AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲೊಂದು ಹೃದಯ ವಿದ್ರಾವಕ ಘಟನೆ: ಮಕ್ಕಳನ್ನ ಕೊಂದು ನೇಣಿಗೆ ಕೊರಳೊಡ್ಡಿದ ತಾಯಿ

ಹೆತ್ತ ಮಕ್ಕಳನ್ನು ಕೊಂದು ಬಳಿಕ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವಂತಹ ಹೃದಯ ವಿದ್ರಾವಕ ಘಟನೆಯೊಂದು ಬೆಂಗಳೂರಿನ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಷ್ಟಕ್ಕೂ ನಡೆದದ್ದೇನು ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಲ್ಲೊಂದು ಹೃದಯ ವಿದ್ರಾವಕ ಘಟನೆ: ಮಕ್ಕಳನ್ನ ಕೊಂದು ನೇಣಿಗೆ ಕೊರಳೊಡ್ಡಿದ ತಾಯಿ
ಮೃತ ಮಕ್ಕಳು ಮತ್ತು ತಾಯಿ
ಗಂಗಾಧರ​ ಬ. ಸಾಬೋಜಿ
|

Updated on:Oct 10, 2025 | 7:34 PM

Share

ಬೆಂಗಳೂರು, ಅಕ್ಟೋಬರ್​ 10: ಅವರದ್ದು ಮುದ್ದಾದ ಕುಟುಂಬ. ದಂಪತಿಗೆ ಆರತಿಗೊಬ್ಬ ಮಗಳು, ಕೀರ್ತಿಗೊಬ್ಬ ಮಗ ಇದ್ದ. ಮನೆಯಲ್ಲಿ ಬಡತನವಿದ್ದರೂ ಜೀವನ ಸುಂದರವಾಗಿಯೇ ಸಾಗಿತ್ತು. ಈ ನಡುವೆ ಪತಿ ಮತ್ತೋರ್ವಳ‌ ಸಂಗ ಬೆಳೆಸಿದ್ದ. ಅದು ಗಲಾಟೆಗೂ ಕಾರಣವಾಗಿತ್ತು. ಇದರಿಂದ ಬೇಸತ್ತು ಪತ್ನಿ (wife) ಕಟು ನಿರ್ಧಾರ ತೆಗೆದುಕೊಂಡಿದ್ದಾರೆ. ಅದೇನೆಂದರೆ ಇಬ್ಬರು ಮಕ್ಕಳನ್ನು ಕೊಂದು (kill) ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೃದಯ ವಿದ್ರಾವಕ ಘಟನೆ

ಮಕ್ಕಳಾದ ಬೃಂದ(4) ಮತ್ತು ಒಂದೂವರೆ ವರ್ಷದ ಭುವನ್​​ ನನ್ನು ಕೊಂದು ತಾಯಿ ವಿಜಯಲಕ್ಷ್ಮೀ ನೇಣಿಗೆ ಶರಣಾದ ಘಟನೆ ನಗರದ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ. ವಿಜಯಲಕ್ಷ್ಮೀ ಸಹೋದರಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಯತ್ನ: ಮಾವನ ಆಸ್ತಿ, ಹಣದಾಸೆಗೆ ಅಳಿಯ ಬಲಿ

ಮೂಲತ: ರಾಯಚೂರು ಮೂಲದ ಮಸ್ಕಿಯವರಾದ ವಿಜಯಲಕ್ಷ್ಮೀ ಮತ್ತು ರಮೇಶ್ ದಂಪತಿ, ಕಳೆದ ಐದಾರು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಮೂರು ವರ್ಷದ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಜೀವನ ಕಟ್ಟಿಕೊಂಡಿದ್ದರು. ಹೀಗೆ ಬಾಗಲಗುಂಟೆಯ ಭುವನೇಶ್ವರಿ ನಗರದಲ್ಲಿ ಬಾಡಿಗೆ ಮನೆ ಪಡೆದು ಕುಟುಂಬ ವಾಸವಾಗಿತ್ತು.

ಗುರುವಾರ ರಾತ್ರಿ ಗಂಡ ರಮೇಶ್ ಇಲ್ಲದ ಸಮಯದಲ್ಲಿ ಪತ್ನಿ ವಿಜಯಲಕ್ಷ್ಮೀ ಇಬ್ಬರು ಮಕ್ಕಳನ್ನು ನೇಣು ಬಿಗಿದು ತಾನೂ ಫ್ಯಾನಿಗೆ ಕೊರಳೊಡ್ಡಿದ್ದಾರೆ. ಈ ನಡುವೆ ವಿಜಯಲಕ್ಷ್ಮೀ ತಂಗಿ ಮನೆಗೆ ಬಂದಿದ್ದು, ಘಟನೆ ಬೆಳಕಿಗೆ ಬಂದಿದೆ. ಆ ಬಳಿಕ ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಬಾಗಲಗುಂಟೆ ಪೊಲೀಸರು ಮೃತದೇಹಗಳನ್ನ ನೇಣಿನ ಕುಣಿಕೆಯಿಂದ ಇಳಿಸಿ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್​ ಮಾಡಿದ್ದರು.

ಗಂಡನಿಗೆ ಮತ್ತೊಂದು ಮದುವೆ 

ಇನ್ನು ವಿಜಯಲಕ್ಷ್ಮೀ ಪತಿ ರಮೇಶ್ ಮಾಲ್​ನಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ತಾನು ಮತ್ತೊಂದು ಮದುವೆಯಾಗಿದ್ದು, ಪತ್ನಿಗೆ ಡಿವೋರ್ಸ್ ಕೊಡುವಂತೆ ಬೆದರಿಕೆ ಹಾಕುತ್ತಿದ್ದ. ಮನೆಯಲ್ಲಿದ್ದಾಗ ಬೇರೆ ಬೇರೆ ಹುಡುಗಿಯರ ಜೊತೆ ಫೊನ್​​ನಲ್ಲಿ ಮಾತನಾಡುತ್ತಿದ್ದ. ಇದರಿಂದ ವಿಜಯಲಕ್ಷ್ಮೀ ಮಾನಸಿಕವಾಗಿ ನೊಂದಿದ್ದಳು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ವಿಚಾರವಾಗಿ ಪದೆಪದೇ ಮನೆಯಲ್ಲಿ ಜಗಳ ಕೂಡ ನಡೆಯುತ್ತಿತ್ತು ಎಂದು ರಮೇಶ್ ಮಾವ ಹೇಳಿದ್ದಾರೆ.

ಇದನ್ನೂ ಓದಿ: ಮೂಡಲಗಿ: ಪತ್ನಿ ಕೊಂದು 2 ದಿನ ಶವದೊಂದಿಗೆ ಕಳೆದ ಪತಿ, ಕೊಲೆಗೆ ಅದೇ ಕಾರಣನಾ?

ಸದ್ಯ ಈ ಬಗ್ಗೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ರಮೇಶ್ ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಏನೇ ಇರಲಿ ಮಕ್ಕಳ ಭವಿಷ್ಯದ ಬಗ್ಗೆ ಸುಂದರವಾದ ಕನಸುಗಳನ್ನ ಕಂಡಿದ್ದ ತಾಯಿಯೇ ತನ್ನ ಕಂದಮ್ಮಗಳ ಉಸಿರನ್ನ ನಿಲ್ಲಿಸಿದ್ದು ದುರ್ದೈವದ ಸಂಗತಿ.

ವರದಿ: ಮಂಜು 

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:28 pm, Fri, 10 October 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ