ಬೆಂಗಳೂರು: ಬರ್ತ್‌ಡೇ ಸೆಲಬ್ರೇಷನ್ ನೆಪದಲ್ಲಿ ಕರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ
ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 26 ವರ್ಷದ ಯುವಕ ಹುಟ್ಟುಹಬ್ಬದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿರುವಂತಹ ಘಟನೆ ಶುಕ್ರವಾರ ಸಂಜೆ 7:30ರ ಸುಮಾರಿಗೆ ನಡೆದಿದೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ.

ನೆಲಮಂಗಲ, ನವೆಂಬರ್ 16: ಬೆಂಗಳೂರಿನ (bangaluru) ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಯುವಕನೋರ್ವ ಅತ್ಯಾಚಾರವೆಸಗಿರುವಂತಹ ಘಟನೆ ನಿನ್ನೆ ಸಂಜೆ 7:30ಕ್ಕೆ ನಡೆದಿದೆ. ಸಂತ್ರಸ್ತ ಬಾಲಕಿಯ ಹುಟ್ಟುಹಬ್ಬ (birthday) ಕೇಕ್ ಕಟ್ ಮಾಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆರೋಪಿ ಯತೀಶ್(26) ಕೃತ್ಯವೆಸಗಿದ್ದಾನೆ. ಸದ್ಯ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಹಿಂದೂ ಧರ್ಮದ ಬಾಲಕಿಗೆ ಮುಸ್ಲಿಂ ಯುವಕನಿಂದ ಲೈಂಗಿಕ ದೌರ್ಜನ್ಯ
ಮುಸ್ಲಿಂ ಯುವಕನೋರ್ವ ಹಿಂದೂ ಧರ್ಮದ ಬಾಲಕಿಯನ್ನ ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದ ಘಟನೆ ಇತ್ತೀಚೆಗೆ ಹುಬ್ಬಳ್ಳಿಯ ಗೋಕುಲ್ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕುಲ್ ರೋಡ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು.
ಇದನ್ನೂ ಓದಿ: ಇನ್‌ಸ್ಟಾನಲ್ಲಿ ಪರಿಚಯಿಸಿಕೊಂಡು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಅಪ್ರಾಪ್ತೆ ಈಗ ಗರ್ಭಿಣಿ
ಸೈಯದ್ ಎನ್ನುವ ಮುಸ್ಲಿಂ ಯುವಕ ರಮೇಶ್ ಎಂದು ಸುಳ್ಳು ಹೆಸರು ಹೇಳಿ ಹಿಂದೂ ಬಾಲಕಿಯನ್ನು ಪರಿಚಯಿಸಿಕೊಂಡಿದ್ದ. ಬಳಿಕ ಬಾಲಕಿಯೊಂದಿಗೆ ಕಾಮದಾಹ ತೀರಿಸಿಕೊಳ್ಳಲು ನಿರ್ಜನ ಪ್ರದೇಶಕ್ಕೆ ಕರೆಕೊಂಡು ಹೋಗಿದ್ದ ವೇಳೆ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದ. ಬಳಿಕ ಆತನ ಮೊಬೈಲ್ ಪರಿಶೀಲಿಸಿದಾಗ ಅಶ್ಲೀಲ ವಿಡಿಯೋಗಳಿರುವುದು ಪತ್ತೆಯಾಗಿದ್ದವು.
ಪತ್ನಿ ಗರ್ಭಿಣಿ ಅಂತಾ ನೋಡದೆ ಹಲ್ಲೆ ಮಾಡಿದ ಪತಿ: ಹೊಟ್ಟೆಯಲ್ಲೇ 6 ತಿಂಗಳ ಮಗು ಸಾವು
ಪ್ರೀತಿಸಿ ಮದುವೆಯಾಗಿದ್ದ ಯುವತಿಗೆ ಯುವಕನೋರ್ವ ಕೊಡಬಾರದ ಕಷ್ಟ ಕೊಟ್ಟಿದ್ದಾನೆ. ಗರ್ಭಿಣಿ ಎಂದು ನೋಡದೆ ಮೈ-ಕೈ, ಹೊಟ್ಟೆ ಸೇರಿದಂತೆ ಹೊಡೆಯ ಬಾರದ ಜಾಗಕ್ಕೆ ಹೊಡೆದು ಪ್ರಪಂಚ ನೋಡುವ ಮುನ್ನವೇ ತನ್ನ ಮಗುವನ್ನು ಮಸಕ್ಕೆ ಕಳಿಸಿದ್ದ ಘಟನೆಯೊಂದು ಇತ್ತೀಚೆಗೆ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಹಸನಾಬಾದ್ ಗ್ರಾಮದಲ್ಲಿ ನಡೆದಿತ್ತು.
ಇದನ್ನೂ ಓದಿ: ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಕಾರವಾರ್ ಜಿಲ್ಲೆಯ ಮುಂಡಗೋಡ ತಾಲ್ಲೂಕಿನ ಓಣಿಕೇರಿಯ ಅಮೀರಬಿ ಮನಿಯಾರ್, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಸನಾಬಾದ್ ಗ್ರಾಮದ ಅಹ್ಮದರಜಾ ಇಬ್ಬರು ಪ್ರೀತಿಸಿ ಮದುವೆಯಾಗಿದ್ದರು. ಬಳಿಕ ಯುವಕ ನಿತ್ಯ ಚಿತ್ರಹಿಂಸೆ ಕೊಡಲು ಆರಂಭಿಸಿದ್ದನಂತೆ. ಅದು ಆ ಯುವತಿ ಗರ್ಭಿಣಿ ಅಂತ ಲೆಕ್ಕಿಸದೆ ಮನಸೋ ಇಚ್ಚೆ ಲಾಠಿ, ಕೊಡಲಿಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



