AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೆಂಜ್ ಲೈನ್​ಗಾಗಿ 6500 ಮರ ಕಡಿಯಲು ಮುಂದಾದ ನಮ್ಮ ಮೆಟ್ರೋ: ಪರಿಸರ ಹೋರಾಟಗಾರರ ಜತೆ ಅಧಿಕಾರಿಗಳ ಸಭೆ

ಕೊನೆಗೂ ನಮ್ಮ ಮೆಟ್ರೋ ಯೆಲ್ಲೋ ಲೈನ್ ಲೋಕಾರ್ಪಣೆಯಾಗಿದೆ. ಇದೀಗ ಆರೆಂಜ್ ಲೈನ್​ಗಾಗಿ ಸಿದ್ಧತೆ ನಡೆಯುತ್ತಿದೆ. ಇದೀಗ ಆರೆಂಜ್​ ಲೈನ್ ಕಾಮಗಾರಿಗಾಗಿ ಬಿಎಂಆರ್​ಸಿಎಲ್ 6500 ಮರಗಳನ್ನು ಕಡಿಯಲು ಮುಂದಾಗಿದ್ದು, ಪರಿಸರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಪರಿಸರ ಹೋರಾಟಗಾರರ ಜತೆಗೆ ಅಧಿಕಾರಿಗಳು ಸಭೆ ನಡೆಸಿ ಮಾತುಕತೆ ಮಾಡಿದ್ದಾರೆ.

ಆರೆಂಜ್ ಲೈನ್​ಗಾಗಿ 6500 ಮರ ಕಡಿಯಲು ಮುಂದಾದ ನಮ್ಮ ಮೆಟ್ರೋ: ಪರಿಸರ ಹೋರಾಟಗಾರರ ಜತೆ ಅಧಿಕಾರಿಗಳ ಸಭೆ
ಪರಿಸರ ಹೋರಾಟಗಾರರೊಂದಿಗೆ ಬಿಎಂಆರ್​ಸಿಎಲ್ ಅಧಿಕಾರಿಗಳ ಸಭೆ (ಎಡ ಚಿತ್ರ), ನಮ್ಮ ಮೆಟ್ರೋ ರೈಲು (ಸಾಂದರ್ಭಿಕ ಚಿತ್ರ)
Kiran Surya
| Edited By: |

Updated on: Aug 19, 2025 | 7:04 AM

Share

ಬೆಂಗಳೂರು, ಆಗಸ್ಟ್ 19: ಈಗಾಗಲೇ ಬೆಂಗಳೂರಿನಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಸಾವಿರಾರು ಮರಗಳ ಮಾರಣಹೋಮ ಆಗಿದೆ. ಇದರಿಂದ ಬೆಂಗಳೂರಿಗರು ಬಿಸಿಲ ಬೇಗೆಯಲ್ಲಿ ತತ್ತರಿಸಿ ಹೋಗುವಂತಾಗಿದ್ದರೂ, ಇದೀಗ ಮತ್ತೆ ನಗರದಲ್ಲಿರುವ ಸಾವಿರಾರು ಮರಗಳನ್ನು ಕಡಿಯಲು ಬಿಎಂಆರ್​​ಸಿಎಲ್ (BMRCL) ಮುಂದಾಗಿದೆ. ಮೆಟ್ರೋ ಮೂರನೇ ಹಂತದ (Metro Phase 3) ಯೋಜನೆಗಾಗಿ ಬರೋಬ್ಬರಿ 6500 ಮರಗಳನ್ನು ಕಡಿಯಲು ಮತ್ತು ಸ್ಥಳಾಂತರಿಸಲು ತಿರ್ಮಾನ ಮಾಡಲಾಗಿದೆ. 1ನೇ ಕಾರಿಡಾರ್​​ ಜೆಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ 32.15 ಕಿಲೋ ಮೀಟರ್​ ಮಾರ್ಗದಲ್ಲಿ 21 ನಿಲ್ದಾಣಗಳು ಇರಲಿವೆ. 2ನೇ ಕಾರಿಡಾರ್​​ ಹೊಸಹಳ್ಳಿಯಿಂದ ಕಡಬಗೆರೆಯ ವರೆಗೂ ಇರಲಿದ್ದು, 12.50 ಕಿಲೋ ಮೀಟರ್ ಇರಲಿದೆ. ಇದರಲ್ಲಿ 9 ನಿಲ್ದಾಣಗಳು ಇರಲಿವೆ.

ಮೆಟ್ರೋ ಮೂರನೇ ಹಂತ: 44.65 ಕಿಮೀ ಉದ್ದದ ಮಾರ್ಗ

ಮೆಟ್ರೋ ಮೂರನೇ ಹಂತವು ಒಟ್ಟು 44.65 ಕಿ.ಮೀ ಉದ್ದವಿರುವ ಎರಡು ಮೆಟ್ರೋ ಮಾರ್ಗಗಳನ್ನು ಹೊಂದಿರಲಿದೆ. 15,611 ಕೋಟಿ ರೂ. ವೆಚ್ಚದಲ್ಲಿ ಎರಡು ಮಾರ್ಗಗಳ ಕಾಮಗಾರಿ ನಡೆಯಲಿದೆ. ಮರಗಳನ್ನು ಕಡಿಯುವ ಬಗ್ಗೆ ಪರಿಸರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ನಮ್ಮ ಮೆಟ್ರೋ ಅಧಿಕಾರಿಗಳು ಪರಿಸರ ಹೋರಾಟಗಾರರ ಸಭೆ ಕರೆದು ಮಾತುಕತೆ ನಡೆಸಿದ್ದಾರೆ. ಈ ಸಭೆಯಲ್ಲಿ ನೂರಾರು ಹೋರಾಟಗಾರರು ಭಾಗಿಯಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

11 ಸಾವಿರ ಮರಗಳನ್ನು ಕಡಿಯಲು ಸಿದ್ಧತೆ ಮಾಡಿದ್ದ ಬಿಎಂಆರ್​ಸಿಎಲ್

ಈ ಹಿಂದೆ ಕಿತ್ತಳೆ ಮಾರ್ಗದ ಕಾಮಗಾರಿಗಾಗಿ 11 ಸಾವಿರ ಮರಗಳನ್ನು ಕಡಿಯಲು ಸಿದ್ಧತೆ ಮಾಡಿಕೊಂಡಿದ್ದ ಬಿಎಂಆರ್​​ಸಿಎಲ್, ಪರಿಸರ ಹೋರಾಟಗಾರರಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಕಾರಣ ಸಂಖ್ಯೆ ಕಡಿತಗೊಳಿಸಿತ್ತು. ಇದೀಗ 6500 ಮರಗಳನ್ನು ಕಡಿಯಲು ತೀರ್ಮಾನ ಮಾಡಲಾಗಿದೆ.

ಇದನ್ನೂ ಓದಿ
Image
ಬೆಂಗಳೂರು: ಹಳದಿ ಮೆಟ್ರೋ ಮಾರ್ಗ ಆರಂಭ ಬೆನ್ನಲ್ಲೇ ಉಚಿತ ಫೀಡರ್ ಬಸ್ ಸೇವೆ
Image
ಯೆಲ್ಲೋ ಲೈನ್ ಮೆಟ್ರೋ ನಿಲ್ದಾಣಗಳಲ್ಲಿ ಕುರ್ಚಿ ವ್ಯವಸ್ಥೆಯೇ ಇಲ್ಲ!
Image
ಸಿಹಿ ಸುದ್ದಿ​: ಹಳದಿ ಮಾರ್ಗದ ಮೆಟ್ರೋ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು
Image
ಯೆಲ್ಲೋ ಲೈನ್​​ನಲ್ಲಿ ಮೆಟ್ರೋ ಮಿಸ್ ಮಾಡಿಕೊಂಡಿದ್ದಕ್ಕೆ ಪ್ರಯಾಣಿಕನಿಗೆ ದಂಡ

ಇದನ್ನೂ ಓದಿ: ಬೆಂಗಳೂರು: ಹಳದಿ ಮೆಟ್ರೋ ಮಾರ್ಗ ಆರಂಭ ಬೆನ್ನಲ್ಲೇ ಉಚಿತ ಫೀಡರ್ ಬಸ್ ಸೇವೆ

ಒಟ್ಟಿನಲ್ಲಿ, ನಗರದಲ್ಲಿ ಈಗಲೇ ಜನರಿಗೆ ಉಸಿರಾಡಲು ಶುದ್ಧವಾದ ಗಾಳಿ ಸಿಗುತ್ತಿಲ್ಲ. ಪರಿಸ್ಥಿತಿ ಹೀಗಿರುವಾಗ ಮತ್ತೆ ಮತ್ತೆ ಮರಗಳನ್ನು ನಾಶ ಮಾಡುತ್ತಾ ಹೋದರೆ, ಬೆಂಗಳೂರು ಮತ್ತೊಂದು ದೆಹಲಿ ಆಗುವುದರಲ್ಲಿ ಅನುಮಾನವಿಲ್ಲ ಎಂದು ಪರಿಸರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್