AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಕಾಲ ನಿಂತಲ್ಲೇ ನಿಂತ ಮೆಟ್ರೋ ರೈಲು: ಪರ್ಪಲ್ ಲೈನ್​ನಲ್ಲಿ ಸಂಚಾರ ವಿಳಂಬ

ಬೆಂಗಳೂರಿನ ನಮ್ಮ ಮೆಟ್ರೋ ಪರ್ಪಲ್ ಲೈನ್‌ನಲ್ಲಿ ಶುಕ್ರವಾರ ಬೆಳಗ್ಗೆ ಸಂಚಾರ ವಿಳಂಬವಾಗಿದೆ. ಚಲ್ಲಘಟ್ಟದಿಂದ ವೈಟ್‌ಫೀಲ್ಡ್‌ಗೆ ತೆರಳುತ್ತಿದ್ದ ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ ಸುಮಾರು 10 ನಿಮಿಷ ನಿಂತಿತ್ತು. ಇದರಿಂದಾಗಿ ಪ್ರಯಾಣ ವಿಳಂಬವಾಯಿತು. ಪೀಕ್ ಅವರ್‌ನಲ್ಲಿ ರೈಲು ವಿಳಂಬವಾದ ಕಾರಣ ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿತ್ತು.

ಕೆಲಕಾಲ ನಿಂತಲ್ಲೇ ನಿಂತ ಮೆಟ್ರೋ ರೈಲು: ಪರ್ಪಲ್ ಲೈನ್​ನಲ್ಲಿ ಸಂಚಾರ ವಿಳಂಬ
ಪರ್ಪಲ್ ಲೈನ್​ ಮೆಟ್ರೋImage Credit source: BMRCL
ಗಣಪತಿ ಶರ್ಮಾ
|

Updated on:Oct 30, 2026 | 11:46 AM

Share

ಬೆಂಗಳೂರು, ಅಕ್ಟೋಬರ್ 30: ನಮ್ಮ ಮೆಟ್ರೋ ರೈಲುಗಳು ಪದೇ ಪದೇ ಕೆಟ್ಟು ನಿಲ್ಲುತ್ತಿರುವ ಮತ್ತು ತಾಂತ್ರಿಕ ದೋಷದಿಂದ ಪ್ರಯಾಣ ವಿಳಂಬವಾಗುತ್ತಿರುವ ಪ್ರಕರಣಗಳು ಹೆಚ್ಚಿರುವ ಸಂದರ್ಭದಲ್ಲೇ ಮತ್ತೊಂದು ಅಂತಹ ಘಟನೆ ವರದಿಯಾಗಿದೆ. ಪರ್ಪಲ್ ಲೈನ್ ಮೆಟ್ರೋ ರೈಲು ಶುಕ್ರವಾರ ಬೆಳಗಿನ ಜಾವ 9:30 ರ ಸುಮಾರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ ಸುಮಾರು 10 ನಿಮಿಷ ಕಾಲ ನಿಂತಲ್ಲೇ ನಿಂತಿದೆ. ತಾಂತ್ರಿಕ ಕಾರಣಗಳಿಂದ ಪ್ರಯಾಣ ವಿಳಂಬವಾಗುತ್ತಿದೆ. ಅಡಚಣೆಗಾಗಿ ವಿಷಾದಿಸುತ್ತಿದ್ದೇವೆ ಎಂದು ರೈಲಿನಲ್ಲಿ ಅನೌನ್ಸ್ಮೆಂಟ್ ಮಾಡಿರುವುದಾಗಿ ಪ್ರಯಾಣಿಕರು ತಿಳಿಸಿದ್ದಾರೆ. ಈ ಕುರಿತು ಬಿಎಂಆರ್​ಸಿಎಲ್ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ರೈಲು ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಆಗಿದೆ ಎಂದಿದೆ.

ಪ್ರಯಾಣಿಕರೊಬ್ಬರು ಹಳಿಗೆ ಇಳಿದಿದ್ದೇ ಕಾರಣ!

ಬೆಳಗ್ಗೆ ಸುಮಾರು 09:22ಕ್ಕೆ ಇಂದಿರಾನಗರ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಹಳಿಗೆ ಇಳಿದ ಪರಿಣಾಮ, ತುರ್ತು ಟ್ರಿಪ್ ವ್ಯವಸ್ಥೆ (ETS) ಮತ್ತು ತುರ್ತು ನಿಲುಗಡೆ ಬಟನ್ (ESP) ಸಕ್ರಿಯಗೊಂಡವು. ಬಳಿಕ ಪ್ರಯಾಣಿಕನನ್ನು ರಕ್ಷಿಸಲಾಯಿತು. ಈ ಘಟನೆಯಿಂದಾಗಿ ನೇರಳೆ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವಿಳಂಬವಾಯಿತು. ಅಲ್ಲದೆ, ಕೆಂಪೇಗೌಡ ಮೆಜೆಸ್ಟಿಕ್ ಇಂಟರ್‌ಚೇಂಜ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ತಪ್ಪಿಸುವ ಸಲುವಾಗಿ ಹಸಿರು ಮಾರ್ಗದಲ್ಲಿಯೂ ಕೆಲವು ರೈಲುಗಳ ಸಂಚಾರವನ್ನು ನಿಯಂತ್ರಿಸಲಾಯಿತು ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ಚಲ್ಲಘಟ್ಟದಿಂದ ವೈಟ್​ಫೀಲ್ಡ್ ಕಡೆಗೆ ಸಂಚರಿಸುತ್ತಿದ್ದ ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ ನಿಂತಿದ್ದು, ಸುಮಾರು 10 ನಿಮಿಷಗಳ ನಂತರ ಹೊರಟಿದೆ. ಪೀಕ್ ಅವರ್​​ನಲ್ಲೇ ರೈಲು ವಿಳಂಬವಾದ ಕಾರಣ ಮೆಜೆಸ್ಟಿಕ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಅತಿಯಾಗಿತ್ತು. ನೂಕುನುಗ್ಗಲಿನ ಪರಿಸ್ಥಿತಿ ಉಂಟಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ವಿಳಂಬವಾಗಿ ಗಮ್ಯ ತಲುಪಿದ ಪ್ರಯಾಣಿಕರು

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಹೊರಟ ಬಳಿಕವೂ ಪ್ರತಿ ನಿಲ್ದಾಣದಲ್ಲಿ ನಿಲ್ಲುವ ಅವಧಿ ಹೆಚ್ಚಾಗಿತ್ತು. ಇದರಿಂದಾಗಿ ಗಮ್ಯ ತಲುಪುವುದು ಸುಮಾರು 20 ರಿಂದ 25 ನಿಮಿಷ ತಡವಾಯಿತು ಎಂದು ಪ್ರಯಾಣಿಕರು ತಿಳಿಸಿದ್ದಾರೆ.

ನಮ್ಮ ಮೆಟ್ರೋ ರೈಲು ಕೆಟ್ಟು ನಿಂತ ಇತ್ತೀಚಿನ ಟೈಮ್​ಲೈನ್

  • ಜೂನ್ 23, 2026: ಪರ್ಪಲ್ ಲೈನ್‌ನ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ರೈಲಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಸಂಜೆ ಪೀಕ್ ಅವರ್‌ನಲ್ಲಿ ಘಟನೆ ನಡೆದಿದ್ದು, ಅಂಡರ್‌ಗ್ರೌಂಡ್ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಸಾವಿರಾರು ಪ್ರಯಾಣಿಕರು ಪರದಾಡಿದ್ದರು. ಮಾಗಡಿ ರಸ್ತೆ–ಚಲ್ಲಘಟ್ಟ ಮತ್ತು ಇಂದಿರಾನಗರ–ವೈಟ್‌ಫೀಲ್ಡ್ ನಡುವೆ ಸೀಮಿತ ಸಂಚಾರ ವ್ಯವಸ್ಥೆ ಮಾಡಲಾಗಿತ್ತು. ರೈಲಿಗೆ ವಿದ್ಯುತ್ ಪೂರೈಸುವ ಡಿವೈಸ್​ಗೆ ಹಾನಿಯಾಗಿದ್ದೇ ಸಮಸ್ಯೆಗೆ ಕಾರಣ ಎನ್ನಲಾಗಿತ್ತು.
  • ಜುಲೈ 22, 2026: ಬೆಳಗ್ಗೆ ಸುಮಾರು 8 ಗಂಟೆಗೆ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯಾಗಿ ಯಲಹಂಕದತ್ತ ಸಾಗುವ ಗ್ರೀನ್ ಲೈನ್‌ನ ಯಲಹಂಕ–ಮಾದಾವರ ನಡುವಿನ ಸಂಚಾರ ಸ್ಥಗಿತಗೊಂಡಿತ್ತು. ಗೊರಗುಂಟೆಪಾಳ್ಯದಿಂದ ಮಾದಾವರದವರೆಗಿನ ಒಂಬತ್ತು ನಿಲ್ದಾಣಗಳ ಪ್ರಯಾಣಿಕರಿಗೆ ತೊಂದರೆಯಾಗಿತ್ತು. ಸುಮಾರು 8.45ಕ್ಕೆ ವಿದ್ಯುತ್ ಪೂರೈಕೆ ಮರುಸ್ಥಾಪನೆಯಾದ ಬಳಿಕ ಸಂಚಾರ ಸಹಜ ಸ್ಥಿತಿಗೆ ಮರಳಿತ್ತು.
  • ಮೇ 4, 2026: ವಿದ್ಯುತ್ ವ್ಯತ್ಯಯದಿಂದ ಕಬ್ಬನ್ ಪಾರ್ಕ್ ಅಂಡರ್‌ಗ್ರೌಂಡ್ ಮೆಟ್ರೋ ನಿಲ್ದಾಣದಲ್ಲಿ ಬೆಳಕಿನ ವ್ಯವಸ್ಥೆ ಸ್ಥಗಿತಗೊಂಡಿತ್ತು. ಸುರಕ್ಷತೆಯ ದೃಷ್ಟಿಯಿಂದ ಬೆಳಗ್ಗೆ 7ರಿಂದ 11ರವರೆಗೆ ರೈಲುಗಳು ಈ ನಿಲ್ದಾಣದಲ್ಲಿ ನಿಲುಗಡೆ ನೀಡಿರಲಿಲ್ಲ. ಪರ್ಪಲ್ ಲೈನ್‌ನಲ್ಲಿ ರೈಲು ಸಂಚಾರ ಮುಂದುವರಿದಿದ್ದರೂ, ಕಬ್ಬನ್ ಪಾರ್ಕ್ ನಿಲ್ದಾಣವನ್ನು ಪ್ರಯಾಣಿಕರು ಬಳಸಲು ಸಾಧ್ಯವಾಗಿರಲಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 am, Fri, 30 October 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಚಿಕ್ಕಮಗಳೂರು: ನಕಲಿ ಜೇನುತುಪ್ಪ ತಯಾರಿಸುತ್ತಿದ್ದ ಅಸ್ಸಾಂ ಗ್ಯಾಂಗ್ ಲಾಕ್
ಚಿಕ್ಕಮಗಳೂರು: ನಕಲಿ ಜೇನುತುಪ್ಪ ತಯಾರಿಸುತ್ತಿದ್ದ ಅಸ್ಸಾಂ ಗ್ಯಾಂಗ್ ಲಾಕ್
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!