AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ 6 ಮೆಟ್ರೋ ನಿಲ್ದಾಣಗಳಲ್ಲಿ ಎಐ ಆಧಾರಿತ ಸಿಸಿಟಿವಿ ಕಣ್ಗಾವಲು

ಬೆಂಗಳೂರು ಮೆಟ್ರೋ ರೈಲು ನಿಗಮ ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರೋಡ್ ನಡುವಿನ ಆರು ಮೆಟ್ರೋ ನಿಲ್ದಾಣಗಳಲ್ಲಿ ಸುಧಾರಿತ ಸಿಸಿಟಿವಿ ಮತ್ತು AI ತಂತ್ರಜ್ಞಾನವನ್ನು ಅಳವಡಿಸಿದೆ. ಇದು ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ಮತ್ತು ಅಪಾಯಗಳನ್ನು ತಕ್ಷಣ ಗುರುತಿಸಲು ಸಹಾಯ ಮಾಡಲಿದೆ. ANPR ತಂತ್ರಜ್ಞಾನದಿಂದ ವಾಹನಗಳ ಸಂಖ್ಯಾ ಫಲಕಗಳನ್ನು ಗುರುತಿಸಲಿದೆ.

ಬೆಂಗಳೂರಿನ 6 ಮೆಟ್ರೋ ನಿಲ್ದಾಣಗಳಲ್ಲಿ ಎಐ ಆಧಾರಿತ ಸಿಸಿಟಿವಿ ಕಣ್ಗಾವಲು
ಎಐ ಆಧಾರಿತ ಸಿಸಿಟಿವಿ
ಗಂಗಾಧರ​ ಬ. ಸಾಬೋಜಿ
|

Updated on: May 09, 2025 | 11:14 AM

Share

ಬೆಂಗಳೂರು, ಮೇ 09: ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಬೈಯಪ್ಪನಹಳ್ಳಿ ಮತ್ತು ಎಂಜಿ ರಸ್ತೆ ನಡುವಿನ ಆರೂ ಮೆಟ್ರೋ ನಿಲ್ದಾಣಗಳಲ್ಲಿ (Namma Metro) ಸುಧಾರಿತ ಸಿಸಿಟಿವಿ ನಿಗಾ ವ್ಯವಸ್ಥೆ ಮತ್ತು ಎಐ ತಂತ್ರಜ್ಞಾನವನ್ನು ಒಳವಡಿಸಲಾಗಿದೆ. ನಿನ್ನೆಯಷ್ಟೇ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಹತ್ತು ನೂತನ ಕ್ಯೂ.ಆರ್ ಟಿಕೆಟ್ ಯಂತ್ರಗಳನ್ನು ಕೂಡ ಒಳವಡಿಸಲಾಗಿದೆ.

ಆರು ಮೆಟ್ರೋ ನಿಲ್ದಾಣಗಳಲ್ಲಿ ಸುಧಾರಿತ ಸಿಸಿಟಿವಿ ವ್ಯವಸ್ಥೆ

ಈ ಬಗ್ಗೆ ಬಿಎಂಆರ್​ಸಿಎಲ್​ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆಯ ನಡುವಿನ ಆರು ಮೆಟ್ರೋ ನಿಲ್ದಾಣಗಳಲ್ಲಿ ಸುಧಾರಿತ ಸಿಸಿಟಿವಿ ವ್ಯವಸ್ಥೆ ಅಳವಡಿಸಿದೆ. ಇದು ನಿಲ್ದಾಣದ ಒಳಗಿನ ಭಾಗಗಳ ಜೊತೆಗೆ ಸುತ್ತಲಿನ ಪ್ರದೇಶಗಳನ್ನೂ ಗಮನಿಸುತ್ತಿದ್ದು, ಕೃತಕಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಅಪಾಯಗಳನ್ನು ತಕ್ಷಣ ಗುರುತಿಸಿ, ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ನೆರವಾಗುತ್ತದೆ ಎಂದು ತಿಳಿಸಿದೆ.

ಇದನ್ನೂ ಓದಿ
Image
ಬೆಂಗಳೂರು ಮೆಟ್ರೋ ನಿಲ್ದಾಣದ ಆವರಣದಲ್ಲಿ ಉಗುಳಿದ ಪ್ರಯಾಣಿಕನಿಗೆ ದಂಡ
Image
ಯೆಲ್ಲೋ ಲೈನ್ ಬಗ್ಗೆ ಮಹತ್ವದ ಅಪ್​ಡೇಟ್, ಬೆಂಗಳೂರಿನತ್ತ 3ನೇ ಚಾಲಕರಹಿತ ರೈಲು
Image
ಬೆಂಗಳೂರು ಮೆಟ್ರೋ ಹಳದಿ ಮಾರ್ಗ: ಮೂರು ಹೆಚ್ಚುವರಿ ಹೊಸ ಬೋಗಿಗಳ ರವಾನೆ
Image
ಪ್ರಯಾಣಿಕರ ಗಮನಕ್ಕೆ: ಭಾನುವಾರದಂದು ನಮ್ಮ ಮೆಟ್ರೋ ನಸುಕಿನಿಂದಲೇ ಆರಂಭ

ಬಿಎಂಆರ್​ಸಿಎಲ್​ ಟ್ವೀಟ್​​

ಈ ನಿಗಾ ವ್ಯವಸ್ಥೆಯನ್ನು ಮೇ 6, 2025 ರಂದು ಪ್ರಾರಂಭಿಸಲಾಗಿದೆ. ನಿಲ್ದಾಣದ ಮುಂದೆ ಇರುವ ವಾಹನಗಳ ಸಂಖ್ಯಾ ಫಲಕಗಳನ್ನು ಗುರುತಿಸಲು “ಆಟೋಮ್ಯಾಟಿಕ್ ನಂಬ‌ರ್ ಪ್ಲೇಟ್ ರೆಕಗ್ನಿಷನ್” (ANPR) ತಂತ್ರಜ್ಞಾನವನ್ನು ಬಳಕೆ ಮಾಡಲಾಗಿದೆ. ಎಐ ಆಧಾರಿತ ವಿಡಿಯೋ ವಿಶ್ಲೇಷಣೆಯೊಂದಿಗೆ, ಈ ತಂತ್ರಜ್ಞಾನ ಶಂಕಾಸ್ಪದ ಚಟುವಟಿಕೆಗಳು, ಅನುಮಾನಾಸ್ಪದ ಘಟನೆಗಳನ್ನು ತಕ್ಷಣ ಪತ್ತೆಹಚ್ಚಲು ಸಹಕಾರಿಯಾಗಿದೆ ಎಂದಿದೆ.

ಬಿಎಂಆರ್‌ಸಿಎಲ್​ನ ವ್ಯವಸ್ಥಾಪಕ ನಿರ್ದೇಶಕ ಎಂ. ಮಹೇಶ್ವರ ರಾವ್ ಹೇಳಿದ್ದಿಷ್ಟು

ಈ ಸಂದರ್ಭದಲ್ಲಿ ಬಿಎಂಆರ್‌ಸಿಎಲ್​ನ ವ್ಯವಸ್ಥಾಪಕ ನಿರ್ದೇಶಕ ಎಂ. ಮಹೇಶ್ವರ ರಾವ್ ಮಾತನಾಡಿ, ‘ಪ್ರಯಾಣಿಕರ ಭದ್ರತೆ ಬಿಎಂಆರ್​ಸಿಎಲ್​ನ ಪ್ರಮುಖ ಆದ್ಯತೆಯಾಗಿದೆ. ಸುಧಾರಿತ ತಂತ್ರಜ್ಞಾನಗಳನ್ನು ಅಳವಡಿಸೋದರ ಮೂಲಕ ಭದ್ರತೆಯನ್ನು ಹೆಚ್ಚಿಸಲು ಶ್ರಮಿಸುತ್ತಿದೆ. ಈ ಹೊಸ ಎಐ ಮತ್ತು ANPR ತಂತ್ರಜ್ಞಾನ ನಮಗೆ ನಿಲ್ದಾಣದ ನಿರಂತರ ಕಾರ್ಯ ಚಟುವಟಿಕೆಗಳನ್ನು ಗಮನಿಸಲು ಮತ್ತು ತಕ್ಷಣ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತದೆ. ಇದಲ್ಲದೆ ಸಾರ್ವಜನಿಕ ಸುರಕ್ಷತೆಗೆ ಬದ್ಧತೆಯನ್ನೂ ತೋರಿಸುತ್ತದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೆಟ್ರೋ ನಿಲ್ದಾಣದಲ್ಲಿ ಕ್ಯೂ.ಆರ್ ಟಿಕೆಟ್ ಯಂತ್ರಗಳ ವ್ಯವಸ್ಥೆ: ಜಸ್ಟ್​​ ಎರಡು ಹಂತದಲ್ಲಿ ಟಿಕೆಟ್​​ ಕೈಗೆ

ಬೆಂಗಳೂರು ಮೆಟ್ರೋ ವ್ಯವಸ್ಥೆ ಹೆಚ್ಚಾದಂತೆ, ಬಿಎಂಆರ್‌ಸಿಎಲ್ ಸ್ಮಾರ್ಟ್ ನಿಗಾ ವ್ಯವಸ್ಥೆಗಳನ್ನು ಅಳವಡಿಸುವ ಮೂಲಕ ಪ್ರಯಾಣಿಕರ ಅನುಭವವನ್ನು ಉತ್ತಮಗೊಳಿಸಲು ಹಾಗೂ ಸಾರ್ವಜನಿಕ ಭದ್ರತೆಯನ್ನು ಸದಾ ಬಲಪಡಿಸಲು ಬದ್ಧವಾಗಿದೆ ಎಂದು ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?