Bengaluru Metro: ಮೆಟ್ರೋ ಪಿಲ್ಲರ್ ಬಿದ್ದು ಮಹಿಳೆ, ಮಗು ಮೃತಪಟ್ಟ ಪ್ರಕರಣ; 10 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ

2023 ರ ಜನವರಿ 10 ರಂದು ನಾಗವಾರ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಬಿದ್ದು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ತೇಜಸ್ವಿನಿ ಎಲ್ ಸುಲಾಖೆ ಮತ್ತು ಅವರ ಎರಡೂವರೆ ವರ್ಷದ ಮಗ ವಿಹಾನ್ ಸಾವನ್ನಪ್ಪಿದ್ದರು.

Bengaluru Metro: ಮೆಟ್ರೋ ಪಿಲ್ಲರ್ ಬಿದ್ದು ಮಹಿಳೆ, ಮಗು ಮೃತಪಟ್ಟ ಪ್ರಕರಣ; 10 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ
ಕರ್ನಾಟಕ ಹೈಕೋರ್ಟ್
Follow us
Ramesha M
| Updated By: Ganapathi Sharma

Updated on: Jul 26, 2023 | 2:49 PM

ಬೆಂಗಳೂರು: ನಮ್ಮ ಮೆಟ್ರೋ (Namma Metro) ಪಿಲ್ಲರ್ ಕುಸಿದು ಬಿದ್ದು ಮಹಿಳೆ ಮತ್ತು ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಪರಿಹಾರ ನೀಡುವಂತೆ ಕೋರಿ ಮಹಿಳೆಯ ಪತಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ನಡೆಸಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರ, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಮತ್ತು ಇತರರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಅರ್ಜಿದಾರ ಲೋಹಿತ್‌ಕುಮಾರ ವಿ ಸುಲಾಖೆ ಅವರು 10 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದು, ಬಿಎಂಆರ್‌ಸಿಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ದೂರಿದ್ದರು.

2023 ರ ಜನವರಿ 10 ರಂದು ನಾಗವಾರ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಬಿದ್ದು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ತೇಜಸ್ವಿನಿ ಎಲ್ ಸುಲಾಖೆ (26) ಮತ್ತು ಅವರ ಎರಡೂವರೆ ವರ್ಷದ ಮಗ ವಿಹಾನ್ ಸಾವನ್ನಪ್ಪಿದ್ದರು. ಸಂತ್ರಸ್ತರ ಕುಟುಂಬಕ್ಕೆ 20 ಲಕ್ಷ ಪರಿಹಾರ ನೀಡುವುದಾಗಿ ಬಿಎಂಆರ್‌ಸಿಎಲ್ ತಿಳಿಸಿತ್ತು.

ಆದರೆ, ಪ್ರತಿವಾದಿಗಳ ನಿಷ್ಕ್ರಿಯತೆ, ಅಸಮರ್ಪಕ ಸುರಕ್ಷತಾ ಕ್ರಮಗಳು ಮತ್ತು ಅಸಡ್ಡೆಯಿಂದ ಬಲಿಯಾದ ಅಮಾಯಕರ ಜೀವಕ್ಕೆ ಕೇವಲ 20 ಲಕ್ಷ ರೂಪಾಯಿ ಪರಿಹಾರ ಸಾಕಾಗುವುದಿಲ್ಲ ಎಂದು ಲೋಹಿತ್‌ಕುಮಾರ್ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದರು. ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ತೇಜಸ್ವಿನಿ ತಿಂಗಳಿಗೆ 75,748 ರೂ ಆದಾಯ ಗಳಿಸುತ್ತಿದ್ದರು ಎಂದೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿದೆ.

ಈಗಾಗಲೇ ಬಿಎಂಆರ್​​ಸಿಎಲ್ ಘೋಷಿಸಿದ ಪರಿಹಾರವು ಸಮರ್ಪಕವಾಗಿಲ್ಲ ಮತ್ತು ಇದು ಕೇವಲ ಸುರಕ್ಷತಾ ನಿರ್ಲಕ್ಷ್ಯವನ್ನು ಮರೆಮಾಚಲು ಘೋಷಿಸಿದ ಪರಿಹಾರವಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು.

ಇತ್ತೀಚೆಗಷ್ಟೇ ಸಾಲ ಮಾಡಿ ಫ್ಲ್ಯಾಟ್‌ಗೆ ತೆರಳಿದ್ದ ತೇಜಸ್ವಿನಿ ಅವರ ಕುಟುಂಬಕ್ಕೆ ಆಧಾರವಾಗಿದ್ದವರು. ಹಿಗಾಗಿ ಅವರ ಕುಟುಂಬಕ್ಕೆ 10 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

ಇದನ್ನೂ ಓದಿ: BMRCL: ನಮ್ಮ ಮೆಟ್ರೋದಲ್ಲಿ ಹೃದಯಘಾತದಿಂದ ವ್ಯಕ್ತಿ ಸಾವು; ಬಿಎಂಆರ್​ಸಿಎಲ್ ವಿರುದ್ಧ ಎಫ್​ಐಆರ್ ದಾಖಲು

ಪ್ರತಿವಾದಿಗಳಿಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನೋಟಿಸ್ ಜಾರಿಗೊಳಿಸಿದ ನಂತರ ನ್ಯಾಯಾಲಯವು ಪ್ರಕರಣವನ್ನು ಮುಂದೂಡಿದೆ. ಅರ್ಜಿಯ ಇತರ ಪ್ರತಿವಾದಿಗಳಲ್ಲಿ ಬಿಎಂಆರ್‌ಸಿಎಲ್‌ನ ಎಂಡಿ, ಮುಖ್ಯ ಎಂಜಿನಿಯರ್ ಮತ್ತು ಆಪರೇಷನ್ ಎಂಜಿನಿಯರ್, ಐಸಿಐಸಿಐ ಲೊಂಬಾರ್ಡ್ ಜನರಲ್ ಇನ್ಶೂರೆನ್ಸ್, ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿಯ ಎಂಡಿ ಮತ್ತು ಅದರ ಪ್ರಾಜೆಕ್ಟ್ ಮ್ಯಾನೇಜರ್ ಸೇರಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್