AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಐಪಿಎಲ್​, ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ತಡರಾತ್ರಿ 2 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಆರ್‌ಸಿಬಿ ಮತ್ತು ಎಸ್‌ಆರ್‌ಎಚ್ ಐಪಿಎಲ್ ಪಂದ್ಯದ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸಂಚಾರ ಅವಧಿಯನ್ನು ಮಧ್ಯರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಪಂದ್ಯ ವೀಕ್ಷಿಸಿ ಹಿಂದಿರುಗುವ ಜನರಿಗೆ ಅನುಕೂಲವಾಗುವಂತೆ ಬಿಎಂಆರ್‌ಸಿಎಲ್ ಈ ಕ್ರಮ ಕೈಗೊಂಡಿದ್ದು, ಪಾರ್ಕಿಂಗ್ ಮತ್ತು ಟಿಕೆಟ್ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಇಂದಿನಿಂದ ಐಪಿಎಲ್​, ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ತಡರಾತ್ರಿ 2 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ
ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Mar 28, 2026 | 6:56 AM

Share

ಬೆಂಗಳೂರು, ಮಾರ್ಚ್ 28: ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್ (BMRCL) ಮೆಟ್ರೋ ರೈಲು ಸೇವಾ ಅವಧಿಯನ್ನು ವಿಸ್ತರಿಸಿದೆ. ಕ್ರಿಕೆಟ್ ಪ್ರೇಕ್ಷಕರಿಗೆ ಸುಗಮ ಪ್ರಯಾಣ ಕಲ್ಪಿಸಲು ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರೇಕ್ಷಕರು ಹೆಚ್ಚು ಮೆಟ್ರೋ ಸೇವೆಯನ್ನೇ ಬಳಸಿಕೊಳ್ಳುವಂತೆ ಸಂಚಾರಿ ಪೊಲೀಸರೂ ಸಹ ಮನವಿ ಮಾಡಿದ್ದಾರೆ.

ಪಂದ್ಯದ ದಿನದಂದು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯ ಬದಲಾಗಿ ತಡರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಮೆಜೆಸ್ಟಿಕ್ ನಿಲ್ದಾಣದಿಂದ ನಾಲ್ಕೂ ದಿಕ್ಕುಗಳಿಗೆ ಕೊನೆಯ ರೈಲು ಮಧ್ಯರಾತ್ರಿ 1:30ಕ್ಕೆ ಹೊರಡಲಿದೆ.

ಕೊನೆಯ ರೈಲು ಹೊರಡುವ ಸಮಯ

  • ವೈಟ್‌ಫೀಲ್ಡ್ (ಕಾಡುಗೋಡಿ): ರಾತ್ರಿ 12:30
  • ಚಲ್ಲಘಟ್ಟ: ರಾತ್ರಿ 12:45
  • ರೇಷ್ಮೆ ಸಂಸ್ಥೆ ಮತ್ತು ಮಾದಾವರ: ರಾತ್ರಿ 12:45
  • ಬೊಮ್ಮಸಂದ್ರ: ರಾತ್ರಿ 01:00
  • ಆರ್.ವಿ. ರಸ್ತೆ: ರಾತ್ರಿ 02:00

ಟಿಕೆಟ್ ರಹಿತ ಪ್ರಯಾಣಕ್ಕೆ ಕ್ಯೂಆರ್ ಕೋಡ್

ಐಪಿಎಲ್ ಪಂದ್ಯದ ಟಿಕೆಟ್‌ಗಳಲ್ಲಿ ಈಗಾಗಲೇ ನಮ್ಮ ಮೆಟ್ರೋ ಕ್ಯೂಆರ್ ಕೋಡ್ (ಟೂ-ವೇ ಟ್ರಾವೆಲ್) ಮುದ್ರಿತವಾಗಿರುತ್ತದೆ. ಡಿಜಿಟಲ್ ಟಿಕೆಟ್ ಹೊಂದಿರುವವರು ಸಹ ಇದನ್ನು ಬಳಸಿ ಪ್ರಯಾಣಿಸಬಹುದು. ಕ್ರೀಡಾಂಗಣಕ್ಕೆ ಬರುವವರು ಕಬ್ಬನ್ ಪಾರ್ಕ್ ಅಥವಾ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳನ್ನು ಬಳಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಐಪಿಎಲ್ ವಿಐಪಿ ಟಿಕೆಟ್‌ಗಾಗಿ ಶಾಸಕರ ಪಟ್ಟು: ನಾವು ಸಾಮಾನ್ಯರೇ? ಕ್ಯೂನಲ್ಲಿ ನಿಲ್ಲಲಾಗದೆಂದ ಕಾಶಪ್ಪನವರ್‌ಗೆ ತೇಜಸ್ವಿ ಸೂರ್ಯ ಟಾಂಗ್!

ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ

ವಾಹನ ದಟ್ಟಣೆ ನಿಯಂತ್ರಿಸಲು ನಗರದ 44 ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚಿನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ದ್ವಿಚಕ್ರ ವಾಹನಗಳಿಗೆ 30 ರೂ. ಮತ್ತು ಕಾರುಗಳಿಗೆ 60 ರೂ. ದರ ಇರಲಿದೆ. ಇದು ಮೆಟ್ರೋ ಸೇವೆ ಮುಕ್ತಾಯವಾಗುವವರೆಗೆ ಅನ್ವಯವಾಗುತ್ತದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ