Bengaluru Metro: ಮೆಟ್ರೋ ರೈಲು ಕಾರ್ಯಾಚರಣೆ ಅವಧಿ ಹೆಚ್ಚಳ; ಬೆಳಗ್ಗೆ 5 ಗಂಟೆಗೆ ಮೊದಲ ರೈಲು ಸಂಚಾರ ಆರಂಭ
ವಾರದ ಎಲ್ಲಾ ದಿನಗಳಲ್ಲಿ ಉಳಿದ ನಿಲ್ದಾಣಗಳಲ್ಲಿ ಕೊನೆಯ ರೈಲು ಸಂಚಾರ ರಾತ್ರಿ 11 ಗಂಟೆಗೆ ಇರಲಿದೆ. ಮತ್ತು ಮುಖ್ಯ ನಿಲ್ದಾಣ, ನಾಡಪ್ರಭು ಕೆಂಪೇಗೌಡ ರೈಲು ನಿಲ್ದಾಣದಿಂದ ರಾತ್ರಿ 11.30ಕ್ಕೆ ಕೊನೆಯದಾಗಿ ಸಂಚಾರ ಮಾಡಲಿದೆ.
ಬೆಂಗಳೂರು: ನಮ್ಮ ಮೆಟ್ರೋ ರೈಲು ಸಂಚಾರ ಅವಧಿಯನ್ನು ವಿಸ್ತಾರಗೊಳಿಸಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ನಿಂದ ಆದೇಶ ನೀಡಲಾಗಿದೆ. ಡಿಸೆಂಬರ್ 20 ರಿಂದ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭ ಆಗಲಿದೆ. ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 5 ಗಂಟೆಯಿಂದ ರೈಲು ಸಂಚಾರ ನಡೆಸಲಿದೆ. ಎಲ್ಲಾ ಟರ್ಮಿನಲ್ ನಿಲ್ದಾಣದಿಂದ ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ, ಬೈಯಪ್ಪನಹಳ್ಳಿಯಿಂದ ಮೊದಲ ಮೆಟ್ರೋ ಸಂಚಾರ ನಡೆಯಲಿದೆ.
ಭಾನುವಾರ ಎಂದಿನಂತೆ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭ ಆಗಲಿದೆ. ವಾರದ ಎಲ್ಲಾ ದಿನಗಳಲ್ಲಿ ಉಳಿದ ನಿಲ್ದಾಣಗಳಲ್ಲಿ ಕೊನೆಯ ರೈಲು ಸಂಚಾರ ರಾತ್ರಿ 11 ಗಂಟೆಗೆ ಇರಲಿದೆ. ಮತ್ತು ಮುಖ್ಯ ನಿಲ್ದಾಣ, ನಾಡಪ್ರಭು ಕೆಂಪೇಗೌಡ ರೈಲು ನಿಲ್ದಾಣದಿಂದ ರಾತ್ರಿ 11.30ಕ್ಕೆ ಕೊನೆಯದಾಗಿ ಸಂಚಾರ ಮಾಡಲಿದೆ. ಬಿಎಂಆರ್ಸಿಎಲ್ನಿಂದ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಲಾಗಿದೆ.
ಇದನ್ನೂ ಓದಿ: ಕೊವಿಡ್ ಮಾರ್ಗಸೂಚಿ ಪಾಲನೆಗೆ ಹೆಚ್ಚಿನ ಒತ್ತು ನೀಡಿದ ಬಿಎಂಆರ್ಸಿಎಲ್; ಮೆಟ್ರೋದಲ್ಲಿ ಓಡಾಟಕ್ಕೆ ಮಾಸ್ಕ್ ಕಡ್ಡಾಯ
ಇದನ್ನೂ ಓದಿ: ಬೆಂಗಳೂರಿನಲ್ಲಿ ಮೆಟ್ರೋ ಕಾಸ್ಟ್ ನೆಟ್ವರ್ಕ್ ಇಂಡಿಯಾ ನೂತನ ಕಚೇರಿ ಉದ್ಘಾಟಿಸಿದ ಸಿಎಂ ಬೊಮ್ಮಾಯಿ