Bengaluru Metro: ಮೆಟ್ರೋ ರೈಲು ಕಾರ್ಯಾಚರಣೆ ಅವಧಿ ಹೆಚ್ಚಳ; ಬೆಳಗ್ಗೆ 5 ಗಂಟೆಗೆ ಮೊದಲ ರೈಲು ಸಂಚಾರ ಆರಂಭ

ವಾರದ ಎಲ್ಲಾ ದಿನಗಳಲ್ಲಿ ಉಳಿದ ನಿಲ್ದಾಣಗಳಲ್ಲಿ ಕೊನೆಯ ರೈಲು ಸಂಚಾರ ರಾತ್ರಿ 11 ಗಂಟೆಗೆ ಇರಲಿದೆ. ಮತ್ತು ಮುಖ್ಯ ನಿಲ್ದಾಣ, ನಾಡಪ್ರಭು ಕೆಂಪೇಗೌಡ ರೈಲು ನಿಲ್ದಾಣದಿಂದ ರಾತ್ರಿ 11.30ಕ್ಕೆ ಕೊನೆಯದಾಗಿ ಸಂಚಾರ ಮಾಡಲಿದೆ.

Bengaluru Metro: ಮೆಟ್ರೋ ರೈಲು ಕಾರ್ಯಾಚರಣೆ ಅವಧಿ ಹೆಚ್ಚಳ; ಬೆಳಗ್ಗೆ 5 ಗಂಟೆಗೆ ಮೊದಲ ರೈಲು ಸಂಚಾರ ಆರಂಭ
ಬೆಂಗಳೂರು ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)
Edited By:

Updated on: Dec 18, 2021 | 4:16 PM

ಬೆಂಗಳೂರು: ನಮ್ಮ ಮೆಟ್ರೋ ರೈಲು ಸಂಚಾರ ಅವಧಿಯನ್ನು ವಿಸ್ತಾರಗೊಳಿಸಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್​ನಿಂದ ಆದೇಶ ನೀಡಲಾಗಿದೆ. ಡಿಸೆಂಬರ್ 20 ರಿಂದ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭ ಆಗಲಿದೆ. ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 5 ಗಂಟೆಯಿಂದ ರೈಲು ಸಂಚಾರ ನಡೆಸಲಿದೆ. ಎಲ್ಲಾ ಟರ್ಮಿನಲ್ ನಿಲ್ದಾಣದಿಂದ ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ, ಬೈಯಪ್ಪನಹಳ್ಳಿಯಿಂದ ಮೊದಲ ಮೆಟ್ರೋ ಸಂಚಾರ ನಡೆಯಲಿದೆ.

ಭಾನುವಾರ ಎಂದಿನಂತೆ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭ ಆಗಲಿದೆ. ವಾರದ ಎಲ್ಲಾ ದಿನಗಳಲ್ಲಿ ಉಳಿದ ನಿಲ್ದಾಣಗಳಲ್ಲಿ ಕೊನೆಯ ರೈಲು ಸಂಚಾರ ರಾತ್ರಿ 11 ಗಂಟೆಗೆ ಇರಲಿದೆ. ಮತ್ತು ಮುಖ್ಯ ನಿಲ್ದಾಣ, ನಾಡಪ್ರಭು ಕೆಂಪೇಗೌಡ ರೈಲು ನಿಲ್ದಾಣದಿಂದ ರಾತ್ರಿ 11.30ಕ್ಕೆ ಕೊನೆಯದಾಗಿ ಸಂಚಾರ ಮಾಡಲಿದೆ. ಬಿಎಂಆರ್​​ಸಿಎಲ್​​ನಿಂದ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

ಇದನ್ನೂ ಓದಿ: ಕೊವಿಡ್ ಮಾರ್ಗಸೂಚಿ ಪಾಲನೆಗೆ ಹೆಚ್ಚಿನ ಒತ್ತು ನೀಡಿದ ಬಿಎಂಆರ್​ಸಿಎಲ್​; ಮೆಟ್ರೋದಲ್ಲಿ ಓಡಾಟಕ್ಕೆ ಮಾಸ್ಕ್ ಕಡ್ಡಾಯ

ಇದನ್ನೂ ಓದಿ: ಬೆಂಗಳೂರಿನಲ್ಲಿ ಮೆಟ್ರೋ ಕಾಸ್ಟ್ ನೆಟ್​ವರ್ಕ್ ಇಂಡಿಯಾ ನೂತನ ಕಚೇರಿ ಉದ್ಘಾಟಿಸಿದ ಸಿಎಂ ಬೊಮ್ಮಾಯಿ