ಆರ್‌ವಿ ರಸ್ತೆಯಿಂದ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಸದ್ಯಕ್ಕೆ ಆರಂಭವಿಲ್ಲ; ಸಾರ್ವತ್ರಿಕ ಚುನಾವಣೆಯ ನಂತರವೇ ಪ್ರಾರಂಭ

Namma Metro Yellow Line: ಮಾದರಿ ರೈಲನ್ನು ಸ್ವೀಕರಿಸಿದ ನಂತರ, BMRCL ಗೆ ಅಗತ್ಯವಾದ ಪ್ರಾಯೋಗಿಕ ಸಂಚಾರ ನಡೆಸಲು ಮತ್ತು ವಾಣಿಜ್ಯ ಕಾರ್ಯಾಚರಣೆಗಳಿಗೆ ಅನುಮೋದನೆ ಪಡೆಯಲು ಕನಿಷ್ಠ ಮೂರು ತಿಂಗಳ ಅಗತ್ಯವಿದೆ. ಹಾಗಾಗಿ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಸದ್ಯಕ್ಕೆ ಆರಂಭವಿಲ್ಲ; ಸಾರ್ವತ್ರಿಕ ಚುನಾವಣೆಯ ನಂತರವೇ ಪ್ರಾರಂಭ - ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿಎಲ್ ಯಶವಂತ ಚವಾಣ್

ಆರ್‌ವಿ ರಸ್ತೆಯಿಂದ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಸದ್ಯಕ್ಕೆ ಆರಂಭವಿಲ್ಲ; ಸಾರ್ವತ್ರಿಕ ಚುನಾವಣೆಯ ನಂತರವೇ ಪ್ರಾರಂಭ
ಆರ್‌ವಿ ರಸ್ತೆಯಿಂದ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಸದ್ಯಕ್ಕೆ ಆರಂಭವಿಲ್ಲ
Follow us
|

Updated on: Dec 14, 2023 | 12:18 PM

ಬೆಂಗಳೂರು: ಬೆಂಗಳೂರು ಮೆಟ್ರೋ ಹಳದಿ ಮಾರ್ಗದ ( Namma Metro Yellow Line) ಆರಂಭಕ್ಕೆ ಫೆಬ್ರವರಿ 2024 ಗಡುವು ಬದಲಾಗಿದ್ದರೂ ಆ ವೇಳೆಗೆ ಅದು ಪ್ರಾರಂಭವಾಗುವುದು ಅನುಮಾನವಾಗಿದೆ. ಮುಂದಿನ ಸಾರ್ವತ್ರಿಕ ಚುನಾವಣೆಯ ನಂತರವೇ (Lok Sabha elections) ಎಲೆಕ್ಟ್ರಾನಿಕ್ಸ್ ಸಿಟಿ ಮತ್ತು ದಕ್ಷಿಣ ಬೆಂಗಳೂರಿನ ಇತರ ಭಾಗಗಳ ನಡುವೆ ನಮ್ಮ ಮೆಟ್ರೋ ಸಂಪರ್ಕ ಪಡೆಯುತ್ತದೆ. ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಪ್ರಕಾರ ಹಳದಿ ಮಾರ್ಗದ ಮೂಲಮಾದರಿಯ ರೈಲು ಗುರುವಾರ ಚೀನಾದಿಂದ ರವಾನೆಯಾಗಲಿದೆ ಮತ್ತು ಅದು ಜನವರಿಯಲ್ಲಿ ನಗರವನ್ನು ತಲುಪಲಿದೆ ಎಂದು ನಿರೀಕ್ಷಿಸಲಾಗಿದೆ. ಆರು ಬೋಗಿಗಳ ರೈಲು ಜೋಡಿಯ ಸಾಗಣೆಗೆ ಎಲ್ಲ ಅಡೆತಡೆಗಳನ್ನು ತೆರವುಗೊಳಿಸಲಾಗಿದೆ ಎಂದು ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಮಾದರಿ ರೈಲನ್ನು (prototype train) ಸ್ವೀಕರಿಸಿದ ನಂತರ, BMRCL ಗೆ ಅಗತ್ಯವಾದ ಪ್ರಾಯೋಗಿಕ ಸಂಚಾರ ನಡೆಸಲು ಮತ್ತು ವಾಣಿಜ್ಯ ಕಾರ್ಯಾಚರಣೆಗಳಿಗೆ ಅನುಮೋದನೆ ಪಡೆಯಲು ಕನಿಷ್ಠ ಮೂರು ತಿಂಗಳ ಅಗತ್ಯವಿದೆ. ಹಾಗಾಗಿ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಸದ್ಯಕ್ಕೆ ಆರಂಭವಿಲ್ಲ; ಸಾರ್ವತ್ರಿಕ ಚುನಾವಣೆಯ ನಂತರವೇ ಪ್ರಾರಂಭ ಎಂದು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿಎಲ್ ಯಶವಂತ ಚವಾಣ್ ಹೇಳಿದ್ದಾರೆ.

Also Read: ಬಿಎಂಟಿಸಿಗೆ ಇನ್ನೊಂದು ಬಲಿ; ತಾಯಿ ಸಾವು, ಕೂದಲೆಳೆ ಅಂತರದಲ್ಲಿ ಅಪ್ಪ-ಮಗಳು ಪಾರು

ಲೋಕಸಭಾ ಚುನಾವಣೆಯ ಕಾರಣ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬಿಎಂಆರ್‌ಸಿಎಲ್‌ಗೆ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಸಾಧ್ಯವಾಗುವುದಿಲ್ಲ. 19.15 ಕಿ ಮೀ ಹಳದಿ ಮಾರ್ಗವು ಆಯಕಟ್ಟಿನದ್ದಾಗಿದ್ದು, ಪ್ರಾಮುಖ್ಯತೆಯನ್ನು ಹೊಂದಿದೆ. ಏಕೆಂದರೆ ಇದು ಆರ್‌ವಿ ರಸ್ತೆಯನ್ನು ಬೊಮ್ಮಸಂದ್ರದಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ ಮೂಲಕ (RV Road with Bommasandra via Silk Board Junction and Electronics City) ಸಂಪರ್ಕಿಸುತ್ತದೆ. ಸಿವಿಲ್ ಕಾಮಗಾರಿಗಳು (ವಯಾ ಡಕ್ಟ್‌ಗಳು ಮತ್ತು ನಿಲ್ದಾಣಗಳ ನಿರ್ಮಾಣ) 99.7% ಪೂರ್ಣಗೊಂಡಿದ್ದರೂ, ರೈಲು ಸೆಟ್‌ಗಳ ಕೊರತೆಯಿಂದ ಮಾರ್ಗದ ಪ್ರಾರಂಭವನ್ನು ತಡೆಹಿಡಿಯಲಾಗಿದೆ ಎಂದು deccanherald.com ವರದಿ ಮಾಡಿದೆ.

ಫೆಬ್ರವರಿ 2020 ರಲ್ಲಿ, ಚೀನಾದ ಸರ್ಕಾರಿ ಸ್ವಾಮ್ಯದ ಸಿಆರ್‌ಆರ್‌ಸಿ ನಾನ್‌ಜಿಂಗ್ ಪುಜೆನ್ ಕೋ ಲಿಮಿಟೆಡ್ ಸುಮಾರು ನಾಲ್ಕು ವರ್ಷಗಳಲ್ಲಿ BMRCL ಗೆ 216 ಕೋಚ್‌ಗಳನ್ನು (36 ರೈಲು ಸೆಟ್‌ಗಳು) ಪೂರೈಸುವ ಒಪ್ಪಂದವನ್ನು ಪಡೆದಿದೆ. ಈ ರೈಲುಸೆಟ್‌ಗಳಲ್ಲಿ 21 ಪರ್ಪಲ್ ಮತ್ತು ಗ್ರೀನ್ ಲೈನ್‌ಗಳಲ್ಲಿ ಮತ್ತು ಉಳಿದವುಗಳನ್ನು ಹಳದಿ ಲೈನ್‌ನಲ್ಲಿ ನಿಯೋಜನೆಗೊಂಡಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?