ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ : ಕಾನೂನು ಸಮರಕ್ಕಿಳಿದ ತೇಜಸ್ವಿ ಸೂರ್ಯ

ಬೆಂಗಳೂರು ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯಿಂದಾಗಿ ಸಾರ್ವಜನಿಕರಲ್ಲಿ ಆಕ್ರೋಶವಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಸ್ಪರ ಆರೋಪ ಮಾಡುತ್ತಿವೆ. ಈ ನಡುವೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ದರ ನಿಗದಿ ಪರಿಷ್ಕರಣೆ ಸಮಿತಿ ವರದಿ ಬಿಡುಗಡೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದರ ಏರಿಕೆಯಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ಬಿಎಂಆರ್‌ಸಿಎಲ್ ಜಾಹೀರಾತುಗಳ ಮೂಲಕ ಆರ್ಥಿಕ ನಷ್ಟವನ್ನು ತುಂಬಲು ಯತ್ನಿಸುತ್ತಿದೆ.

ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ : ಕಾನೂನು ಸಮರಕ್ಕಿಳಿದ ತೇಜಸ್ವಿ ಸೂರ್ಯ
ಸಂಸದ ತೇಜಸ್ವಿ ಸೂರ್ಯ
Updated By: ವಿವೇಕ ಬಿರಾದಾರ

Updated on: Jul 06, 2025 | 9:17 PM

ಬೆಂಗಳೂರು, ಜುಲೈ 06: ಬೆಂಗಳೂರು (Bengaluru) ನಮ್ಮ ಮೆಟ್ರೋ ಟಿಕೆಟ್​ ದರ (Namma Metro Ticket Price) ಏರಿಕೆ ಖಂಡಿಸಿ ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರ ಕೇಂದ್ರದ ಕಡೆ ಬೊಟ್ಟು ಮಾಡಿದರೇ, ಕೇಂದ್ರ ರಾಜ್ಯ ಸರ್ಕಾರದತ್ತ ಬೊಟ್ಟು ಮಾಡಿತ್ತು. ಸರ್ಕಾರಗಳ ಆರೋಪ-ಪ್ರತ್ಯಾರೋಪದಿಂದ ಸಾರ್ವಜನಿಕರಲ್ಲಿ ಗೊಂದಲ ಮೂಡಿದ್ದು, ದರ ಏರಿಕೆ ಮಾಡಿದ್ದು ಯಾರು? ಎಂಬ ಪ್ರಶ್ನೆ ಉದ್ಭವಾಗಿದೆ. ಈ ನಡುವೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕಾನೂನು ಸಮರಕ್ಕೆ ಇಳಿದಿದ್ದು, ದರ ನಿಗದಿ ಪರಿಷ್ಕರಣೆ ಸಮಿತಿ ವರದಿ ಬಿಡುಗಡೆ ಆಗ್ರಹಿಸಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ದರ ನಿಗದಿ ಸಮಿತಿ ವರದಿ ತಯಾರಿಸುವ ಮುನ್ನ ವಿದೇಶ ಪ್ರವಾಸ ಮಾಡಿತ್ತು. ಬಿಎಂಆರ್​ಸಿಎಲ್​ ಶೇ.130 ರಷ್ಟು ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಿಸಿತ್ತು. ದರ ಏರಿಕೆ ಬಳಿಕ ಮೆಟ್ರೋ ರೈಲು ಪ್ರಯಾಣಿಕರ ಸಂಖ್ಯೆ ಕುಸಿದಿತ್ತು. ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿದ್ದರೂ ಸಮಿತಿ ವರದಿ ಬಹಿರಂಗಪಡಿಸಿಲ್ಲ. ಹೀಗಾಗಿ, ಸಂಸದ ತೇಜಸ್ವಿ ಸೂರ್ಯ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ (ಜು.07) ಹೈಕೋರ್ಟ್​ನ ಏಕಸದಸ್ಯ ಪೀಠದಲ್ಲಿ ರಿಟ್ ಅರ್ಜಿ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ
ಮೆಟ್ರೋ ದರ ಏರಿಕೆ ಪರಿಣಾಮ, ಬಿಎಂಟಿಸಿಗೆ ಹೆಚ್ಚುವರಿ 25 ಲಕ್ಷ ರೂ. ಆದಾಯ!
ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ: ಜಾಹೀರಾತು ಮೊರೆ ಹೋದ BMRCL
3 ದಿನಗಳಲ್ಲಿ ಮೆಟ್ರೋ ಟಿಕೆಟ್​ ದರ ಇಳಿಕೆ: ಸಿಎಂಗೆ ಬಿಜೆಪಿ ಸಂಸದರ ಭರವಸೆ
ನಮ್ಮ ಮೆಟ್ರೋ ದರ ಏರಿಕೆ ಮಾಡಿದ್ಯಾರು?ಎಳೆ ಎಳೆಯಾಗಿ ಬಿಚ್ಚಿಟ್ಟ ಸಿದ್ದರಾಮಯ್ಯ

ಟ್ವಿಟರ್ ಪೋಸ್ಟ್​

ಮೆಟ್ರೋ ಒಳಗೂ, ಹೊರಗೂ ಜಾಹೀರಾತು

ಮೆಟ್ರೋ ಟಿಕೆಟ್ ಏರಿಕೆ ಆದ ಮೇಲೆ ಮೆಟ್ರೋದಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದ್ದು, ಇದರಿಂದ ಬಿಎಂಆರ್​ಸಿಎಲ್​ಗೆ ನಷ್ಟ ಉಂಟಾಗುತ್ತಿದೆ ಎನ್ನಲಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಲು ಬಿಎಂಆರ್​ಸಿಎಲ್​ ಜಾಹೀರಾತುಗಳ ಮೊರೆ ಹೋಗಿದ್ದು, ಮೆಟ್ರೋ ಒಳಗೆ ಮತ್ತು ಹೊರಗೆ ಬಣ್ಣ ಬಣ್ಣದ ಜಾಹೀರಾತುಗಳು ಕಾಣಿಸುತ್ತಿವೆ. ಆರ್ಥಿಕ ಹೊಡೆತದಿಂದ ಹೊರಬರಲು ಬಿಎಂಆರ್​ಸಿಎಲ್​ನ ಮುಂದಿರುವ ಆಯ್ಕೆ ಸದ್ಯ ಜಾಹೀರಾತು ಎಂಬಂತಾಗಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆ: ಸಮಿತಿ ವರದಿ ಬಹಿರಂಗಪಡಿಸುವಂತೆ ತೇಜಸ್ವಿ ಸೂರ್ಯ ಒತ್ತಾಯ

ಬೆಂಗಳೂರಿನಲ್ಲಿ ಸದ್ಯ 57 ಮೆಟ್ರೋ ರೈಲುಗಳು ಸಂಚಾರ ಮಾಡುತ್ತಿವೆ. 57 ರೈಲುಗಳಲ್ಲೂ ಜಾಹೀರಾತು ಅಳವಡಿಕೆಗೆ ಅವಕಾಶ ನೀಡಲಾಗಿದ್ದು, ಈ ಪೈಕಿ ನೇರಳೆ ಮಾರ್ಗದ 33 ಹಾಗೂ ಹಸಿರು ಮಾರ್ಗದಲ್ಲಿ 24 ರೈಲುಗಳಿಗೆ ಜಾಹೀರಾತು ಅಳವಡಿಸಲಾಗುತ್ತಿದೆ. ರೈಲುಗಳ ಒಳಭಾಗ ಮತ್ತು ಹೊರಭಾಗದಲ್ಲಿ ಇಲ್ಲಿಯವರೆಗೆ ಯಾವುದೇ ಜಾಹೀರಾತು ಇರಲಿಲ್ಲ. ಇನ್ಮುಂದೆ ಎಲ್ಲ ರೈಲುಗಳ ಒಳಭಾಗ ಹಾಗೂ ಹೊರಭಾಗದಲ್ಲಿ ಜಾಹೀರಾತು ಅಳವಡಿಸಲು ಅನುಮತಿ ನೀಡಲಾಗಿದೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್​ ಹೇಳಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ