AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಪಿಂಕ್ ಮತ್ತು ಬ್ಲೂ ಲೈನ್‌ಗೆ ಬರಲಿವೆ 4 ಚಾಲಕರಹಿತ ರೈಲುಗಳು!

ನಮ್ಮ ಮೆಟ್ರೋ ಪಿಂಕ್ ಮತ್ತು ಬ್ಲೂ ಲೈನ್ ಮಾರ್ಗಗಳಿಗಾಗಿ ಈ ತಿಂಗಳು 4 ಡ್ರೈವರ್‌ಲೆಸ್ ರೈಲುಗಳು ಬಿಎಂಆರ್​ಸಿಎಲ್ ಸೇರಲಿವೆ. ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಪಿಂಕ್ ಲೈನ್ ಮಾರ್ಗ ಮೇ ತಿಂಗಳಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವ ಸಾಧ್ಯತೆಯಿದ್ದು, ವಿಮಾನ ನಿಲ್ದಾಣದ ಬ್ಲೂ ಲೈನ್ ಕಾಮಗಾರಿಯೂ ವೇಗ ಪಡೆದುಕೊಂಡಿದೆ. ಬೆಂಗಳೂರಿನಲ್ಲೇ ತಯಾರಾದ ಈ ರೈಲುಗಳ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಪಿಂಕ್ ಮತ್ತು ಬ್ಲೂ ಲೈನ್‌ಗೆ ಬರಲಿವೆ 4 ಚಾಲಕರಹಿತ ರೈಲುಗಳು!
ನಮ್ಮ ಮೆಟ್ರೋ (ಸಂಗ್ರಹ ಚಿತ್ರ)Image Credit source: tv9
ಕಿರಣ್​ ಸೂರ್ಯ
| Edited By: |

Updated on: Mar 27, 2026 | 8:03 AM

Share

ಬೆಂಗಳೂರು, ಮಾರ್ಚ್ 27: ಬೆಂಗಳೂರಿನ ಟ್ರಾಫಿಕ್ ಮತ್ತು ವಾಯುಮಾಲಿನ್ಯದ ಸಮಸ್ಯೆಗೆ ಮುಕ್ತಿ ನೀಡಲು ಬಿಎಂಆರ್‌ಸಿಎಲ್ (BMRCL) ತನ್ನ ಜಾಲ ವಿಸ್ತರಣೆಗೆ ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ನಗರದ ಬಹುನಿರೀಕ್ಷಿತ ಪಿಂಕ್ ಲೈನ್ ಮತ್ತು ಬ್ಲೂ ಲೈನ್ ಮೆಟ್ರೋ ಮಾರ್ಗಗಳಿಗಾಗಿ ಅತ್ಯಾಧುನಿಕ ಚಾಲಕರಹಿತ (Driverless Train) ರೈಲುಗಳು ಶೀಘ್ರದಲ್ಲೇ ಆಗಮಿಸಲಿವೆ. ಬೆಂಗಳೂರಿನ ಬಿಇಎಂಎಲ್ (BEML) ಕಾರ್ಖಾನೆಯಿಂದ ಈ ತಿಂಗಳು ಮತ್ತು ಮುಂದಿನ ತಿಂಗಳಲ್ಲಿ ಒಟ್ಟು ನಾಲ್ಕು ಹೊಸ ರೈಲು ಸೆಟ್‌ಗಳು ಬಿಎಂಆರ್‌ಸಿಎಲ್ ಕೈಸೇರಲಿವೆ.

ಮೇ ತಿಂಗಳಲ್ಲಿ ಪಿಂಕ್ ಲೈನ್ ಭಾಗಶಃ ಆರಂಭ ಸಾಧ್ಯತೆ

ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ಪಿಂಕ್ ಲೈನ್ ಮಾರ್ಗದ ಕಾಮಗಾರಿ ಅಂತಿಮ ಹಂತದಲ್ಲಿದೆ. ವಿಶೇಷವಾಗಿ ಕಾಳೇನ ಅಗ್ರಹಾರದಿಂದ ತಾವರೆಕೆರೆ ನಡುವಿನ ಒಟ್ಟು ಆರು ಮೆಟ್ರೋ ನಿಲ್ದಾಣಗಳನ್ನು ಮೇ ತಿಂಗಳಿನಲ್ಲಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲು ಬಿಎಂಆರ್‌ಸಿಎಲ್ ಯೋಜನೆ ರೂಪಿಸಿದೆ. ಈ ಮಾರ್ಗಕ್ಕಾಗಿ ಈಗಾಗಲೇ 5 ರೈಲುಗಳು ಬಂದಿದ್ದು, ಏಪ್ರಿಲ್ ವೇಳೆಗೆ ಮತ್ತೊಂದು ರೈಲು ಆಗಮಿಸಲಿದೆ. ಇದರಿಂದ ದಕ್ಷಿಣ ಬೆಂಗಳೂರಿನ ಜನರಿಗೆ ಟ್ರಾಫಿಕ್ ಕಿರಿಕಿರಿಯಿಂದ ದೊಡ್ಡ ಮಟ್ಟದ ಸಮಾಧಾನ ಸಿಗಲಿದೆ.

ಏರ್ ಪೋರ್ಟ್ ಮಾರ್ಗಕ್ಕೂ ಸಜ್ಜಾಗುತ್ತಿದೆ ಬ್ಲೂ ಲೈನ್

ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ 59 ಕಿ.ಮೀ ಉದ್ದದ ಬ್ಲೂ ಲೈನ್ ಮಾರ್ಗವು ಬೆಂಗಳೂರಿನ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ.

  • ಸಿಲ್ಕ್ ಬೋರ್ಡ್ ಟು ಕೆ.ಆರ್. ಪುರ: 19.75 ಕಿ.ಮೀ (13 ನಿಲ್ದಾಣಗಳು)
  • ಕೆ.ಆರ್. ಪುರ ಟು ಏರ್ ಪೋರ್ಟ್: 38 ಕಿ.ಮೀ ವಿಸ್ತೀರ್ಣ

ಈ ಬೃಹತ್ ಮಾರ್ಗಕ್ಕಾಗಿ ಒಟ್ಟು 38 ಚಾಲಕರಹಿತ ರೈಲುಗಳಿಗೆ ಬಿಇಎಂಎಲ್‌ಗೆ ಆರ್ಡರ್ ನೀಡಲಾಗಿದೆ. ಇದರ ಮೊದಲ ಹಂತವಾಗಿ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಎರಡು ರೈಲುಗಳು ಬರಲಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: RCB ಅಭಿಮಾನಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್! ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸೇವೆ ವಿಸ್ತರಣೆ

ಮೆಟ್ರೋ ಮಾರ್ಗಗಳ ವಿಸ್ತರಣೆಯ ಬಗ್ಗೆ ಸ್ಥಳೀಯ ನಿವಾಸಿಗಳು ಹಾಗೂ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ. ವಿಶ್ವದಲ್ಲೇ ಎರಡನೇ ಅತಿದೊಡ್ಡ ಟ್ರಾಫಿಕ್ ಸಿಟಿ ಎಂಬ ಕುಖ್ಯಾತಿ ಹೊಂದಿರುವ ಬೆಂಗಳೂರಿನಲ್ಲಿ ಮೆಟ್ರೋ ಒಂದೇ ಸರಿಯಾದ ಪರಿಹಾರ. ಪಿಂಕ್ ಲೈನ್ ಬೇಗ ಆರಂಭವಾದರೆ ತಾವರೆಕೆರೆ ಮತ್ತು ಸಿಲ್ಕ್ ಬೋರ್ಡ್ ಭಾಗದ ಟ್ರಾಫಿಕ್ ಸಮಸ್ಯೆ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಪ್ರಯಾಣಿಕರು ಆಶಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ