Namma Metro: ಬೆಂಗಳೂರು ಮೆಟ್ರೋದಿಂದ ಮಹಿಳಾ ಪ್ರಯಾಣಿಕರಿಗೆ ಗುಡ್ನ್ಯೂಸ್: ಒಂದಲ್ಲ ಎರಡು ಬೋಗಿ ಮೀಸಲು
ಬೆಂಗಳೂರು ನಮ್ಮ ಮೆಟ್ರೋದಲ್ಲಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುವ ಪ್ರಕರಣಗಳು ಹೆಚ್ಚುತ್ತಿದ್ದು, ಇತ್ತೀಚೆಗೆ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ನಡೆದಿತ್ತು. ಈ ಬಗ್ಗೆ ಟಿವಿ9 ವರದಿ ಮಾಡಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಎಂಆರ್ಸಿಎಲ್, ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರಿಗೆ ಮೀಸಲಿರುವ ಕೋಚ್ ಅನ್ನು ಸಂಖ್ಯೆಯನ್ನು ಒಂದರಿಂದ ಎರಡು ಕೋಚ್ಗಳಿಗೆ ಏರಿಸಲಿದೆ.
ಬೆಂಗಳೂರು, ಜ.12: ನಮ್ಮ ಮೆಟ್ರೋದಲ್ಲಿ (Bengaluru Metro) ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುವ ಹಾಗೂ ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರೈಲಿನಲ್ಲಿ ಎರಡು ಕೋಚ್ಗಳನ್ನು ಮಹಿಳಾ ಪ್ರಯಾಣಿಕರಿಗೆ ಮೀಸಲಿಡಲಿದೆ. ಸದ್ಯ ನಮ್ಮ ಮೆಟ್ರೋ ರೈಲಿನಲ್ಲಿ ಒಂದು ಮಹಿಳಾ ಮೀಸಲು ಕೋಚ್ ಇದೆ. ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಗಳ ಬಗ್ಗೆ ಟಿವಿ9 ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಇದರಿಂದ ಎಚ್ಚೆತ್ತ ಮೆಟ್ರೋ ಅಧಿಕಾರಿಗಳು, ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಶೀಘ್ರದಲ್ಲೇ ಮಹಿಳೆಯರಿಗೆ 2 ಬೋಗಿ ಮೀಸಲಿಡಲು ಚಿಂತನೆ ನಡೆಸಿದ್ದಾರೆ.
ಇದನ್ನೂ ಓದಿ: ಮೆಟ್ರೋದಲ್ಲಿ ಸಾಲು ಸಾಲು ಅವಘಡ; ಎಚ್ಚೆತ್ತ ಬಿಎಂಆರ್ಸಿಎಲ್, ಪ್ರಯಾಣಿಕರ ಸುರಕ್ಷತೆಗೆ ಫ್ಲಾಟ್ ಫಾರ್ಮ್ ಸ್ಕ್ರೀನ್ ಡೋರ್ ನಿರ್ಮಾಣ
ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಜನವರಿ 1 ರಂದು ಯುವಕನೊಬ್ಬ ಹಿಂಬದಿಯಿಂದ ಖಾಸಗಿ ಅಂಗವನ್ನ ಮುಟ್ಟಿ ಲೈಂಗಿಕ ಕಿರುಕುಳ ಕೊಟ್ಟಿದ್ದಾನೆ ಎಂದು ಯುವತಿಯೊಬ್ಬಳು ತೀವ್ರ ತರಾಟೆಗೆ ತೆಗೆದುಕೊಂಡಿದ್ದಳು. ಅಲ್ಲದೆ, ವಿಚಾರ ತಿಳಿದ ಭದ್ರತಾ ಸಿಬ್ಬಂದಿ ವ್ಯಕ್ತಿಯನ್ನು ಹಿಡಿದಿದ್ದರು. ಈ ವೇಳೆ ಯುವತಿ ಮುಂದೆ ಆತ ತಪ್ಪೊಪ್ಪಿಕೊಂಡಿದ್ದನು.
ನವೆಂಬರ್ 20 ರಂದು ಇದೇ ಮೆಜೆಸ್ಟಿಕ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ, ಕೆಂಪು ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ಕೊಟ್ಟಿದ್ದರ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಡಿಸೆಂಬರ್ 7 ರಂದು ರಾಜಾಜಿನಗರಲ್ಲಿ ಮೆಟ್ರೋ ಹತ್ತಿದ್ದ ಯುವತಿಗೆ ಯುವಕನೊಬ್ಬ ಹಿಂಬದಿಯಿಂದ ಬಂದು ಆಕೆಯ ದೇಹವನ್ನ ಸ್ಪರ್ಶಿಸಿ ಅನುಚಿತವಾಗಿ ವರ್ತಿಸಿದ್ದ. ಈ ರೀತಿಯ ಪ್ರಕರಣ ನಡೆಯುತ್ತಿರುವುದರಿಂದ ಹೆಣ್ಣುಮಕ್ಕಳಿಗೆ ಮೆಟ್ರೋ ಎಷ್ಟು ಸುರಕ್ಷಿತ ಅನ್ನೋ ಆತಂಕಭರಿತ ಪ್ರಶ್ನೆ ಮೂಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:06 pm, Fri, 12 January 24