಒಂದಾದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು (Cubbon Park Metro Station) ಸೋಮವಾರ ಬೆಳಿಗ್ಗೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಬಿಎಂಆರ್‌ಸಿಎಲ್ (BMRCL) ತಿಳಿಸಿತ್ತು ವಿದ್ಯುತ್ ವ್ಯತ್ಯಯದಿಂದಾಗಿ ಮೆಟ್ರೋ ನಿಲ್ದಾಣದ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿತ್ತು. ಇದೀಗ ಬೆಳಗ್ಗೆ 11 ಗಂಟೆಯಿಂದ ಮೆಟ್ರೋ ಸೇವೆಗಳು ಪುರರಾರಂಭಗೊಂಡಿವೆ ಎಂದು ಸಂಸ್ಥೆ ತಿಳಿಸಿದೆ.

ಪ್ರಯಾಣಿಕರಿಗೆ ಸೂಚನೆ

ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ, ರೈಲುಗಳು ಸದ್ಯಕ್ಕೆ ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ನಿಲ್ಲುವುದಿಲ್ಲ. ಹೀಗಾಗಿ, ಪ್ರಯಾಣಿಕರು ತಮ್ಮ ಪ್ರಯಾಣವನ್ನು ಅದಕ್ಕೆ ತಕ್ಕಂತೆ ಯೋಜಿಸಿಕೊಳ್ಳಬೇಕು ಎಂದು ಬಿಎಂಆರ್‌ಸಿಎಲ್ ತನ್ನ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯ ಮೂಲಕ ಮಾಹಿತಿ ನೀಡಿತ್ತು.

ಬಿಎಂಆರ್​ಸಿಎಲ್ ಎಕ್ಸ್ ಸಂದೇಶ

ವಾರದ ಮೊದಲ ದಿನವೇ ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ರೈಲು ನಿಲುಗಡೆ ಸ್ಥಗಿತಗೊಂಡಿರುವುದು ಕಚೇರಿಗೆ ತೆರಳುವ ಉದ್ಯೋಗಿಗಳು ಮತ್ತು ಸಾರ್ವಜನಿಕರಿಗೆ ಸ್ವಲ್ಪ ಮಟ್ಟಿನ ಅನಾನುಕೂಲತೆಯನ್ನುಂಟು ಮಾಡಿದೆ. ಈ ಅನಿವಾರ್ಯ ತೊಂದರೆಗೆ ಬಿಎಂಆರ್‌ಸಿಎಲ್ ವಿಷಾದ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ: ಕಣ್ಣೀರು ತರಿಸುತ್ತೆ ಈ  ಮೌನ ಹೋರಾಟಗಾರನ ಕಥೆ!

ಮೆಟ್ರೋ ಸೇವೆ ಪುನರಾರಂಭ

ಬೆಳಗ್ಗೆಯಿಂದಲೂ ಬಂದಾಗಿದ್ದ  ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಾಮಾನ್ಯ ಸೇವೆಗಳು ಬೆಳಿಗ್ಗೆ 11.00ಗಂಟೆಯಿಂದ ಪುನಃ ಪ್ರಾರಂಭಗೊಂಡಿವೆ ಮತ್ತು ನಿಲ್ದಾಣವನ್ನು ಸಾರ್ವಜನಿಕರ ಓಡಾಟಕ್ಕೆ ತೆರೆಯಲಾಗಿದೆ ಎಂದು ಸಂಸ್ಥೆ  ಈಗ ಟ್ವೀಟ್ ಮಾಡಿದ್ದು, ಸಾರ್ವಜನಿಕರ ಗಮನಕ್ಕೆ ತಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:28 am, Mon, 4 May 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?