AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪೆಟ್ರೋಲ್ ಕದಿಯುವಾಗ ಸಿಕ್ಕಿಬಿದ್ದ ವ್ಯಕ್ತಿ, ಮೆಟ್ರೋ ಸಿಬ್ಬಂದಿಗಳ ಮೇಲೆ ಚಾಕುವಿನಿಂದ ಹಲ್ಲೆ

ಬೆಂಗಳೂರಿನ ಶ್ರೀರಾಂಪುರ ಮೆಟ್ರೋ ನಿಲ್ದಾಣದಲ್ಲಿ ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕದಿಯುತ್ತಿದ್ದ ವಿನಾಯಕ ಎಂಬ ವ್ಯಕ್ತಿಯನ್ನು ತಡೆಯಲು ಬಂದ ಗೃಹರಕ್ಷಕ ದಳದ ಗಿರೀಶ್ ಹಾಗೂ ಇಬ್ಬರು ಮೆಟ್ರೋ ಭದ್ರತಾ ಸಿಬ್ಬಂದಿಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಗಾಯಗೊಂಡ ಸಿಬ್ಬಂದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿ ವಿನಾಯಕನನ್ನು ಬಂಧಿಸಿ, ಕಳ್ಳತನ ಹಾಗೂ ಹಲ್ಲೆ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು: ಪೆಟ್ರೋಲ್ ಕದಿಯುವಾಗ ಸಿಕ್ಕಿಬಿದ್ದ ವ್ಯಕ್ತಿ, ಮೆಟ್ರೋ ಸಿಬ್ಬಂದಿಗಳ ಮೇಲೆ ಚಾಕುವಿನಿಂದ ಹಲ್ಲೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Oct 24, 2025 | 10:02 AM

Share

ಬೆಂಗಳೂರು, ಅ.24: ಬೆಂಗಳೂರಿನ ಶ್ರೀರಾಂಪುರ (Srirampura Metro) ಮೆಟ್ರೋ ನಿಲ್ದಾಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಂದ ವ್ಯಕ್ತಿಯೊಬ್ಬ ಪೆಟ್ರೋಲ್ ಕದಿಯುತ್ತಿದ್ದಿರುವ ಘಟನೆ ಮಂಗಳವಾರ (ಅ.21) ನಡೆದಿದ್ದು, ತಡೆಯಲು ಬಂದ ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಮೂವರು ಭದ್ರತಾ ಸಿಬ್ಬಂದಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಗಾಯಗೊಂಡವರನ್ನು ಗಿರೀಶ್ (ಗೃಹರಕ್ಷಕ ದಳದ ಸಿಬ್ಬಂದಿ), ಚೇತನ್ ಕುಮಾರ್ ಮತ್ತು ಶಂಕರ್ ಎಂದು ಗುರುತಿಸಲಾಗಿದ್ದು, ಇದರಲ್ಲಿ ಇಬ್ಬರೂ ಮೆಟ್ರೋ ಭದ್ರತಾ ಸಿಬ್ಬಂದಿ ಎಂದು ಹೇಳಲಾಗಿದೆ.

ಇನ್ನು ಈ ಬಗ್ಗೆ ಪೊಲೀಸರು ಹೇಳಿರುವ ಪ್ರಕಾರ, ಕಾನ್ಕೋರ್ಸ್ ಮಟ್ಟದಲ್ಲಿ ನಿಯೋಜನೆಗೊಂಡಿದ್ದ ಗಿರೀಶ್ ಪಾರ್ಕಿಂಗ್ ಪ್ರದೇಶದಲ್ಲಿ ಆರೋಪಿ ವಾಹನಗಳಿಂದ ಪೆಟ್ರೋಲ್ ತೆಗೆಯುತ್ತಿದ್ದನ್ನು ನೋಡಿದ್ದಾರೆ. ತಕ್ಷಣ ಇತರ ಮೆಟ್ರೋ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ. ಈ ವೇಳೆ ಭದ್ರತಾ ಮೇಲ್ವಿಚಾರಕರು ಮತ್ತು ಇತರ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಆತನನ್ನು ಹಿಡಿದಿದ್ದರೆ. ಈ ವೇಳೆ ಆತ ತಪ್ಪಿಕೊಳ್ಳಲು ಸಿಬ್ಬಂದಿಗಳ ಮೇಲೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾನೆ. ಸಿಬ್ಬಂದಿಗಳಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಇನ್ನು ಈ ಪೆಟ್ರೋಲ್ ಕದಿಯುತ್ತಿದ್ದ ವ್ಯಕ್ತಿಯನ್ನು ವಿನಾಯಕ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಸಾರ್ವಜನಿಕವಾಗಿ ಕ್ಯಾಬ್​ ಡ್ರೈವರ್​​ಗೆ​​​ ಕಪಾಳಮೋಕ್ಷ ಮಾಡಿದ ಟ್ರಾಫಿಕ್​​​ ಪೊಲೀಸ್

ಆರೋಪಿ ವಿನಾಯಕನನ್ನು ಶ್ರೀರಾಂಪುರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿರುವ ಪ್ರಕಾರ, ಮೆಟ್ರೋದಲ್ಲಿ ಇಂತಹ ಕೆಲಸವನ್ನು ಸುಮಾರು ದಿನಗಳಿಂದ ಮಾಡುತ್ತಿದ್ದಾನೆ ಎಂದು ಅನ್ನಿಸುತ್ತದೆ. ಮೆಟ್ರೋ ಭದ್ರತಾ ಸಿಬ್ಬಂದಿಗಳು, ಆತ ಪೆಟ್ರೋಲ್ ಕದಿಯುತ್ತಿದ್ದ ವೇಳೆ ಹಿಡಿದಿದ್ದಾರೆ. ಆರೋಪಿ ತಪ್ಪಿಸಿಕೊಳ್ಳಲು ಚಾಕುವಿನಿಂದ ಇರಿದು ಗಾಯ ಮಾಡಿದ್ದಾನೆ ಎಂದು ಹೇಳಿದ್ದಾರೆ. ಶ್ರೀರಾಂಪುರ ಪೊಲೀಸರು ವಿನಾಯಕ ವಿರುದ್ಧ ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು, ಕ್ರಿಮಿನಲ್ ಬೆದರಿಕೆ ಮತ್ತು ಕಳ್ಳತನ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?