AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಾನ್ ಚಾಲಿಸಾ ಹಾಕಿದ್ದಕ್ಕೆ ಹಲ್ಲೆ ಪ್ರಕರಣ: ಹಿಂದೂ ಕಾರ್ಯಕರ್ತರಿಂದ ರ್‍ಯಾಲಿ, ನಗರತ್​ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ

ಬೆಂಗಳೂರಿನ ನಗರತ್​ಪೇಟೆಯಲ್ಲಿರುವ ಮೊಬೈಲ್​ ಅಂಗಡಿಯಲ್ಲಿ ಜೋರಾಗಿ ಸೌಂಡ್​ ಇಟ್ಟು ಹನುಮಾನ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಲಾಗಿತ್ತು. ಹಲ್ಲೆ ಮಾಡಿದ್ದ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಹಿಂದೂ ಕಾರ್ಯಕರ್ತರು ನಗರತ್​ಪೇಟೆಯಲ್ಲಿ ರ್‍ಯಾಲಿ ನಡೆಸಲು ಯೋಚಿಸಿದ್ದಾರೆ.

ಹನುಮಾನ್ ಚಾಲಿಸಾ ಹಾಕಿದ್ದಕ್ಕೆ ಹಲ್ಲೆ ಪ್ರಕರಣ: ಹಿಂದೂ ಕಾರ್ಯಕರ್ತರಿಂದ ರ್‍ಯಾಲಿ, ನಗರತ್​ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ
ಹಿಂದೂ ಕಾರ್ಯಕರ್ತರ ಪ್ರತಿಭಟನೆ
TV9 Web
| Edited By: |

Updated on: Mar 19, 2024 | 1:14 PM

Share

ಬೆಂಗಳೂರು, ಮಾರ್ಚ್​ 19: ನಗರತ್​ಪೇಟೆಯಲ್ಲಿ (Nagarathpet) ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ (Hanuman Chalisa) ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ಘಟನಾ ಸ್ಥಳದಲ್ಲಿ ಹನುಮ ಭಕ್ತರು ರ್‍ಯಾಲಿ ನಡೆಸಲು ನಿರ್ಧರಿಸಿದ್ದಾರೆ. ಈ ರ್‍ಯಾಲಿಯಲ್ಲಿ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ ರಾಮಮೂರ್ತಿ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejasvi Surya) , ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಶಾಸಕರು ಹಾಗೂ ಹಲವು ನಾಯಕರು ಮತ್ತು ಹನುಮ ಭಕ್ತರು ಪಾಲ್ಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈಗಾಗಲೇ ಘಟನಾ ಸ್ಥಳದಲ್ಲಿ ಹಿಂದೂ ಹನುಮ ಭಕ್ತರು ಜಮಾಯಿಸ್ತಿದ್ದಾರೆ. ಜೊತೆಗೆ ಸ್ಥಳಕ್ಕೆ ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಭೇಟಿ ನೀಡಿದ್ದಾರೆ. ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿ ಕೃಷ್ಣ ಟೆಲಿಕಾಂ ಮುಂಭಾಗ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಜಮಾವಣೆಯಾಗಿದ್ದಾರೆ.

ಹಲ್ಲೆಗೊಳಗಾದ ಮುಖೇಶ್​ನನ್ನು ಪೊಲೀಸರು ಜೀಪ್​ನಲ್ಲಿ ಕರೆದೊಯ್ಯಲು ಮುಂದಾಗಿದ್ದರು. ಈ ವೇಳೆ ಪೊಲೀಸ್ ವಾಹನದ ಮುಂದೆ ನಿಂತು ಶಾಸಕ ಸುರೇಶ್​ಕುಮಾರ್ ಪ್ರತಿಭಟನೆ ನಡೆಸಿದರು. ಈ ವೇಳೆ ತಳ್ಳಾಟ, ನೂಕಾಟ ನಡೆದಿದ್ದು, ಶಾಸಕ ಸುರೇಶ್​ಕುಮಾರ್ ಮತ್ತು​ ಪೊಲೀಸರ ನಡುವೆ ವಾಗ್ವಾದ ನಡೆಯಿತು. ನೀತಿ ಸಂಹಿತೆ ಜಾರಿಯಾಗಿದೆ ಪ್ರತಿಭಟನೆ ಮಾಡಲು ಅವಕಾಶ ಇಲ್ಲ ಎಂದು ಪೊಲೀಸರು ಹೇಳಿದರು. ಇದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೆ ಹಿಂದೂ ಕಾರ್ಯಕರ್ತರು ಮುಖೇಶ್​​ನನ್ನು ಪೊಲೀಸ್ ವಾಹನದಿಂದ ಕೆಳಗೆ ಇಳಿಸಿಕೊಂಡರು.

ಇದನ್ನೂ ಓದಿ: ಮೊಬೈಲ್ ಶಾಪ್​ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ್ದ ಐವರು ಅರೆಸ್ಟ್​​

ಉದ್ದೇಶ ಪೂರ್ವಕವಾಗಿ ಮಾಡಿರುವ ಹಲ್ಲೆ: ಸುರೇಶ್​ ಕುಮಾರ್

ಅಸಹನೆ ಅನ್ನೋದು ಈ ಮಟ್ಟಕ್ಕೆ ಹೋಗಬಾರದು. ಇದು ಉದ್ದೇಶ ಪೂರ್ವಕವಾಗಿ ಮಾಡಿರುವ ಹಲ್ಲೆಯಾಗಿದೆ. ತನ್ನ ಪಾಡಿಗೆ ಇದ್ದ ಯುವಕನ ಮೇಲೆ ಹೀಗೆ ಹಲ್ಲೆ ಮಾಡಿದ್ದಾರೆ. ಒಟ್ಟಾರೆಯಾಗಿ ಸಮಾಜದ ಶಾಂತಿ ಕದಡಿದಂತಾಗಿದೆ. ಇದೊಂದು ನೆಪ, ಉದ್ದೇಶಪೂರ್ವಕವಾಕವಾಗಿ ಮಾಡಿದಂತಿದೆ. ಹಲ್ಲೆ ಮಾಡಿದವರಿಗೆ ಸೂಕ್ತ ಶಿಕ್ಷೆ ಆಗಬೇಕು. ಆ ಸಮಯದಲ್ಲಿ ಆತನ ರಕ್ಷಣೆಗೂ ಯಾರು ಇರಲಿಲ್ಲ ಅಂತ ಕೇಳ್ಪಟ್ಟೆ. ಎಲ್ಲ ಸಮುದಾಯದವರು ಈ ವಿಷಯವಾಗಿ ಮುಂದೆ ಬರಬೇಕು. ಈ ರೀತಿಯಾಗಿ ನಡೆಯುತ್ತಿರುವ ಸರಣಿ ಪ್ರಕರಣಗಳ ಬಗ್ಗೆ ಪೊಲೀಸ್ ಇಲಾಖೆಯವರು ಹೆಚ್ಚು ಕಾರ್ಯ ಪ್ರವೃತ್ತರಾಗಬೇಕು. ಇವರೆಲ್ಲ ಬೇಕು ಅಂತ ಈ ರೀತಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್