AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್; ಮೆಟ್ರೋ ಪ್ರಯಾಣಿಕರಿಗೆ ಸಿಗುತ್ತಾ ಸಿಹಿ ಸುದ್ದಿ?

ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ತಡೆ ಹಿನ್ನೆಲೆಯಲ್ಲಿ BMRCL ಇಂದು ಮಹತ್ವದ ಸಭೆ ನಡೆಸಲಿದೆ. ಸಾರ್ವಜನಿಕ ಆಕ್ಷೇಪ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದರ ಏರಿಕೆಯನ್ನು ಮುಂದುವರಿಸಬೇಕೇ, ತಿದ್ದುಪಡಿ ಮಾಡಬೇಕೇ ಅಥವಾ ಸಂಪೂರ್ಣ ಹಿಂಪಡೆಯಬೇಕೇ ಎಂಬ ಚರ್ಚೆ ಈ ಸಭೆಯಲ್ಲಿ ನಡೆಯಲಿದ್ದು, ಲಕ್ಷಾಂತರ ಪ್ರಯಾಣಿಕರು ಅಂತಿಮ ನಿರ್ಧಾರಕ್ಕಾಗಿ ಕಾದು ನೋಡುತ್ತಿದ್ದಾರೆ.

ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್; ಮೆಟ್ರೋ ಪ್ರಯಾಣಿಕರಿಗೆ ಸಿಗುತ್ತಾ ಸಿಹಿ ಸುದ್ದಿ?
ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್
Kiran Surya
| Edited By: |

Updated on:Feb 09, 2026 | 10:53 AM

Share

ಬೆಂಗಳೂರು, ಫೆಬ್ರುವರಿ 09: ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆ, ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಇಂದು ಸಂಜೆ 4 ಗಂಟೆಗೆ ನಿರ್ದೇಶಕರ ಮಂಡಳಿ ಸಭೆಯನ್ನು ನಡೆಸಲಿದೆ. ಬೆಂಗಳೂರಿನ ಶಾಂತಿನಗರದಲ್ಲಿರುವ BMRCL ಕಚೇರಿಯಲ್ಲಿ ಈ ಮಹತ್ವದ ಸಭೆ ನಡೆಯಲಿದೆ.

ದರ ಏರಿಕೆ ಸಂಪೂರ್ಣವಾಗಿ ಹಿಂಪಡೆಯಲಾಗುತ್ತಾ?

ಒಟ್ಟು 14 ಸದಸ್ಯರನ್ನೊಳಗೊಂಡ BMRCL ನಿರ್ದೇಶಕರ ಮಂಡಳಿ ಸಭೆಯಲ್ಲಿ ಭಾಗವಹಿಸಲಿದೆ. ಕೇಂದ್ರ ಸರ್ಕಾರದ ಪರವಾಗಿ ಚೇರ್ಮನ್ ಸೇರಿದಂತೆ ಐವರು ಹಿರಿಯ ಅಧಿಕಾರಿಗಳು, ರಾಜ್ಯ ಸರ್ಕಾರದ ಪರವಾಗಿ BMRCL ವ್ಯವಸ್ಥಾಪಕ ನಿರ್ದೇಶಕರನ್ನು ಒಳಗೊಂಡಂತೆ ಐವರು ಅಧಿಕಾರಿಗಳು ಹಾಗೂ BMRCLನ ನಾಲ್ವರು ನಿರ್ದೇಶಕರು ಸಭೆಗೆ ಹಾಜರಾಗಲಿದ್ದಾರೆ. ಕೇಂದ್ರ ಸರ್ಕಾರದ ಕೆಲ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ ಮೆಟ್ರೋ ಟಿಕೆಟ್ ದರ ಸಮರ: ಎಲ್ಲವೂ ನಿಮ್ಮ ಕೈಯಲ್ಲಿದೆ, ಡ್ರಾಮಾ ಮಾಡಬೇಡಿ; ಸಿಎಂ ವಿರುದ್ಧ ಸೂರ್ಯ ಕಿಡಿ

ಮೆಟ್ರೋ ಪ್ರಯಾಣಿಕರಿಗೆ ನೇರವಾಗಿ ಪರಿಣಾಮ ಬೀರುವ ದರ ಏರಿಕೆ ವಿಚಾರವೇ ಇಂದು ನಡೆಯಲಿರುವ ಸಭೆಯ ಪ್ರಮುಖ ಅಜೆಂಡಾ ಆಗಿರಲಿದೆ. ಇತ್ತೀಚೆಗೆ ದರ ಏರಿಕೆ ಕುರಿತಂತೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ಷೇಪ ವ್ಯಕ್ತವಾಗಿದ್ದು, ಈ ಹಿನ್ನೆಲೆ ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಲಾಗಿದೆ. ನಿರ್ದೇಶಕರ ಮಂಡಳಿ ಸಭೆಯಲ್ಲಿ ದರ ನಿಗದಿ ಸಮಿತಿಯೂ ಭಾಗವಹಿಸುವ ಸಾಧ್ಯತೆ ಇದೆ. ದರ ಏರಿಕೆಯನ್ನು ಮುಂದುವರಿಸಬೇಕೇ, ತಿದ್ದುಪಡಿ ಮಾಡಬೇಕೇ ಅಥವಾ ಸಂಪೂರ್ಣವಾಗಿ ಹಿಂಪಡೆಯಬೇಕೇ ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಭೆ ಮುಗಿದ ಬಳಿಕ ಮೆಟ್ರೋ ದರ ಏರಿಕೆ ಕುರಿತು ಅಂತಿಮ ತೀರ್ಮಾನ ಪ್ರಕಟವಾಗುವ ನಿರೀಕ್ಷೆಯಿದ್ದು, ಲಕ್ಷಾಂತರ ಮೆಟ್ರೋ ಪ್ರಯಾಣಿಕರು ಸಭೆಯ ಫಲಿತಾಂಶದತ್ತ ಕಾದು ನೋಡುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:48 am, Mon, 9 February 26