AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಬೆಂಗಳೂರು ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ: ಕೊರೊನಾ ಮೊದಲಿನ ವೇಳಾಪಟ್ಟಿ

ಕೊರೊನಾ ಪಿಡುಗು ಹರಡುವ ಮೊದಲು ಇದ್ದ ವೇಳಾಪಟ್ಟಿಯ ಮಾದರಿಯಲ್ಲಿಯೇ ನವೆಂಬರ್ 18ರಿಂದ ನಮ್ಮ ಮೆಟ್ರೋ ರೈಲುಗಳು ಸಂಚರಿಸಲಿವೆ.

Namma Metro: ಬೆಂಗಳೂರು ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ: ಕೊರೊನಾ ಮೊದಲಿನ ವೇಳಾಪಟ್ಟಿ
ಬೆಂಗಳೂರು ಮೆಟ್ರೋ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 16, 2021 | 8:37 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ. ನ.18ರಿಂದ ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆಯವರೆಗೆ ನಮ್ಮ ಮೆಟ್ರೋ ರೈಲುಗಳು ಸಂಚರಿಸಲಿವೆ. ಮೆಜೆಸ್ಟಿಕ್​ನಿಂದ 11:30ಕ್ಕೆ ಕೊನೆಯ ರೈಲು ಸಂಚರಿಸಲಿದೆ. ಭಾನುವಾರ ಬೆಳಿಗ್ಗೆ ಒಂದು ತಾಸು ತಡವಾಗಿ, ಎಂದರೆ 7 ಗಂಟೆಯಿಂದ ಸೇವೆ ಆರಂಭವಾಗಲಿದೆ. ಕೊರೊನಾ ಪಿಡುಗು ಹರಡುವ ಮೊದಲು ಇದ್ದ ವೇಳಾಪಟ್ಟಿಯ ಮಾದರಿಯಲ್ಲಿಯೇ ನವೆಂಬರ್ 18ರಿಂದ ನಮ್ಮ ಮೆಟ್ರೋ ರೈಲುಗಳು ಸಂಚರಿಸಲಿವೆ. ಕೊರೋನಾ ಅನ್​ಲಾಕ್ ಆದ ಬಳಿಕ ಹಂತಹಂತವಾಗಿ ನಮ್ಮ ಮೆಟ್ರೋ ಸೇವೆಯ ಅವಧಿ ವಿಸ್ತರಣೆಯಾಗಿತ್ತು. ಈವರೆಗೆ ಬೆಳಿಗ್ಗೆ 7ರಿಂದ ರಾತ್ರಿ 10ರವರೆಗೆ ನಮ್ಮ ಮೆಟ್ರೋ ರೈಲುಗಳು ಸಂಚರಿಸುತ್ತಿದ್ದವು.

Metro-Rail

ಮೆಟ್ರೋ ರೈಲು ನಿಗಮದ ಪತ್ರಿಕಾ ಹೇಳಿಕೆ

ನಮ್ಮ ಮೆಟ್ರೋ ರೈಲು ಸಂಚಾರಕ್ಕೆ 10 ವರ್ಷ ಪೂರ್ಣ ನಮ್ಮ ಮೆಟ್ರೋ (Namma Metro) ಸಂಚಾರಕ್ಕೆ 10 ವರ್ಷ ಪೂರ್ಣವಾಗಿದೆ. 2011 ರ ಅಕ್ಟೋಬರ್ 20ರಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಕಾರ್ಯಾರಂಭವಾಗಿತ್ತು. ಅಂದು ಹಳಿಗೆ ಇಳಿದಿದ್ದ ನಮ್ಮ ಮೆಟ್ರೋ ರೈಲು ಇಂದಿಗೆ 10 ವರ್ಷಗಳನ್ನು ಪೂರೈಸಿಕೊಂಡಿದೆ. ಎಂ.ಜಿ. ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ಮೊದಲಿಗೆ ಮೆಟ್ರೋ ಸಂಚಾರ ಆರಂಭ ಆಗಿತ್ತು. 6 ಕಿ.ಮೀ. ಮಾರ್ಗದಲ್ಲಿ ಮೊದಲ ಬಾರಿಗೆ ಮೆಟ್ರೋ ಸಂಚರಿಸಿತ್ತು.

ನಮ್ಮ ಮೆಟ್ರೋಗೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣಿಕರು, ಮೆಟ್ರೋಗೆ ಭೂಮಿ ನೀಡಿದವರಿಗೆ ಬಿಎಂಆರ್​ಸಿಎಲ್​ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್​ ಕೃತಜ್ಞತೆ ಸಮರ್ಪಣೆ ಮಾಡಿದ್ದಾರೆ. ಪ್ರಸ್ತುತ 56 ಕಿ.ಮೀ. ನಮ್ಮ ಮೆಟ್ರೋ ಸಂಚಾರ ನಡೆಸುತ್ತಿದೆ. ಇದನ್ನು 175 ಕಿ.ಮೀ.ಗೆ ವಿಸ್ತರಿಸಬೇಕೆಂಬುದು ನಮ್ಮ ಉದ್ದೇಶ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆಯಂತೆ 2024ರ ಡಿಸೆಂಬರ್​​ ವೇಳೆಗೆ ಈ ಮೆಟ್ರೋ ಕಾಮಗಾರಿ ಪೂರ್ಣ ಆಗಲಿದೆ. 175 ಕಿ.ಮೀ. ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ ಎಂದು ಬಿಎಂಆರ್​ಸಿಎಲ್​ ಎಂಡಿ ಅಂಜುಂ ಪರ್ವೇಜ್​ ಹೇಳಿದ್ದಾರೆ.

855 ಮೀಟರ್ ಸುರಂಗ ಕೊರೆದ ವಿಂದ್ಯಾ ಯಂತ್ರ ಅಕ್ಟೋಬರ್ 13 ರಂದು ನಮ್ಮ ಮೆಟ್ರೋ ಮತ್ತೊಂದು ಟಿಬಿಎಂ ಬ್ರೇಕ್​ ಥ್ರೂ ಪಡೆದುಕೊಂಡಿದೆ. ‘ವಿಂದ್ಯಾ’ ಯಂತ್ರ ಸುರಂಗ ಕೊರೆದು ಯಶಸ್ವಿಯಾಗಿ ಹೊರಬಂದಿದೆ. ಕಳೆದ ತಿಂಗಳು ಹೊರಬಂದಿದ್ದ ಟಿಬಿಎಂ ‘ಊರ್ಜಾ’ ಯಂತ್ರ, ಸುರಂಗ ಕೊರೆಯಲು ಯಶಸ್ವಿಯಾಗಿತ್ತು. ಅಕ್ಟೋಬರ್ 13 ರಂದು 2ನೇ ಯಂತ್ರ ವಿಂದ್ಯಾ ಸುರಂಗ ಕೊರೆದು ಯಶಸ್ವಿಯಾಗಿ ಹೊರಬಂದಿದೆ. ಕಂಟೋನ್ಮೆಂಟ್​ನಿಂದ ಶಿವಾಜಿನಗರದವರೆಗೆ ಸುರಂಗ ಮಾರ್ಗ ಕೊರೆಯಲಾಗಿದೆ. 855 ಮೀಟರ್​ ಸುರಂಗ ಕೊರೆದು ವಿಂದ್ಯಾ ಯಂತ್ರ ಹೊರಬಂದಿದೆ.

ನಮ್ಮ ಮೆಟ್ರೋ ಯೋಜನೆಯ ಎರಡನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ನೀಡಲಾಗಿದ್ದ 2025ರ ಗಡುವನ್ನು ಮಾರ್ಪಡಿಸಿ, 2024 ಕ್ಕೆ ನಿಗದಿ ಪಡಿಸುವಂತೆ ಹಾಗೂ ಇದಕ್ಕೆ ತಕ್ಕ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಮೊದಲು ಸೂಚನೆ ನೀಡಿದ್ದರು. ಇದು ಪೂರ್ಣಗೊಳ್ಳುತ್ತಿದ್ದಂತೆಯೇ ಮೂರನೇ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.

ಇದನ್ನೂ ಓದಿ: ನಮ್ಮ ಮೆಟ್ರೋ ಕಾಮಗಾರಿ ವೇಳೆ ಎಡವಟ್ಟು; 40 ಅಡಿ ಎತ್ತರದಿಂದ ಕೆಳಗೆ ಬಿದ್ದ ಕ್ರೇನ್ ಕಟ್ ಇದನ್ನೂ ಓದಿ: ನಾಯಂಡಹಳ್ಳಿ-ಕೆಂಗೇರಿ ನಡುವೆ ನಮ್ಮ ಮೆಟ್ರೋ ಮಾರ್ಗದಲ್ಲಿ ಕಳಪೆ ರಸ್ತೆಗಳ ನಿರ್ಮಾಣ: ಬಿಬಿಎಂಪಿಗೆ ಆತಂಕ

Published On - 8:05 pm, Tue, 16 November 21

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು