ನೇರಳೆ ಮಾರ್ಗದ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ; ಸೆಪ್ಟೆಂಬರ್ 15 ರ ನಂತರ ಈ ಎರಡು ಮಾರ್ಗಗಳಲ್ಲಿ ಸಂಚಾರ ಆರಂಭ

ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿ ನೀಡಿದೆ. ನೇರಳೆ ಮಾರ್ಗದ ನಮ್ಮ ಮೆಟ್ರೋ ರೈಲುಗಳ ಸಂಚಾರ ಸೆಪ್ಟೆಂಬರ್ 15ರ ಬಳಿಕ ಆರಂಭವಾಗಲಿದೆ. ಬೈಯಪ್ಪನಹಳ್ಳಿ-ಕೆ.ಆರ್‌. ಪುರ ಹಾಗೂ ಕೆಂಗೇರಿ-ಚಲ್ಲಘಟ್ಟದ ವಿಸ್ತರಿತ ನಿಲ್ದಾಣಗಳ ನಡುವೆ ಸೆಪ್ಟೆಂಬರ್ 15ರ ನಂತರ ಸಂಚಾರ ಆರಂಭವಾಗಲಿದೆ.

ನೇರಳೆ ಮಾರ್ಗದ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ; ಸೆಪ್ಟೆಂಬರ್ 15 ರ ನಂತರ ಈ ಎರಡು ಮಾರ್ಗಗಳಲ್ಲಿ ಸಂಚಾರ ಆರಂಭ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Sep 07, 2023 | 8:17 AM

ಬೆಂಗಳೂರು, ಸೆ.07: ಮೆಟ್ರೊ ನೇರಳೆ ಮಾರ್ಗದಲ್ಲಿ(Metro Purple Line) ವಿಸ್ತರಿತ ನಿಲ್ದಾಣಗಳ ನಡುವೆ ನಡೆಯುತ್ತಿರುವ ವಿವಿಧ ಪರೀಕ್ಷೆಗಳು ಕೊನೇ ಹಂತ ತಲುಪಿದ್ದು ಸೆಪ್ಟೆಂಬರ್ 15 ರ ನಂತರ ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿದೆ ಎಂಬ ಮಾಹಿತಿ ಸಿಕ್ಕಿದೆ. ನೇರಳೆ ಮಾರ್ಗದಲ್ಲಿ ಬೈಯಪ್ಪನಹಳ್ಳಿ-ಕೆ.ಆರ್‌. ಪುರ(Baiyappanahalli To KR puram Metro), ನಡುವೆ 2.5 ಕಿಲೋಮೀಟರ್‌ ಹಾಗೂ ಕೆಂಗೇರಿ-ಚಲ್ಲಘಟ್ಟದ(Kengeri to Challaghatta Metro) ನಡುವೆ 1.9 ಕಿ.ಮೀ ಕಾಮಗಾರಿಗಳು ಬಾಕಿ ಉಳಿದಿದ್ದವು. ಸದ್ಯ ಮೆಟ್ರೋ ಮಾರ್ಗ ಸಂಪೂರ್ಣ ಸಿದ್ಧವಾಗಿದ್ದು ಚಾಲನೆ ಸಿಕ್ಕರೆ ನೇರಳೆ ಮಾರ್ಗವು ಪೂರ್ವ ಬೆಂಗಳೂರು ನಗರದ ಬಹುತೇಕ ಭಾಗಗಳಿಗೆ ಸಂಪರ್ಕಿಸುತ್ತದೆ.

ವರದಿಯ ಪ್ರಕಾರ, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಮೆಟ್ರೋ ರೈಲು ಸುರಕ್ಷತೆಯ ಆಯುಕ್ತರಿಗೆ (CMRS) ಸಾಧ್ಯವಾದಷ್ಟು ಬೇಗ ಬಾಕಿ ಉಳಿದಿರುವ ಎರಡು ವಿಸ್ತರಿತ ನಿಲ್ದಾಣಗಳನ್ನು ಪರಿಶೀಲಿಸಲು ಮನವಿ ಮಾಡಿದ್ದು CMRS ನಮಗೆ ಕೆಲವು ಸ್ಪಷ್ಟೀಕರಣಗಳನ್ನು ಕೇಳಿದೆ, ನಾವು ಅವುಗಳನ್ನು ಸೆಪ್ಟೆಂಬರ್ 7 ರಂದು ಸಲ್ಲಿಸುತ್ತೇವೆ. ನಾವು ಸೆಪ್ಟೆಂಬರ್ 15 ರೊಳಗೆ ತಪಾಸಣೆ ಮತ್ತು ಇತರ ಸಣ್ಣ ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸುತ್ತೇವೆ. ಅದರ ನಂತರ ಎರಡೂ ವಿಸ್ತರಿತ ಮಾರ್ಗಗಳನ್ನು ಉದ್ಘಾಟಿಸುತ್ತೇವೆ ಎಂದು BMRCL ಎಂಡಿ ಅಂಜುಮ್ ತಿಳಿಸಿದ್ದಾರೆ. ನೇರಳೆ ಮಾರ್ಗದ ಎರಡೂ ವಿಸ್ತರಣೆಗಳಲ್ಲಿ ಪ್ರಾಯೋಗಿಕ ಚಾಲನೆಗಳನ್ನು ಈಗಾಗಲೇ ನಡೆಸಲಾಗಿದೆ.

ಇದನ್ನೂ ಓದಿ: ಸೇವೆಗೆ ಸಜ್ಜಾದ ಬೈಯಪ್ಪನಹಳ್ಳಿ-KR ಪುರಂ, ಕೆಂಗೇರಿ-ಚಲ್ಲಘಟ್ಟ ಮೆಟ್ರೋ; ಸೆ.7ಕ್ಕೆ CMRS ಪರಿಶೀಲನೆ

ಜುಲೈ ಮಧ್ಯದಲ್ಲಿ ಕೆಆರ್ ಪುರಂ-ಬೈಯಪ್ಪನಹಳ್ಳಿ ಮಾರ್ಗವನ್ನು ಉದ್ಘಾಟಿಸುವ ಗುರಿ ಇದೆ ಎಂದು ಬಿಎಂಆರ್‌ಸಿಎಲ್ ಈ ಹಿಂದೆ ಘೋಷಿಸಿತ್ತು. ಒಮ್ಮೆ ಈ ಮಾರ್ಗ ಉದ್ಘಾಟನೆಗೊಂಡರೆ, ಭಾರೀ ಅನುಕೂಲ ಆಗಲಿದ್ದು ಬೆಂಗಳೂರಿನ ಜನ ಸಾರ್ವಜನಿಕ ಸಾರಿಗೆಯನ್ನು ಹೆಚ್ಚಾಗಿ ಬಳಸುವ ನಿರೀಕ್ಷೆಯಿದೆ. ಏಕೆಂದರೆ ವೈಟ್‌ಫೀಲ್ಡ್ ಹಲವಾರು ಟೆಕ್ ಪಾರ್ಕ್‌ಗಳನ್ನು ಹೊಂದಿದೆ ಮತ್ತು ನಗರದ ವಿವಿಧ ಭಾಗಗಳ ಉದ್ಯೋಗಿಗಳು ಅಲ್ಲಿ ಕೆಲಸ ಮಾಡುತ್ತಾರೆ. ಹೀಗಾಗಿ ಇದು ಅನುಕೂಲ ಆಗಲಿದೆ.

ಇನ್ನು ಹಿಂದಿನ ಬಿಜೆಪಿ ಸರ್ಕಾರವು ವೈಟ್‌ಫೀಲ್ಡ್-ಕೆಆರ್ ಪುರಂ ಮಾರ್ಗವನ್ನು ಪ್ರಾರಂಭಿಸಿತು. ಆಗ ಈ ಪ್ರಮುಖ ಸ್ಟ್ರೀಟ್‌ನಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಾಧ್ಯವಾಗದ ಬಗ್ಗೆ ಟೀಕೆಗಳು ಎದುರಾಗಿದ್ದವು. ನಂತರ BMRCL ಬೆಂಗನಹಳ್ಳಿ ರೈಲು ನಿಲ್ದಾಣದ ಮೇಲೆ ತೆರೆದ ವೆಬ್ ಗ್ರೈಂಡರ್ ಅನ್ನು ಸ್ಥಾಪಿಸಬೇಕು ಎಂದು ತಿಳಿಸಿತ್ತು, ಇದಕ್ಕೆ ಭಾರತೀಯ ರೈಲ್ವೆಯಿಂದ ಅನುಮತಿ ಬೇಕು. ಕೆಆರ್ ಪುರಂ ಮತ್ತು ಬೈಯಪ್ಪನಹಳ್ಳಿ ನಡುವೆ ಜ್ಯೋತಿಪುರಂ ಎಂಬ ಒಂದೇ ಒಂದು ಮೆಟ್ರೋ ನಿಲ್ದಾಣವಿರಲಿದೆ. ಸೆಪ್ಟೆಂಬರ್ 15ರ ನಂತರ ಮೆಟ್ರೊ ನೇರಳೆ ಮಾರ್ಗದಲ್ಲಿ ಸಾರ್ವಜನಿಕರ ಸೇವೆಗೆ ಸಿದ್ಧವಿರಲಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:17 am, Thu, 7 September 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ