ಬೆಂಗಳೂರು: ಬಲವಂತವಾಗಿ ಮದ್ವೆ ಮಾಡಿದ ತಂದೆ ವಿರುದ್ದವೇ ದೂರು ದಾಖಲಿಸಿದ ಅಪ್ರಾಪ್ತ ವಯಸ್ಸಿನ ಮಗಳು

ಅಪ್ರಾಪ್ತ ಬಾಲಕಿಯೊಬ್ಬಳು ತನ್ನನ್ನು ಬೇರೆಯವರಿಗೆ ಬಲವಂತವಾಗಿ ಮದುವೆ ಮಾಡಿಸಿದ ಆರೋಪದ ಮೇಲೆ ತನ್ನ ತಂದೆಯ ವಿರುದ್ಧವೇ ಪೊಲೀಸ್ ಠಾಣೆಗೆ ದೂರು ದಾಖಲಿಸಿದ ಘಟನೆ ನಡೆದಿದೆ.

ಬೆಂಗಳೂರು: ಬಲವಂತವಾಗಿ ಮದ್ವೆ ಮಾಡಿದ ತಂದೆ ವಿರುದ್ದವೇ ದೂರು ದಾಖಲಿಸಿದ ಅಪ್ರಾಪ್ತ ವಯಸ್ಸಿನ ಮಗಳು
ಪ್ರಾತಿನಿಧಿಕ ಚಿತ್ರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 14, 2023 | 1:53 PM

ಬೆಂಗಳೂರು, ಜು.14: ಅಪ್ರಾಪ್ತ ಬಾಲಕಿ(Minor Girl)ಯೊಬ್ಬಳು ತನ್ನನ್ನು ಬೇರೆಯವರಿಗೆ ಬಲವಂತವಾಗಿ ಮದುವೆ(Marriage) ಮಾಡಿಸಿದ ಆರೋಪದ ಮೇಲೆ ತನ್ನ ತಂದೆಯ ವಿರುದ್ಧವೇ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾಳೆ. ತೆಲಂಗಾಣದ ಹೈದರಾಬಾದ್ ನಿವಾಸಿಯಾದ ಸಂತ್ರಸ್ತೆ ದೂರಿನ ಪ್ರಕಾರ ‘ಬೆಂಗಳೂರಿನ ನಿವಾಸಿಯಾದ ಶಿವಶರಣಪ್ಪ ಅವರನ್ನು ಮದುವೆಯಾಗುವಂತೆ ಆಕೆಯ ತಂದೆ ಒತ್ತಾಯಿಸಿದ್ದಾರೆ. ಆದರೆ, ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದರಿಂದ ಈ ಮದುವೆಯನ್ನ ತಿರಸ್ಕರಿಸಿದ್ದಳು. ಆದರೂ ಒತ್ತಾಯ ಪೂರ್ವಕವಾಗಿ 16 ವರ್ಷದ ಬಾಲಕಿಗೆ ಮದುವೆ ಮಾಡಿಸಿದ ತಂದೆ ಮತ್ತು ವರನ ಮೇಲೆ ಸ್ವತಃ ಮಗಳೇ ದೂರು ದಾಖಲಿಸಿದ್ದಾಳೆ.

ಘಟನೆ ವಿವರ

ಜೂನ್ 13 ರಂದು ಆಕೆಯ ತಂದೆ ಶ್ರೀನು ಕಲಬುರಗಿ ಜಿಲ್ಲೆಯ ಗ್ರಾಮದಲ್ಲಿರುವ ತನ್ನ ಅಜ್ಜಿಯ ಮನೆಗೆ ಬಾಲಕಿಯನ್ನು ಕರೆತಂದನು. ಅದೇ ದಿನ ಶಿವಶರಣಪ್ಪ ಕೂಡ ಗ್ರಾಮಕ್ಕೆ ಆಗಮಿಸಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಜೂನ್ 14 ರಂದು ಬಾಲಕಿಯನ್ನು ಆಕೆಯ ತಂದೆ ಶ್ರೀನು ಸಹಾಯದೊಂದಿಗೆ ಗ್ರಾಮದ ದೇವಸ್ಥಾನಕ್ಕೆ ಕರೆದೊಯ್ದು, ಅಲ್ಲಿ ಶಿವಶರಣಪ್ಪ ಎಂಬಾತನ ಜೊತೆಗೆ ಮದುವೆಯಾಗುವಂತೆ ಒತ್ತಾಯಿಸಲಾಗಿದೆ. ಶಿವಶರಣಪ್ಪ ಅಪ್ರಾಪ್ತ ವಯಸ್ಕಳೆಂದು ತಿಳಿದಿದ್ದರೂ ಮದುವೆಯಾಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಇದನ್ನೂ ಓದಿ:ಅಕ್ಕ-ತಂಗಿಯನ್ನು ಮದುವೆಯಾದ ಕೇರಳದ ವ್ಯಕ್ತಿಯ ಕಿರಿಯ ಪತ್ನಿ ಮುಸ್ಲಿಂ ಧರ್ಮಕ್ಕೆ ಮತಾಂತರ; ನೆರೆಹೊರೆಯರು ಬಲವಂತವಾಗಿ ಮತಾಂತರ ಮಾಡಿದ್ದಾರೆ ಎಂದು ಆರೋಪ

ಬಳಿಕ ಜೂನ್ 15 ರಂದು ಅಪ್ರಾಪ್ತ ಬಾಲಕಿ ಮತ್ತು ಶಿವಶರಣಪ್ಪ ಬೆಂಗಳೂರಿಗೆ ಆಗಮಿಸಿ, ಬೆಳ್ಳಂದೂರಿನ ಮನೆಯೊಂದರಲ್ಲಿ ಬೀಗ ಹಾಕಿ, ದೈಹಿಕ ಸಂಬಂಧ ಹೊಂದಲು ಯತ್ನಿಸಿದ್ದನಂತೆ. ನಂತರ ಇದಕ್ಕೆ ಆಕೆ ವಿರೋಧಿಸಿದಾಗ ನಿಲ್ಲಿಸಿದ್ದಾರೆ ಎಂದು ಅಪ್ರಾಪ್ತ ಬಾಲಕಿ ಆರೋಪಿಸಿದ್ದಾಳೆ. ಜುಲೈ 12 ರಂದು, ಹುಡುಗಿ ಪೊಲೀಸ್ ಕಂಟ್ರೋಲ್ ರೂಂಗೆ ಡಯಲ್ ಮಾಡಿ, ತನ್ನ ಸಮಸ್ಯೆಯನ್ನ ಹೇಳಿಕೊಂಡಿದ್ದಾಳೆ. ನಂತರ ಸ್ಥಳಕ್ಕಾಗಮಿಸಿದ ಪೊಲೀಸರು ಆಕೆಯನ್ನು ಠಾಣೆಗೆ ಕರೆದೊಯ್ದಿದ್ದು, ಬಾಲಕಿಯಿ ದೂರು ದಾಖಲಿಸಿದ್ದಾಳೆ.

ಅಪ್ರಾಪ್ತರ ದೂರಿನ ಮೇರೆಗೆ ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಿವಶರಣಪ್ಪ ಮತ್ತು ತಂದೆ ಶ್ರೀನು ಅವರ ವಿರುದ್ಧ ಬಾಲ್ಯವಿವಾಹ ನಿಷೇಧ ಕಲಂ 12 ಮತ್ತು 9 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಾಯಿದೆ, ಸೆಕ್ಷನ್ 12 (ಲೈಂಗಿಕ ಕಿರುಕುಳ), ಪೋಕ್ಸೊ (ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ) ಕಾಯಿದೆ ಮತ್ತು ಸೆಕ್ಷನ್ 34 ಮತ್ತು 344 ರನ್ವಯ ಶಿವಶರಣಪ್ಪನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತಲೆಮರೆಸಿಕೊಂಡಿರುವ ಬಾಲಕಿಯ ತಂದೆ ಶ್ರೀನು ಅವರನ್ನು ಪತ್ತೆ ಹಚ್ಚಲು ಪೊಲೀಸರು ಶುರು ಮಾಡಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Fri, 14 July 23

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?