AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro Pillar Collapse: ಹೈದರಾಬಾದ್‌ನ ಐಐಟಿ ತಜ್ಞರ ತಂಡದ ವರದಿಯಲ್ಲಿ ದುರಂತದ ಕಾರಣ ಬಹಿರಂಗ

ಜನವರಿ 10ರಂದು ನಗರದಲ್ಲಿ ನಿರ್ಮಾಣಹಂತದ ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಲ್ಲರ್​ನ ಸಪೋರ್ಟ್ ಸಿಸ್ಟಮ್ ವೈಫಲ್ಯದಿಂದ ದುರಂತ ಸಂಭವಿಸಿದೆ ಎಂದು ಹೈದರಾಬಾದ್‌ನ ಐಐಟಿ ತಜ್ಞರ ತಂಡ ತಿಳಿಸಿದೆ.

Bengaluru Metro Pillar Collapse: ಹೈದರಾಬಾದ್‌ನ ಐಐಟಿ ತಜ್ಞರ ತಂಡದ ವರದಿಯಲ್ಲಿ ದುರಂತದ ಕಾರಣ ಬಹಿರಂಗ
ಮೆಟ್ರೋ ಪಿಲ್ಲರ್ ಕುಸಿತ
TV9 Web
| Updated By: ವಿವೇಕ ಬಿರಾದಾರ|

Updated on: Jan 18, 2023 | 8:18 AM

Share

ಬೆಂಗಳೂರು: ಜನವರಿ 10ರಂದು ನಗರದಲ್ಲಿ ನಿರ್ಮಾಣಹಂತದ ಮೆಟ್ರೋ ಪಿಲ್ಲರ್ ಬಿದ್ದು (Bengaluru Metro Pillar Collapse) ತಾಯಿ, ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಲ್ಲರ್​ನ ಸಪೋರ್ಟ್ ಸಿಸ್ಟಮ್ ವೈಫಲ್ಯದಿಂದ ದುರಂತ ಸಂಭವಿಸಿದೆ ಎಂದು ಹೈದರಾಬಾದ್‌ನ ಐಐಟಿ ತಜ್ಞರ ತಂಡ (Hyderabad IIT Team) ಬೆಂಗಳೂರು ಪೊಲೀಸರಿಗೆ (Bengaluru Police) ವರದಿ ನೀಡಿದೆ. ದುರಂತದ ಬಳಿಕ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಇಂದು (ಜ.18) ವರದಿ ನೀಡಿದ್ದು, ಮೆಟ್ರೋ ಪಿಲ್ಲರ್ ನಿರ್ಮಿಸುವಾಗ ಅದಕ್ಕೆ ರಾಡ್‌, ಇತರೆ ವಸ್ತುಗಳನ್ನು ಬಳಸಿ ಸಪೋರ್ಟ್‌ ನೀಡಬೇಕು. ಆದರೆ ಈ ಮೆಟ್ರೋ ಪಿಲ್ಲರ್‌ಗೆ ಸರಿಯಾದ ರೀತಿಯಲ್ಲಿ ಸಪೋರ್ಟ್ ನೀಡಿರಲಿಲ್ಲ. ಹೀಗಾಗಿ ಮೆಟ್ರೋ ಪಿಲ್ಲರ್ ವಾಲಿ ಕೆಲವೇ ಕ್ಷಣಗಳಲ್ಲಿ ನೆಲಕ್ಕೆ ಬಿದ್ದಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಘಟನೆ ಹಿನ್ನೆಲೆ

ಜನವರಿ 10 ರಂದು ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ಕಂಬಿ ಬಿದ್ದು ತಾಯಿ ಹಾಗೂ ಮಗು ಮೃತಪಟ್ಟಿದ್ದರು. ಮೃತ ತೇಜಸ್ವಿನಿ ಹಾಗೂ ಅವರ ಪತಿ ತಮ್ಮಿಬ್ಬರು ಅವಳಿ ಮಕ್ಕಳ ಜೊತೆಯಲ್ಲಿ ಬೈಕ್‌ನಲ್ಲಿ ಹೊರಟಿದ್ದರು. ಈ ವೇಳೆ ಪಿಲ್ಲರ್‌ ಅವರ ಬೈಕ್ ಮೇಲೆ ಬಿದ್ದಿತ್ತು. ಅವರ ಕುಟುಂಬದ ನಾಲ್ವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಜನರು ಗಾಯಗೊಂಡಿದ್ದ ತಾಯಿ ಮತ್ತು ಮಗುವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೇಜಸ್ವಿನಿ ಹಾಗೂ ಮಗು ವಿಹಾನ್ ಮೃತಟ್ಟಿದ್ದಾರೆ. ಒಂದು ವರ್ಷದ ಮಗು ಮತ್ತು ಲೋಹಿತ್‌ ಕುಮಾರ್ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಅನುಭವ ಇಲ್ಲದವರನ್ನು ಕೆಲಸಕ್ಕೆ ತೆಗೆದುಕೊಂಡಿದ್ದೇ ಮೆಟ್ರೋ ಪಿಲ್ಲರ್ ಕುಸಿತಕ್ಕೆ ಕಾರಣ; BMRCL ನೌಕರರ ಸಂಘದ ‌ಉಪಾಧ್ಯಕ್ಷ ಆರೋಪ

ಸ್ವಯಂ ಪ್ರೇರಿತವಾಗಿ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್​​

ಕರ್ನಾಟಕ ಹೈಕೋರ್ಟ್​​ ಸ್ವಯಂ ಪ್ರೇರಿತವಾಗಿ ಮೊಕದ್ದಮೆ ದಾಖಲಿಸಿಕೊಂಡು ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ಪ್ರಕರಣ ಸಂಬಂಧ ಮಾಧ್ಯಮಗಳ ಸುದ್ದಿ ಆಧರಿಸಿ ಸಾರ್ವಜನಿಕರ ಹಿತ ದೃಷ್ಟಿಯಿಂದ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತಿಕೊಂಡಿದ್ದೇವೆ ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಅವರ ನೇತೃತ್ವದ ಪೀಠ ಹೇಳಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ BMRCL, BBMP ಮತ್ತು ಸಂಬಂಧಪಟ್ಟ ಗುತ್ತಿಗೆದಾರರನ್ನು ಪ್ರತಿವಾದಿಗಳನ್ನಾಗಿಸಲು ಸೂಚನೆ ನೀಡಿದೆ.

ಇದನ್ನೂ ಓದಿ: ಮಹಾಲಕ್ಷ್ಮೀ ಲೇಔಟ್ ಮುಖ್ಯರಸ್ತೆಯಲ್ಲಿ ಏಕಾಏಕಿ ಕುಸಿದ ರಸ್ತೆ; ಜೀವ ಭಯದಲ್ಲಿ ವಾಹನ ಸವಾರರು

ಈ ಪ್ರಕರಣವು ಸಾರ್ವಜನಿಕರಲ್ಲಿ ಕಳವಳ ಮತ್ತು ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆ ಮೂಡಿಸುತ್ತದೆ. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಯಾವೆಲ್ಲಾ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿದ್ದೀರಿ? ಮತ್ತು ಟೆಂಡರ್​ ನೀಡುವ ಸಂದರ್ಭದಲ್ಲಿ ಸುರಕ್ಷರತೆಯು ಟೆಂಡರ್​ನ ಭಾಗವಾಗಿರಲಿಲ್ಲವೇ? ಟೆಂಡರ್​ ಸಮಯದಲ್ಲಿ ಸರ್ಕಾರ ಸೂಚಿಸಿದ  ಸುರಕ್ಷತಾ ಕ್ರಮಗಳನ್ನು ಗುತ್ತಿಗೆದಾರರು ಪಾಲಿಸಿದ್ದಾರೆಯೇ ? ಎಂದು ಪ್ರಶ್ನೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ