ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಮುಹೂರ್ತ ಫಿಕ್ಸ್: ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ
ಯೆಲ್ಲೋ ಲೈನ್ ಮೆಟ್ರೋಗಾಗಿ ಕಾದು ಕಾದು ಸುಸ್ತಾಗಿದ್ದವರಿಗೆ ಕೊನೆಗೂ ಉದ್ಘಾಟನೆಗೆ ಮೂಹುರ್ತ ಫಿಕ್ಸ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಬಹು ನಿರೀಕ್ಷಿತ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಮಾಡಲಿದ್ದಾರೆ. ಆ ಮೂಲಕ ಬೆಂಗಳೂರು ದಕ್ಷಿಣ ಭಾಗದ ಜನರ ಕನಸು ನನಸಾಗಲಿದೆ.

ಬೆಂಗಳೂರು, ಆಗಸ್ಟ್ 03: ಬಹು ನಿರೀಕ್ಷಿತ ಮೆಟ್ರೋ ಹಳದಿ ಮಾರ್ಗ (Metro Yellow Line) ಉದ್ಘಾಟನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಆಗಸ್ಟ್ 10ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಲಿದ್ದಾರೆ. ಆ ಮೂಲಕ ಸಾಕಷ್ಟು ವರ್ಷಗಳಿಂದ ಕಾಯುತ್ತಿದ್ದ ಬೆಂಗಳೂರು ದಕ್ಷಿಣ ಭಾಗದ ಜನರ ಕನಸು ನನಸಾಗಲಿದೆ. ಜೊತೆಗೆ ಈ ವೇಳೆ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ಕೂಡ ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ.
5,056.99 ಕೋಟಿ ರೂ ವೆಚ್ಚ
ಇತ್ತೀಚೆಗೆ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಆರಂಭಿಸಲು ರೈಲ್ವೆ ಸುರಕ್ಷತಾ ಆಯುಕ್ತರಿಂದ ಅನುಮತಿ ಸಿಕ್ಕಿದೆ. ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರವರೆಗಿನ ಮೆಟ್ರೋ ಹಳದಿ ಮಾರ್ಗ ಸುಮಾರು 19.15 ಕಿಲೋ ಮೀಟರ್ ಉದ್ದವಿದೆ. ಸುಮಾರು 5,056.99 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, 16 ನಿಲ್ದಾಣಗಳಿವೆ. ಇನ್ನು ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಲಿದೆ. ಈ ಮೆಟ್ರೋ ಫೇಸ್-3 ಮಾರ್ಗ 44.65 ಕಿಲೋ ಮೀಟರ್ ಉದ್ದ ಇರಲಿದೆ. 15,611 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ.
ಸಂಸದ ತೇಜಸ್ವಿ ಸೂರ್ಯ ಟ್ವೀಟ್
Hon. PM Sri @narendramodi Ji will inaugurate the all important Yellow Line metro on August 10.
On behalf of all people of Bengaluru, I thank PM for always prioritising infrastructure development of our city.
This line will cater to close to 8L riders and the infamous Silk… https://t.co/c9sWazW4WC
— Tejasvi Surya (@Tejasvi_Surya) August 3, 2025
ಈ ಕುರಿತು ಟ್ವೀಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ಈಗಾಗಲೇ ಹಳದಿ ಮಾರ್ಗದ ಸುರಕ್ಷತಾ ತಪಾಸಣೆ ಯಶಸ್ವಿವಾಗಿದೆ. ಆಗಸ್ಟ್ 10 ರಂದು ಪ್ರಧಾನಿ ಮೋದಿ ಅವರು ಉದ್ಘಾಟಿಸಲಿದ್ದು, ಬೆಂಗಳೂರು ದಕ್ಷಿಣ ಭಾಗಕ್ಕೆ ಒಂದು ಮಹತ್ವ ಕ್ಷಣವಾಗಲಿದೆ. ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಯಾವಾಗಲೂ ಆದ್ಯತೆ ನೀಡಿದ್ದಕ್ಕಾಗಿ ಬೆಂಗಳೂರಿನ ಎಲ್ಲಾ ಜನರ ಪರವಾಗಿ ನಾನು ಪ್ರಧಾನಿಯವರಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ: Bengaluru Metro Yellow Line: ಹಳದಿ ಮಾರ್ಗ ಮೆಟ್ರೋ ಸಂಚಾರಕ್ಕೆ ಸುರಕ್ಷತಾ ಆಯುಕ್ತರಿಂದ ಗ್ರೀನ್ ಸಿಗ್ನಲ್
ಈ ಮಾರ್ಗವು ಸುಮಾರು 8 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದ್ದು, ಸಿಲ್ಕ್ ಬೋರ್ಡ್ ಟ್ರಾಫಿಕ್ ಜಾಮ್ ಸಮಸ್ಯೆಗೆ ಪರಿಹಾರ ಸಿಗಲಿದೆ. ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕ ಸಾರಿಗೆಯೇ ಏಕೈಕ ಆಯ್ಕೆಯಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: Metro Yellow Line: ಕೊನೆಗೂ ಮೆಟ್ರೋ ಹಳದಿ ಮಾರ್ಗ ಸಂಚಾರಕ್ಕೆ ಮುಹೂರ್ತ ಬಹುತೇಕ ಫಿಕ್ಸ್, ಮೋದಿಯಿಂದ ಚಾಲನೆ ಸಾಧ್ಯತೆ
ಮೆಟ್ರೋ ಹಳದಿ ಮಾರ್ಗ ಉದ್ಘಾಟಣೆ ಜೊತೆಗೆ ಮೆಟ್ರೋ 3ನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸುಮಾರು 20 ಸಾವರಿ ಕೋಟಿ ರೂ ಮೌಲ್ಯದ ಮೆಟ್ರೋ ಮೂಲಸೌಕರ್ಯವನ್ನು ಬೆಂಗಳೂರು ದಕ್ಷಿಣ ಪ್ರದೇಶಕ್ಕೆ ಮಾತ್ರ ಮೀಸಲಿಡಲಾಗಿದೆ. ಈ ಭಾಗದ ಸಾರ್ವಜನಿಕ ಸಾರಿಗೆ ಮೂಲಸೌಕರ್ಯಕ್ಕೆ ಪ್ರಧಾನಿ ಮೋದಿ ಅವರ ನಿರಂತರ ಬದ್ಧತೆ, ಪ್ರೀತಿಗಾಗಿ ನಾವು ಅವರಿಗೆ ಕೃತಜ್ಞರಾಗಿರುತ್ತೇವೆ ಎಂದು ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:32 am, Sun, 3 August 25







