AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋದಲ್ಲಿ ಗನ್ ಪ್ರಾಂಕ್ ಮಾಡಿ ಸಂಕಷ್ಟಕ್ಕೆ ಸಿಲುಕಿದ ಯುವಕ!

ನಮ್ಮ ಮೆಟ್ರೋದಲ್ಲಿ ಆಟಿಕೆ ಗನ್ ಬಳಸಿ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ ಯುವಕನ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ದೀಪಾಂಜಲಿ ನಗರ ನಿಲ್ದಾಣದಲ್ಲಿ ಪ್ರಯಾಣಿಕರ ಆತಂಕಕ್ಕೆ ಕಾರಣನಾದ ಯುವಕ ಅರ್ಜುನ್‌ರನ್ನು ಮೆಟ್ರೋ ಸಿಬ್ಬಂದಿ ಮತ್ತು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಬಳಿಕ ಎಚ್ಚರಿಕೆ ನೀಡಿ, 400 ರೂ. ದಂಡ ವಿಧಿಸಿ ಬಿಡುಗಡೆ ಮಾಡಲಾಗಿದೆ.

ಮೆಟ್ರೋದಲ್ಲಿ ಗನ್ ಪ್ರಾಂಕ್ ಮಾಡಿ ಸಂಕಷ್ಟಕ್ಕೆ ಸಿಲುಕಿದ ಯುವಕ!
ಮೆಟ್ರೋದಲ್ಲಿ ಗನ್ ಪ್ರಾಂಕ್ ಮಾಡಿ ಸಂಕಷ್ಟಕ್ಕೆ ಸಿಲುಕಿದ ಯುವಕ!
ಕಿರಣ್​ ಸೂರ್ಯ
| Edited By: |

Updated on: Mar 09, 2026 | 2:47 PM

Share

ಬೆಂಗಳೂರು, ಮಾರ್ಚ್​ 09: ನಮ್ಮ ಮೆಟ್ರೋದಲ್ಲಿ (Namma Metro) ಆಟಿಕೆ ಗನ್ ಬಳಸಿ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ್ದ ಯುವಕನನ್ನು ಮೆಟ್ರೋ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪಾಂಡಿಚೇರಿ ಮೂಲದ ಅರ್ಜುನ್ ಎಂಬ ಯುವಕ ಈ ಕೃತ್ಯ ನಡೆಸಿರುವುದು ತಿಳಿದುಬಂದಿದೆ.

ಸೋಶಿಯಲ್ ಮೀಡಿಯಾ ಹುಚ್ಚಿಗೆ ದಂಡ ಕಟ್ಟಿದ ಆಸಾಮಿ

ಫೆಬ್ರವರಿ 6ರಂದು ಅರ್ಜುನ್ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಿಂದ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಾಮಾಜಿಕ ಜಾಲತಾಣಕ್ಕಾಗಿ ಪ್ರಾಂಕ್ ವಿಡಿಯೋ ಮಾಡುವ ಉದ್ದೇಶದಿಂದ ತನ್ನ ಜೇಬಿನಲ್ಲಿ ಆಟಿಕೆಯ ಗನ್ ಇಟ್ಟುಕೊಂಡಿದ್ದನು. ಪ್ರಯಾಣದ ವೇಳೆ ಅವನ ಜೇಬಿನಲ್ಲಿ ಗನ್ ಇರುವುದನ್ನು ಗಮನಿಸಿದ ಸಹ ಪ್ರಯಾಣಿಕರು ಆತಂಕಗೊಂಡು ತಕ್ಷಣ ಮೆಟ್ರೋ ಸಿಬ್ಬಂದಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಮೆಟ್ರೋ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಅರ್ಜುನ್​ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅದು ನಕಲಿ ಆಟಿಕೆಯ ಗನ್ ಆಗಿದ್ದು, ಕೇವಲ ಪ್ರಾಂಕ್ ವಿಡಿಯೋ ಮಾಡಲು ಇಟ್ಟುಕೊಂಡಿದ್ದೆ ಎಂದು ಆತ ಒಪ್ಪಿಕೊಂಡಿದ್ದಾನೆ.ನಂತರ ಪೊಲೀಸರು ಆತನಿಂದ ಕ್ಷಮಾಪಣಾ ಪತ್ರ ಬರೆಸಿಕೊಂಡು ಕಠಿಣ ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್ಸಿಎಲ್) ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಅರ್ಜುನ್ ಮೇಲೆ 400 ರೂಪಾಯಿ ದಂಡ ವಿಧಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​