AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ: ಸಿನಿಮಾ ಕಥೆಯನ್ನೂ ಮೀರಿಸುವಂತಿದೆ ಈ ಘಟನೆ!

ಸಿಲಿಕಾನ್ ಸಿಟಿಯ ವಿದ್ಯಾರಣ್ಯಪುರದಿಂದ ಜನವರಿ 31ರಂದು ನಾಪತ್ತೆಯಾಗಿದ್ದ ತನಿಷ್ಕಾ ಮತ್ತು ತೇಜಸ್ವಿನಿ ಎಂಬ ಪಿಯುಸಿ ವಿದ್ಯಾರ್ಥಿನಿಯರನ್ನು ಪತ್ತೆಹಚ್ಚುವಲ್ಲಿ ಕೊನೆಗೂ ಸಿಐಡಿ ಯಶಸ್ವಿಯಾಗಿದೆ. ಎಂಟು ತಿಂಗಳ ಬಳಿಕ ಯುವತಿಯರು ಪತ್ತೆಯಾಗಿದ್ದಾರೆ. ಆದರೆ, ಈ 8 ತಿಂಗಳ ಅವಧಿಯಲ್ಲಿ ನಡೆದ ಘಟನಾವಳಿಗಳು ಸಿನಿಮಾ ಕಥೆಯನ್ನೂ ಮೀರಿಸುವಂತಿದೆ! ವಿವರಗಳಿಗೆ ಮುಂದೆ ಓದಿ.

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ: ಸಿನಿಮಾ ಕಥೆಯನ್ನೂ ಮೀರಿಸುವಂತಿದೆ ಈ ಘಟನೆ!
ವಿದ್ಯಾರಣ್ಯಪುರ ಯುವತಿಯರ ಮಿಸ್ಸಿಂಗ್ ಕೇಸ್​ಗೆ ಬಿಗ್ ಟ್ವಿಸ್ಟ್Image Credit source: tv9
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Sep 09, 2026 | 6:47 AM

Share

ಮುಖ್ಯಾಂಶಗಳು

  • ಎಂಟು ತಿಂಗಳ ಬಳಿಕ ಇಬ್ಬರು ಯುವತಿಯರು ಪತ್ತೆ
  • ಸಿಮ್ ಖರೀದಿಸಲು ಹೋಗಿ ತನಿಷ್ಕಾ ಪತ್ತೆ
  • ಹೈಕೋರ್ಟ್ ಮುಂದೆ ಹಾಜರುಪಡಿಸಲಿರುವ ಸಿಐಡಿ

ಬೆಂಗಳೂರು, ಸೆಪ್ಟೆಂಬರ್ 9: ಬೆಂಗಳೂರಿನ ವಿದ್ಯಾರಣ್ಯಪುರದಿಂದ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು ಸುಮಾರು ಎಂಟು ತಿಂಗಳ ಬಳಿಕ ಪತ್ತೆಯಾಗಿದ್ದಾರೆ. ತನಿಷ್ಕಾ ಮತ್ತು ತೇಜಸ್ವಿನಿ ಎಂಬ ಯುವತಿಯರನ್ನು ಕೊನೆಗೂ ಸಿಐಡಿ ಅಧಿಕಾರಿಗಳು ಪತ್ತೆಹಚ್ಚಿದ್ದು, ಇಂದು ಹೈಕೋರ್ಟ್ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದಾರೆ. ತನಿಷ್ಕಾ ದ್ವಿತೀಯ ಪಿಯುಸಿ ಹಾಗೂ ತೇಜಸ್ವಿನಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇಬ್ಬರೂ ಕಳೆದ ಜನವರಿ 31ರಂದು ವಿದ್ಯಾರಣ್ಯಪುರದಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಹೈಕೋರ್ಟ್ ಮೆಟ್ಟಿಲೇರಿದ್ದ ಕುಟುಂಬ

ಯುವತಿಯರು ಪತ್ತೆಯಾಗದ ಹಿನ್ನೆಲೆಯಲ್ಲಿ ತನಿಷ್ಕಾ ಕುಟುಂಬದವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ತನಿಖೆಯ ಪ್ರಗತಿ ಹಾಗೂ ಯುವತಿಯರ ಪತ್ತೆ ಕುರಿತು ನ್ಯಾಯಾಲಯದ ಗಮನಕ್ಕೆ ತರಲಾಗಿತ್ತು. ಸುಮಾರು ಐದಾರು ತಿಂಗಳ ಬಳಿಕ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಹೈಕೋರ್ಟ್ ನಿರ್ದೇಶನದಂತೆ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಕೈಗೆತ್ತಿಕೊಂಡು ಕಳೆದ ಮೂರು ತಿಂಗಳಿಂದ ಯುವತಿಯರಿಗಾಗಿ ಹುಡುಕಾಟ ನಡೆಸುತ್ತಿದ್ದರು.

ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿಕ್ಕಿದ್ದ ಸುಳಿವು

ಇಬ್ಬರೂ ಯುವತಿಯರು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ಸುಳಿವು ಸಿಐಡಿ ಅಧಿಕಾರಿಗಳಿಗೆ ತನಿಖೆ ವೇಳೆ ದೊರೆತಿತ್ತು. ಅಲ್ಲಿ ಇಬ್ಬರೂ ಒಂದು ಮಗುವಿನೊಂದಿಗೆ ಆಟವಾಡುತ್ತಿದ್ದ ವೇಳೆ, ಮಗುವಿನ ತಾಯಿ ಇಬ್ಬರ ಜೊತೆ ಸೆಲ್ಫಿ ತೆಗೆದುಕೊಂಡಿದ್ದರು. ಈ ಫೋಟೋ ಹಾಗೂ ಲಭ್ಯವಾದ ಮಾಹಿತಿಯನ್ನು ಆಧರಿಸಿ ತನಿಖೆ ಮುಂದುವರಿಸಿದರೂ, ಬಳಿಕ ಯುವತಿಯರ ಕುರಿತು ಯಾವುದೇ ಸ್ಪಷ್ಟ ಸುಳಿವು ಸಿಕ್ಕಿರಲಿಲ್ಲ.

ಸಿಮ್ ಖರೀದಿಸಲು ಹೋಗಿ ಸಿಕ್ಕಿಬಿದ್ದ ತನಿಷ್ಕಾ

ತನಿಖೆ ಮುಂದುವರಿದ ಸಂದರ್ಭದಲ್ಲಿ, ತನಿಷ್ಕಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಬಳಸಲು ಮುಂದಾಗಿದ್ದಳು. ಈ ವೇಳೆ ಆಧಾರ್ ಸಂಖ್ಯೆಯ ಬಳಕೆಯ ಕುರಿತು ಸರ್ವಿಸ್ ಪ್ರೊವೈಡರ್‌ನಿಂದ ಸಿಐಡಿಗೆ ಮಾಹಿತಿ ಲಭ್ಯವಾಗಿದೆ. ಈ ಮಾಹಿತಿಯ ಆಧಾರದ ಮೇಲೆ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಇಬ್ಬರೂ ಯುವತಿಯರು ಪತ್ತೆಯಾಗಿದ್ದಾರೆ.

ಯುವಕನ ಪರಿಚಯವಾಗಿ ಬಳಿಕ ಮದುವೆ!

ತನಿಖೆಯ ವೇಳೆ ಲಭ್ಯವಾದ ಮಾಹಿತಿಯ ಪ್ರಕಾರ, ಮಲೆ ಮಹದೇಶ್ವರ ಬೆಟ್ಟದಲ್ಲಿದ್ದ ಸಂದರ್ಭದಲ್ಲಿ ತನಿಷ್ಕಾಗೆ ಕನಕಪುರ ತಾಲೂಕಿನ ಯುವಕನೊಬ್ಬನ ಪರಿಚಯವಾಗಿತ್ತು. ಯುವಕನ ಕುಟುಂಬದ ವಿಚಾರಣೆಯ ಸಂದರ್ಭದಲ್ಲಿ ತನಿಷ್ಕಾ ತಾನು ಹಾಗೂ ತೇಜಸ್ವಿನಿ ಸಹೋದರಿಯರು, ತಮ್ಮ ಕುಟುಂಬದಲ್ಲಿ ತಂದೆ-ತಾಯಿ ಸೇರಿದಂತೆ ಯಾರೂ ಇಲ್ಲ ಎಂದು ಹೇಳಿದ್ದಳು. ಬಳಿಕ ಇಬ್ಬರೂ ಆ ಯುವಕನೊಂದಿಗೆ ತೆರಳಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ನಂತರ ತನಿಷ್ಕಾ ಆ ಯುವಕನನ್ನು ಮದುವೆಯಾಗಿದ್ದಾಳೆ. ಮದುವೆಯ ಬಳಿಕ ಇಬ್ಬರೂ ಒಟ್ಟಿಗೆ ವಾಸಿಸುತ್ತಿದ್ದು, ತೇಜಸ್ವಿನಿಯನ್ನು ತನ್ನ ತಂಗಿ ಎಂದು ಪರಿಚಯಿಸಿ ತಮ್ಮೊಂದಿಗೇ ಇರಿಸಿಕೊಂಡಿದ್ದಳು ಎಂಬುದು ಸಿಐಡಿ ತನಿಖೆಯಲ್ಲಿ ಪತ್ತೆಯಾಗಿದೆ. ಮನೆಯಿಂದ ಕಾಲೇಜಿಗೆ ತೆರಳಿದ ಬಳಿಕ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಇದೀಗ ಪತ್ತೆಯಾಗಿದ್ದಾರೆ. ತನಿಷ್ಕಾ ಮದುವೆಯಾಗಿದ್ದು, ಸದ್ಯ ಗರ್ಭಿಣಿಯಾಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ಬೆಂಗಳೂರು: ನಾಪತ್ತೆಯಾಗಿ 3 ತಿಂಗಳಾದರೂ ಪಿಯು ವಿದ್ಯಾರ್ಥಿನಿಯರ ಸುಳಿವಿಲ್ಲ! ಸಿಐಡಿ ತನಿಖೆಗೆ ಆದೇಶ

ಎಂಟು ತಿಂಗಳ ಬಳಿಕ ಇಬ್ಬರೂ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಯುವತಿಯರು ಈ ಅವಧಿಯಲ್ಲಿ ಎಲ್ಲಿದ್ದರು, ಅವರ ನಾಪತ್ತೆಯ ಹಿಂದಿನ ಸಂಪೂರ್ಣ ಹಿನ್ನೆಲೆ ಏನು ಎಂಬುದರ ಕುರಿತು ಸಿಐಡಿ ಅಧಿಕಾರಿಗಳು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ