ಈಶ್ವರ್ ಖಂಡ್ರೆ ವಿಚಾರಕ್ಕೆ ಅವಾಚ್ಯವಾಗಿ ನಿಂದಿಸಿದ ಸಚಿವ ಸೋಮಣ್ಣ: ರೇಣುಕ ಪ್ರಸನ್ನ ಆರೋಪ

|

Updated on: Mar 09, 2023 | 3:24 PM

ವಿಧಾನಸಭೆ ಸಭಾಪತಿ ಸ್ಥಾನದಲ್ಲಿ ಕುಳಿತುಕೊಂಡು ಒಂದು ಪಕ್ಷದ ವಕ್ತಾರರಂತೆ ವರ್ತನೆ ತೋರಿದ್ದಾರೆ ಎಂದು ಆರೋಪಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯದ ವಿವಿಧ ಕಡೆಗಳಲ್ಲಿ ಪ್ರತಿಭಟನೆಗಳು ನಡೆದ್ದವು. ಸಭಾಧ್ಯಕ್ಷ ಸ್ಥಾನದ ಘನತೆ ಗೌರವಗಳಿಗೆ ಧಕ್ಕೆ ತಂದಿರುವ ಕಾಗೇರಿಯವರು ತಮ್ಮ ಸ್ಥಾನ ತ್ಯಜಿಸುವಂತೆ ಅಖಿಲ ಭಾರತ ವೀರಶೈವ ಮಹಾಸಭೆಯು ಒತ್ತಾಯಿಸಿತ್ತು.

ಈಶ್ವರ್ ಖಂಡ್ರೆ ವಿಚಾರಕ್ಕೆ ಅವಾಚ್ಯವಾಗಿ ನಿಂದಿಸಿದ ಸಚಿವ ಸೋಮಣ್ಣ: ರೇಣುಕ ಪ್ರಸನ್ನ ಆರೋಪ
ವಿ. ಸೋಮಣ್ಣ ಮತ್ತು ಈಶ್ವರ್ ಖಂಡ್ರೆ
Follow us on

ಬೆಂಗಳೂರು: ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಭಾಲ್ಕಿ ಶಾಸಕ ಈಶ್ವರ ಖಂಡ್ರೆ (Eshwar Khandre) ವಿರುದ್ಧ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಕೆಂಡಾಮಂಡಲರಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿದ ಅಖಿಲ ಅಖಿಲ ಭಾರತ ವೀರಶೈವ ಮಹಾಸಭಾ (Akhila Bharatha Veerashaiva Mahasabha) ಕಾಗೇರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತಮ್ಮ ಸ್ಥಾನ ತ್ಯಜಿಸುವಂತೆ ಆಗ್ರಹಿಸಿತ್ತು. ಈ ವಿಚಾರವಾಗಿ ಮಹಾಸಭಾ ಕಾರ್ಯದರ್ಶಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಸಚಿವ ವಿ.ಸೋಮಣ್ಣ (V Somanna) ಅವರ ವಿರುದ್ಧ ಕೇಳಿಬಂದಿದೆ. ಈಶ್ವರ್ ಖಂಡ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಫೋನ್ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವುದಾಗಿ ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ ಅವರು ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.

ವಿಧಾನಸಭೆಯ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ವಿರುದ್ಧ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕೆಂಡಾಮಂಡಲರಾದ ಘಟನೆ ನಡೆದಿತ್ತು. ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಚಿವ ಅಶ್ವಥ್ ನಾರಾಯಣ ನೀಡಿರುವ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಪ್ರತಿಪಕ್ಷದ ಸದಸ್ಯರು ಕಲಾಪದ ವೇಳೆ ಪ್ರತಿಭಟನೆ ನಡೆಸಿದರು. ಈ ವೇಳೆ ಖಂಡ್ರೆ ಅವರು ಏರು ಧ್ವನಿಯಲ್ಲಿ ಮಾತನಾಡಿದರು. ಸ್ಪೀಕರ್ ಕುಳಿತುಕೊಳ್ಳಲು ಸೂಚಿಸದರೂ ಮಾತು ನಿಲ್ಲಿಸಲಿಲ್ಲ. ಇದರಿಂದ ಕೋಪಗೊಂಡ ಕಾಗೇರಿ, ಖಂಡ್ರೆ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು.

“ನೀವು ಸದನದಲ್ಲಿ ಈ ರೀತಿ ಮಾತನಾಡುವುದು ಗೌರವ ತರುವುದಿಲ್ಲ. ಏನು ತಮಾಷೆ ಮಾಡುತ್ತೀರಿ ಸದನದಲ್ಲಿ. ನಿಮ್ಮನ್ನು ಯಾರು ಆಯ್ಕೆ ಮಾಡುವವರು? ನಿಮ್ಮಂತವರನ್ನು ಆಯ್ಕೆ ಮಾಡುವುದು ಈ ವ್ಯವಸ್ಥೆಗೆ ಅಗೌರವ ಅಂತ ಆ ಜನರಿಗೆ ನಾವು ಹೇಳುತ್ತೇವೆ” ಎಂದು ಈಶ್ವರ್ ಖಂಡ್ರೆ ವಿರುದ್ಧ ಕಾಗೇರಿ ಅವರು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಸಚಿವ ಸೋಮಣ್ಣ ಮುನಿಸು ಶಮನಕ್ಕೆ ಸಿಎಂ ಬೊಮ್ಮಾಯಿ ಯತ್ನ; ಸೋಮಣ್ಣ ನಡೆ ಇನ್ನೂ ನಿಗೂಢ

ಸಭಾಪತಿ ಹೇಳಿಕೆ ಖಂಡಿಸಿದ ಅಖಿಲ ಭಾರತ ವೀರಶೈವ ಮಹಾಸಭಾ, ಮಾಧ್ಯಮ ಪ್ರಕಟಣೆ ಹೊರಡಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಭಾಧ್ಯಕ್ಷರ ಸ್ಥಾನಕ್ಕೆ ತಕ್ಕಂತೆ ನಡೆದುಕೊಂಡಿಲ್ಲ ಎಂದು ಆರೋಪಿಸಿತ್ತು. ಒಂದು ಪಕ್ಷದ ವಕ್ತಾರರಂತೆ ವರ್ತಿಸಿರುವುದು ಅಕ್ಷಮ್ಯ ಅಪರಾಧ. ಸಭಾಧ್ಯಕ್ಷ ಸ್ಥಾನದ ಘನತೆ ಗೌರವಗಳಿಗೆ ಧಕ್ಕೆ ತಂದಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಕ್ಷಣವೇ ಸಭಾಧ್ಯಕ್ಷ ಸ್ಥಾನವನ್ನು ತ್ಯಜಿಸಬೇಕಾಗಿ ಎಂದು ಮಹಾಸಭೆಯು ಒತ್ತಾಯಿಸಿತ್ತು. ಈಶ್ಚರ್ ಖಂಡ್ರೆ ಪರ ಪ್ರಕಟಣೆ ಹೊರಡಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯದರ್ಶಿ ರೇಣುಕ ಪ್ರಸನ್ನ ಅವರು ಹೋರಾಟಕ್ಕೆ ಕರೆ ನೀಡಿದ್ದರು.

ಮಹಾಸಭಾ ನೀಡಿದ ಹೋರಾಟ ಕರೆಗೆ ರಾಜ್ಯದ ವಿವಿಧ ಕಡೆಗಳಲ್ಲಿ ಪ್ರತಿಭಟನೆಗಳು ನಡೆದವು. ಸ್ಪೀಕರ್​ ಕಾಗೇರಿ ವಿರುದ್ಧ ಬೀದರ್ ಜಿಲ್ಲೆ ಭಾಲ್ಕಿ ಪಟ್ಟಣದಲ್ಲಿ ಪ್ರತಿಭಟನೆ ನಡೆದಿತ್ತು. ಭಾಲ್ಕಿ ಕ್ಷೇತ್ರದ ಮತದಾರರನ್ನು ಸ್ಪೀಕರ್ ಅವಮಾನಿಸಿದ್ದಾರೆಂದು ಆರೋಪಿಸಿ ಭಾಲ್ಕಿ ಪಟ್ಟಣದಲ್ಲಿ ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿತ್ತು. ಯೋಗ್ಯತೆ ಇಲ್ಲದ ಸ್ಪೀಕರ್​ಗೆ ಧಿಕ್ಕಾರ ಎಂದು ಪ್ರತಿಭಟನಾಕಾರರ ಘೋಷಣೆ ಕೂಗಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ