Bengaluru Metro: ರಾತ್ರಿ ಕರ್ಫ್ಯೂ ಹಿನ್ನೆಲೆ; ಮೆಟ್ರೋ ರೈಲು ಕಾರ್ಯನಿರ್ವಹಿಸುವ ಅವಧಿಯಲ್ಲಿ ಬದಲಾವಣೆ

ಬೆಂಗಳೂರು ಮೆಟ್ರೋ: ನೈಟ್ ಕರ್ಫ್ಯೂ ವಿಧಿಸಿರುವುದರಿಂದ ಮತ್ತು ಬೆಂಗಳೂರಿಗೆ ಕೂಡ ಆ ನಿಯಮಗಳು ಅನ್ವಯ ಆಗುವುದರಿಂದ ಇದೀಗ ಮೆಟ್ರೋ ಸಂಚಾರ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ.

Bengaluru Metro: ರಾತ್ರಿ ಕರ್ಫ್ಯೂ ಹಿನ್ನೆಲೆ; ಮೆಟ್ರೋ ರೈಲು ಕಾರ್ಯನಿರ್ವಹಿಸುವ ಅವಧಿಯಲ್ಲಿ ಬದಲಾವಣೆ
ನಮ್ಮ ಮೆಟ್ರೋ (ಸಾಂಕೇತಿಕ ಚಿತ್ರ)
Follow us
TV9 Web
| Updated By: ganapathi bhat

Updated on:Aug 06, 2021 | 9:32 PM

ಬೆಂಗಳೂರು: ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾದಂತ ರಾತ್ರಿ ಕರ್ಫ್ಯೂ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ, ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಹಾಕಲಾಗಿದೆ. ನೈಟ್ ಕರ್ಫ್ಯೂ ವಿಧಿಸಿರುವುದರಿಂದ ಮತ್ತು ಬೆಂಗಳೂರಿಗೆ ಕೂಡ ಆ ನಿಯಮಗಳು ಅನ್ವಯ ಆಗುವುದರಿಂದ ಇದೀಗ ಮೆಟ್ರೋ ಸಂಚಾರ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ.

ರಾತ್ರಿ 9ರಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ, ಮೆಟ್ರೋ ಕೊನೆಯ ರೈಲು ರಾತ್ರಿ 9 ಗಂಟೆ ಬದಲಾಗಿ 8 ಗಂಟೆಗೆ ಸಂಚರಿಸಲಿದೆ. ಮೆಟ್ರೋ ಕೊನೆಯ ರೈಲು ರಾತ್ರಿ 8 ಗಂಟೆಗೆ ಹೊರಡಲಿದೆ. ಆ ಬಳಿಕ, ಮೆಟ್ರೋ ರೈಲು ಸೇವೆ ಇರುವುದಿಲ್ಲ. ಈ ಬದಲಾವಣೆ ನಾಳೆಯಿಂದ ಆಗಸ್ಟ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ.

ಕೊವಿಡ್ 19 ಹರಡುವುದನ್ನು ತಡೆಯಲು ನಿಯಂತ್ರಣ ಕ್ರಮಗಳ ಆದೇಶದಂತೆ ಆಗಸ್ಟ್ 7 ರಿಂದ ಆಗಸ್ಟ್ 16ರ ವರೆಗೆ ರಾಜ್ಯದಲ್ಲಿ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ವಿಧಿಸಲಾಗಿರುವ ರಾತ್ರಿ ಕರ್ಫ್ಯೂ ಕಾರಣದಿಂದ ಕೊನೆಯ ಮೆಟ್ರೋ ರೈಲು ಸೇವೆಯೂ ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 9 ಗಂಟೆಯ ಬದಲು ರಾತ್ರಿ 8 ಗಂಟೆಗೆ ಹೊರಡುತ್ತದೆ. ಈ ಬದಲಾವಣೆಯನ್ನು ಆಗಸ್ಟ್ 7 ರಿಂದ ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಮಾಧ್ಯಮ ಪ್ರಕಟಣೆಯಲ್ಲಿ ಹೇಳಲಾಗಿದೆ.

ಇಂದಿನ ಕೊರೊನಾ ಪ್ರಕರಣಗಳ ಸಂಖ್ಯೆ ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 6) ಹೊಸದಾಗಿ 1,805 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,15,317 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,54,222 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 36 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,741 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 24,328 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 441 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,29,781 ಕ್ಕೆ ಏರಿಕೆಯಾಗಿದೆ. 12,29,781 ಸೋಂಕಿತರ ಪೈಕಿ 12,05,312 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 7 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,908 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,560 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಇದನ್ನೂ ಓದಿ: ಕೊರೊನಾ ನಿಯಂತ್ರಣಕ್ಕೆ ಮತ್ತೆ ಕಠಿಣ ನಿಯಮಾವಳಿ; ತಾಂತ್ರಿಕ ಸಲಹಾ ಸಮಿತಿಯಿಂದ ಶಿಫಾರಸು

Covid19 Guidelines: ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

(Bengaluru Metro Namma Metro Working Timings changed New Timings and Changes Here)

Published On - 9:05 pm, Fri, 6 August 21