ತಾಂತ್ರಿಕ ಸಮಸ್ಯೆ: ಯಶವಂತಪುರ-ನಾಗಸಂದ್ರ ನಡುವೆ ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ
ಯಶವಂತಪುರ-ನಾಗಸಂದ್ರ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಮೆಟ್ರೋ ನಿಲ್ದಾಣಕ್ಕೆ ಬಂದು ವಾಪಸ್ ಹೋಗುತ್ತಿದ್ದಾರೆ. ನಾಗಸಂದ್ರದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ಗೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗ ಇದಾಗಿದೆ.
ಬೆಂಗಳೂರು, ಡಿ.15: ಯಶವಂತಪುರ-ನಾಗಸಂದ್ರ ಮಾರ್ಗದ ಮೆಟ್ರೋ (Bengaluru Metro) ಸಂಚಾರ ಸ್ಥಗಿತಗೊಂಡ ಹಿನ್ನೆಲೆ ಪ್ರಯಾಣಿಕರು ಪರದಾಡುವಂತಾಗಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಮೆಟ್ರೋ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಮೆಟ್ರೋ ನಿಲ್ದಾಣಕ್ಕೆ ಬಂದು ವಾಪಸ್ ಹೋಗುತ್ತಿದ್ದಾರೆ.
ಕಳೆದ ಅರ್ಧ ಗಂಟೆಯಿಂದ ಯಶವಂತಪುರದಿಂದ ನಾಗಸಂದ್ರ ಹಾಗೂ ನಾಗಸಂದ್ರದಿಂದ ಯಶವಂತಪುರ ಕಡೆಗೆ ಹೋಗುವ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ. ನಾಗಸಂದ್ರದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ಗೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗ ಇದಾಗಿದೆ.
ಇದನ್ನೂ ಓದಿ: ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ನಮ್ಮ ಮೆಟ್ರೋದಲ್ಲಿದೆ ನಾನಾ ಸೌಲಭ್ಯ, 24 ಎಮರ್ಜೆನ್ಸಿ ಬಟನ್
ಟ್ರಾಫಿಕ್ ಕಿರಿಕಿರು ತಪ್ಪಿಸಲು ಹೆಚ್ಚಿನ ಜನರು ಅದರಲ್ಲೂ ಉದ್ಯೋಗಸ್ಥರು ಮೆಟ್ರೋದಲ್ಲಿ ಸಂಚಾರ ಮಾಡುತ್ತಿದ್ದಾರೆ. ಇದರಿಂದಾಗಿ ಸಮಯ ಕೂಡ ಉಳಿಯುತ್ತಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದ ಮೆಟ್ರೋ ಸಂಚಾರ ಸ್ಥಗಿತಗೊಂಡಿರುವುದರಿಂದ ಕೆಲಸಕ್ಕೆ ಹೋಗುವ ಜನರು ಬಸ್, ಆಟೋ ಹತ್ತುವಂತಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:18 am, Fri, 15 December 23