Bengaluru Metro: ಹೊಸೂರುವರೆಗೆ ಬೆಂಗಳೂರು ಮೆಟ್ರೋ ವಿಸ್ತರಣೆ ಸಾಧ್ಯತೆ: ತಮಿಳುನಾಡು ಸರ್ಕಾರಕ್ಕೆ ಸಮೀಕ್ಷೆ ನಡೆಸಲು ಸಿಎಂ ಬೊಮ್ಮಾಯಿ ಅನುಮತಿ

ಬೊಮ್ಮಸಂದ್ರದಿಂದ ಹೊಸೂರಿಗೆ ಮೆಟ್ರೋ ಸಂಪರ್ಕ ಕಲ್ಪಿಸುವ ಸಾಧ್ಯತೆ, ಸಾಧಕ-ಬಾಧಕಗಳ ಬಗ್ಗೆ ವಿಸ್ತೃತ ಅಧ್ಯಯನ ನಡೆಸಲು ತಮಿಳುನಾಡು ಸರ್ಕಾರಕ್ಕೆ ಕರ್ನಾಟಕ ಸರ್ಕಾರ ಅನುಮತಿ ನೀಡಿದೆ.

Bengaluru Metro: ಹೊಸೂರುವರೆಗೆ ಬೆಂಗಳೂರು ಮೆಟ್ರೋ ವಿಸ್ತರಣೆ ಸಾಧ್ಯತೆ: ತಮಿಳುನಾಡು ಸರ್ಕಾರಕ್ಕೆ ಸಮೀಕ್ಷೆ ನಡೆಸಲು ಸಿಎಂ ಬೊಮ್ಮಾಯಿ ಅನುಮತಿ
ಬೆಂಗಳೂರು ಮೆಟ್ರೋ ರೈಲು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 09, 2022 | 4:37 PM

ಬೆಂಗಳೂರು: ನಗರದ ಜೀವನಾಡಿಯಾಗಿರುವ ಮೆಟ್ರೋ ರೈಲು ಸಂಚಾರವನ್ನು (Metro Rail)  ತಮಿಳುನಾಡಿನ ಹೊಸೂರಿನವರೆಗೂ ವಿಸ್ತರಿಸಬೇಕು ಎಂದು ಕೃಷ್ಣಗಿರಿ ಸಂಸದ ಡಾ.ಎ.ಚೆಲ್ಲಕುಮಾರ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಈ ಪತ್ರ ಮತ್ತು ಅದಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ತಾಂತ್ರಿಕ ಮಾಹಿತಿಯನ್ನು ಕೇಂದ್ರ ಸರ್ಕಾರದ ನಗರಾಡಳಿತ ಸಚಿವಾಲಾಯಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (Bengaluru Metro Rail Corporation Ltd – BMRCL) ಕಳುಹಿಸಿದೆ. ಎರಡೂ ಸರ್ಕಾರಗಳು ಒಪ್ಪಿದರೆ, ಹೂಡಿಕೆ ಮತ್ತು ಆದಾಯದ ಹಂಚಿಕೆಯ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಂಡರೆ ಹೊಸೂರಿನವೆಗೆ ಮೆಟ್ರೋ ರೈಲು ವಿಸ್ತರಿಸಬಹುದು ಎಂದು ಮೆಟ್ರೋ ನಿಗಮ ಈ ಪತ್ರದಲ್ಲಿ ಹೇಳಿದೆ.

ಜನವರಿ 1, 2021ರಂದು ಪುಣೆಯಲ್ಲಿ ನಡೆದಿದ್ದ ಸಭೆಯಲ್ಲಿ ಕೇಂದ್ರ ನಗರಾಡಳಿತ ಕಾರ್ಯದರ್ಶಿ ಎರಡು ರಾಜ್ಯಗಳ ನಡುವೆ ಮೆಟ್ರೋ ಸಂಪರ್ಕ ಸಾಧ್ಯತೆಯ ಬಗ್ಗೆ ಕರ್ನಾಟಕ ಸರ್ಕಾರದ ಅಭಿಪ್ರಾಯ ಪಡೆದ ನಂತರ ಬಿಎಂಆರ್​ಸಿಎಲ್ ಪ್ರಸ್ತಾವ ಸಲ್ಲಿಸಬಹುದು ಎಂದು ಹೇಳಿದ್ದರು. ಅದರಂತೆ ಇದೀಗ ಬಿಎಂಆರ್​ಸಿಎಲ್ ಪ್ರಸ್ತಾವ ಸಲ್ಲಿಸಿದೆ. ಮೆಟ್ರೋ ಫೇಸ್​-2 ಹಂತದಲ್ಲಿ ಬೊಮ್ಮಸಂದ್ರದ ವರೆಗೆ ಮೆಟ್ರೋ ಸಂಪರ್ಕ ಒದಗಿಸಲಾಗುತ್ತದೆ. ಬೊಮ್ಮಸಂದ್ರದಿಂದ ಹೊಸೂರು ಸುಮಾರು 20.5 ಕಿಮೀ ದೂರವಿದೆ. ಈ ಪೈಕಿ 11.7 ಕಿಮೀ ಕರ್ನಾಟಕ ವ್ಯಾಪ್ತಿಯಲ್ಲಿದ್ದರೆ, 8.8. ಕಿಮೀ ತಮಿಳುನಾಡು ಗಡಿಯೊಳಗೆ ಇದೆ ಎಂದು ಮೆಟ್ರೋ ನಿಗಮ ವಿವರಿಸಿದೆ.

BMRCL-Letter

ಮೆಟ್ರೊ ನಿಗಮದ ವ್ಯವಸ್ಥಾಪಕರು ಬರೆದಿರುವ ಪತ್ರ

ಬೊಮ್ಮಸಂದ್ರ-ಹೊಸೂರು ಸಂಪರ್ಕ ಸಾಧ್ಯವಾಗಬೇಕಾದರೆ ಎರಡೂ ರಾಜ್ಯಗಳ ನಡುವೆ ಸಹಯೋಗ ಬೇಕಿರುತ್ತದೆ. ಯೋಜನಾ ವೆಚ್ಚದ ಹಂಚಿಕೆ, ಹಣಕಾಸು ನೆರವಿನ ಬಗ್ಗೆ ಸಹಮತ ಅಗತ್ಯವಿರುತ್ತದೆ. ಎರಡೂ ರಾಜ್ಯಗಳ ನಡುವೆ ಒಡಂಬಡಿಕೆ ಆಗಬೇಕು ಎಂದು ಮೆಟ್ರೋ ನೀತಿಯು ಸಲಹೆ ಮಾಡುತ್ತದೆ ಎಂದು ಮೆಟ್ರೋ ನಿಗಮ ತನ್ನ ಪತ್ರದಲ್ಲಿ ತಿಳಿಸಿದೆ. ಬೊಮ್ಮಸಂದ್ರ ಮೆಟ್ರೋ ನಿಲ್ದಾಣದಿಂದ ಅತ್ತಿಬೆಲೆ ಮಾರ್ಗವಾಗಿ ಹೊಸೂರಿಗೆ ಸಂಪರ್ಕ ಕಲ್ಪಿಸುವಂತೆ ಕೃಷ್ಣಗಿರಿಯ ಸಂಸದರಾದ ಡಾ.ಎ.ಚೆಲ್ಲಕುಮಾರ್ ಮಾರ್ಚ್ 21ರಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸಹ ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು.

ಬೊಮ್ಮಸಂದ್ರದಿಂದ ಹೊಸೂರಿಗೆ ಮೆಟ್ರೋ ಸಂಪರ್ಕ ಕಲ್ಪಿಸುವ ಸಾಧ್ಯತೆ, ಸಾಧಕ-ಬಾಧಕಗಳ ಬಗ್ಗೆ ವಿಸ್ತೃತ ಅಧ್ಯಯನ ನಡೆಸಲು ತಮಿಳುನಾಡು ಸರ್ಕಾರಕ್ಕೆ ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಮೆಟ್ರೋ ನೀತಿಗಳು ಮತ್ತು ಯೋಜನೆಗಳ ನಿಯಮಗಳ ಅನ್ವಯ ಶೀಘ್ರ ಸಮೀಕ್ಷೆ ನಡೆಸಲು ತಮಿಳುನಾಡು ಸರ್ಕಾರಕ್ಕೆ ಸೂಚನೆ ನೀಡಬಹುದು ಎಂದು ಬೆಂಗಳೂರು ಮೆಟ್ರೋ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಪತ್ರದಲ್ಲಿ ತಿಳಿಸಿದ್ದಾರೆ.

BMRCL-Proposal

ಹೊಸೂರುವರೆಗೆ ಮೆಟ್ರೋ ರೈಲು ಸಾಧ್ಯತೆ ವಿವರಿಸುವ ನಕಾಶೆ

ಸಿದ್ದರಾಮಯ್ಯ ಪತ್ರ

ಕೃಷ್ಣಗಿರಿ ಸಂಸದ ಡಾ.ಎ.ಚೆಲ್ಲಕುಮಾರ್ ಮನವಿ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದರು. ‘ಕರ್ನಾಟಕ ಮತ್ತು ತಮಿಳುನಾಡಿನ ನಡುವಣ ಹೆಬ್ಬಾಗಿಲಾಗಿ ಹೊಸೂರು ಇದೆ. ಇಲ್ಲಿ 3000ಕ್ಕೂ ಹೆಚ್ಚು ಸಣ್ಣ-ಮಧ್ಯಮ ಕೈಗಾರಿಕಾ ಘಟಕಗಳಿದ್ದು, ಕರ್ನಾಟಕ ಮತ್ತು ತಮಿಳುನಾಡಿನ ಸಾವಿರಾರು ಮಂದಿಗೆ ಉದ್ಯೋಗ ಕಲ್ಪಿಸಿದೆ. ಬೆಂಗಳೂರು-ಹೊಸೂರು ನಡುವೆ ಮೆಟ್ರೋ ಸಂಪರ್ಕ ಕಲ್ಪಿಸಿದರೆ ಎರಡೂ ರಾಜ್ಯಗಳ ಸಾವಿರಾರು ಜನರಿಗೆ ಅನುಕೂಲವಾಗುತ್ತದೆ’ ಎಂದು ಹೇಳಿದ್ದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Thu, 9 June 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ