ಬೆಂಗಳೂರು: ವಿದ್ಯುತ್ ತಂತಿ ತಗುಲಿ ತಾಯಿ, ಮಗು ಸಾವು; ಸುಮೋಟೋ ಕೇಸ್ ದಾಖಲಿಸಿಕೊಂಡ ಲೋಕಾಯುಕ್ತ

| Updated By: ವಿವೇಕ ಬಿರಾದಾರ

Updated on: Nov 22, 2023 | 1:34 PM

ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕೆಆರ್​ ಸರ್ಕಲ್ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ ಏಳು ಜನ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಪ್ರಕರಣ ಸಂಬಂಧ ಎರಡು ವಾರದಲ್ಲಿ ಸಂಪೂರ್ಣ ವರದಿ ನೀಡುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ವಿದ್ಯುತ್ ತಂತಿ ತಗುಲಿ ತಾಯಿ, ಮಗು ಸಾವು; ಸುಮೋಟೋ ಕೇಸ್ ದಾಖಲಿಸಿಕೊಂಡ ಲೋಕಾಯುಕ್ತ
ಲೋಕಾಯುಕ್ತ
Follow us on

ಬೆಂಗಳೂರು ನ.22: ವಿದ್ಯುತ್ ತಂತಿ ತಗುಲಿ ತಾಯಿ, ಮಗು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ (Lokayukta) ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಇಂಧನ ಇಲಾಖೆ (Department of Energy) ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕೆಆರ್​ ಸರ್ಕಲ್ ಬೆಸ್ಕಾಂ (BESCOM) ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ ಏಳು ಜನ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಪ್ರಕರಣ ಸಂಬಂಧ ಎರಡು ವಾರದಲ್ಲಿ ಸಂಪೂರ್ಣ ವರದಿ ನೀಡುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕೆಆರ್​ ಸರ್ಕಲ್​ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ, ಬೆಸ್ಕಾಂ ಉತ್ತರ ವಿಭಾಗದ ಮುಖ್ಯ ಅಭಿಯಂತರ, ಬೆಸ್ಕಾಂ ಪೂರ್ವ ವೃತ್ತದ ಮೇಲ್ವಿಚಾರಕ ಅಭಿಯಂತರ, ಕಾರ್ಯನಿರ್ವಾಹಕ ಅಭಿಯಂತರ ವೈಟ್​ಫಿಲ್ಡ್​ ವಿಭಾಗ, ಹೋಫ್​ ಫಾರಂ ಸಿಗ್ನಲ್​​ ವೈಟ್​​ಫಿಲ್ಡ್​ ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮತ್ತು ಹೋಫ್​ ಫಾರಂ ಸಿಗ್ನಲ್​​ ವೈಟ್​​ಫಿಲ್ಡ್​​ನ ಸಹಾಯಕ ಅಭಿಯಂತರ ವಿರುದ್ಧ ವಿರುದ್ಧ ಸೆಕ್ಷನ್ 7(1)(B) ಆಫ್ ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಮಾಲ್ ಅಡ್ಮಿನಿಸ್ಟ್ರೇಷನ್ 2(10) ಅಡಿಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ವಿದ್ಯುತ್​​ ತಂತಿ ತುಳಿದು ತಾಯಿ-ಮಗು ಸಾವು: ಬೆಸ್ಕಾಂನ ಐವರು ಅಧಿಕಾರಿಗಳು ಸಸ್ಪೆಂಡ್

ಏನಿದು ಪ್ರಕರಣ

ಭಾನುವಾರ ಬೆಳಿಗ್ಗೆ 5.30 ರ ಸುಮಾರಿಗೆ ತಮಿಳುನಾಡಿನಿಂದ ಆಗಮಿಸಿದ ಸೌಂದರ್ಯ (23) ಒಂಬತ್ತು ತಿಂಗಳ ಮಗು ಸುವಿಕ್ಷಾ ಲಿಯಾನೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಾದಚಾರಿ ಮಾರ್ಗದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ತುಳಿದಿದ್ದಾರೆ. ಇದರಿಂದ ವಿದ್ಯುತ್​ ಪ್ರವಹಿಸಿ ಮೃತಪಟ್ಟಿದ್ದಾರೆ. ಪತಿ ಸಂತೋಷ್ ಕುಮಾರ್ ಅವರು, ಪತ್ನಿ ಮತ್ತು ಮಗುವನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಘಟನಾ ಸ್ಥಳದಲ್ಲಿ ಅವರ ಲಗೇಜ್-ಟ್ರಾಲಿ ಬ್ಯಾಗ್ ಮತ್ತು ಇತರ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ