AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಂಗ ರಸ್ತೆ ಯೋಜನೆಗೆ ಭೂಸ್ವಾಧೀನದ ಚರ್ಚೆ; ನಾಳೆ ಲಾಲ್​ಬಾಗ್​ಗೆ ತೇಜಸ್ವಿ ಸೂರ್ಯ ಭೇಟಿ

ಬೆಂಗಳೂರಿನ ಲಾಲ್​ಬಾಗ್​ನ ಬೊಟಾನಿಕಲ್ ಗಾರ್ಡನ್​ನಲ್ಲಿ ಸುರಂಗ ರಸ್ತೆ ಯೋಜನೆಗೆ ಭೂಸ್ವಾಧೀನ ಮಾಡಿಕೊಳ್ಳುವ ಬಗ್ಗೆ ಬೆಂಗಳೂರಿನ ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದರೂ ಆ ಕುರಿತಾದ ಚರ್ಚೆಗಳು ಇನ್ನೂ ನಿಂತಿಲ್ಲ. ಈ ಬಗ್ಗೆ ಲಾಲ್​ಬಾಗ್​​ಗೆ ಹೋಗಿ ಪರಿಶೀಲನೆ ಮಾಡಲು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ನಾಳೆ (ಭಾನುವಾರ) ಲಾಲ್​ಬಾಗ್​ಗೆ ಭೇಟಿ ನೀಡಲಿದ್ದಾರೆ.

ಸುರಂಗ ರಸ್ತೆ ಯೋಜನೆಗೆ ಭೂಸ್ವಾಧೀನದ ಚರ್ಚೆ; ನಾಳೆ ಲಾಲ್​ಬಾಗ್​ಗೆ ತೇಜಸ್ವಿ ಸೂರ್ಯ ಭೇಟಿ
Tejaswi Surya
ಸುಷ್ಮಾ ಚಕ್ರೆ
|

Updated on:Oct 11, 2025 | 10:17 PM

Share

ಬೆಂಗಳೂರು, ಅಕ್ಟೋಬರ್ 11: ಬೆಂಗಳೂರಿನ ಲಾಲ್​ಬಾಗ್ (Lalbagh) ಸಸ್ಯೋದ್ಯನವನದಲ್ಲಿ ಸುರಂಗ ರಸ್ತೆ ಯೋಜನೆಗೆ ಲಾಲ್​ಬಾಗ್​ನ ಜಾಗವನ್ನು ಬಳಸಲಾಗುತ್ತದೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತೀವ್ರ ಚರ್ಚೆಗಳು ನಡೆದಿತ್ತು. ಹೆಬ್ಬಾಳದಿಂದ ಸಿಲ್ಕ್​​​​​​ ಬೋರ್ಡ್​ವರೆಗೂ ನಿರ್ಮಿಸಲಿರುವ ಸುರಂಗ ರಸ್ತೆ ಮಾರ್ಗಕ್ಕಾಗಿ ಲಾಲ್ ​ಬಾಗ್​ನಲ್ಲಿ 6 ಎಕರೆ ಭೂಮಿ ಬಳಕೆ ಮಾಡಲಾಗುತ್ತಿದೆ ಎಂಬುದಾಗಿ ಹರಡಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಈಗಾಗಲೇ ಇಂದು​ ಸ್ಪಷ್ಟಪಡಿಸಿದ್ದಾರೆ.

ಈ ವಿಷಯವನ್ನು ಪರಿಶೀಲಿಸಲು ನಾಳೆ ಲಾಲ್​ಬಾಗ್​​ಗೆ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಲಿದ್ದಾರೆ. ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ನಲ್ಲಿ ಸುರಂಗ ರಸ್ತೆ ಯೋಜನೆಗೆ ಭೂಸ್ವಾಧೀನ ಮಾಡಿಕೊಳ್ಳುವ ಬಗ್ಗೆ ಅನೇಕ ನಾಗರಿಕರು ಮತ್ತು ನಾಗರಿಕ ಕಾರ್ಯಕರ್ತರು ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಲಾಲ್‌ಬಾಗ್‌ನ ಪರಿಸರ, ಪರಿಸರ ಮತ್ತು ಪರಂಪರೆಯ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಈ ಕಳವಳಗಳನ್ನು ಎಚ್ಚರಿಕೆಯಿಂದ ಆಲಿಸಬೇಕು. ನಾನು ನಾಳೆ (ಅಕ್ಟೋಬರ್ 12, ಭಾನುವಾರ) ಬೆಳಿಗ್ಗೆ 8 ಗಂಟೆಗೆ ನಾಗರಿಕರು, ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಲಾಲ್‌ಬಾಗ್‌ಗೆ ಭೇಟಿ ನೀಡಿ ಈ ಸಮಸ್ಯೆಯನ್ನು ಸ್ಥಳದಲ್ಲೇ ಪರಿಶೀಲಿಸುತ್ತೇನೆ. ಲಾಲ್‌ಬಾಗ್ ನಮ್ಮ ಅತ್ಯಂತ ಕಾಳಜಿ ಮತ್ತು ಗಮನಕ್ಕೆ ಅರ್ಹವಾಗಿದೆ. ಸಂಬಂಧಪಟ್ಟ ಎಲ್ಲಾ ನಾಗರಿಕರು ಸೇರಲು ಒತ್ತಾಯಿಸಲಾಗುತ್ತಿದೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಲಾಲ್​ಬಾಗ್ ನಡಿಗೆ; ಜನರ ಸಮಸ್ಯೆಗೆ ಕಿವಿಕೊಟ್ಟ ಡಿಸಿಎಂ

ಡಿಕೆ ಶಿವಕುಮಾರ್ ಸ್ಪಷ್ಟನೆ:

ಇನ್ನು, ಇಂದು ಲಾಲ್​ಬಾಗ್​ ಜಾಗವನ್ನು ಸುರಂಗ ರಸ್ತೆಗೆ ಸ್ವಾಧೀನ ಮಾಡಿಕೊಳ್ಳುವ ವದಂತಿಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಳ್ಳಿಹಾಕಿದ್ದಾರೆ.

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ ಅನುದಾನ ಹಂಚಿಕೆಯನ್ನು ಇಂದು ಘೋಷಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸುರಂಗ ರಸ್ತೆ ಯೋಜನೆಗಾಗಿ ಸಸ್ಯೋದ್ಯಾನದ 6 ಎಕರೆಯನ್ನು ವಶಕ್ಕೆ ಪಡೆಯಲಾಗುತ್ತದೆ ಎಂಬ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ. ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಸುರಂಗ ರಸ್ತೆ ಯೋಜನೆ ಲಾಲ್ ಬಾಗ್ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸುರಂಗ ಮಾರ್ಗ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಜತೆ ಬಹಿರಂಗ ಚರ್ಚೆಗೆ ಸಿದ್ಧ: ತೇಜಸ್ವಿ ಸೂರ್ಯ ಸವಾಲು

“ಲಾಲ್‌ಬಾಗ್‌ನಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ವೈದ್ಯರು ಮತ್ತು ಆಂಬ್ಯುಲೆನ್ಸ್ ಲಭ್ಯವಿರುವಂತೆ ವ್ಯವಸ್ಥೆ ಮಾಡಲು ನಿರ್ಧರಿಸಿದ್ದೇವೆ. ಇನ್ನು ಮುಂದೆ ಲಾಲ್‌ಬಾಗ್‌ನಲ್ಲಿ ಶೌಚಾಲಯಗಳನ್ನು ಉಚಿತವಾಗಿ ನೀಡಲಾಗುವುದು. ಲಾಲ್‌ಬಾಗ್ ಮಾದರಿಯಲ್ಲಿ ನಗರದ ಅರಣ್ಯ ಪ್ರದೇಶಗಳಲ್ಲಿ ಟ್ರೀ ಪಾರ್ಕ್‌ಗಳನ್ನು ನಿರ್ಮಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಲಾಗುವುದು, ಇದಕ್ಕೆ ಆರ್ಥಿಕ ನೆರವನ್ನು ಕೂಡಾ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.

“ಉದ್ಯಾನದ ಗಡಿಯಲ್ಲಿರುವ ಪಾರ್ಕಿಂಗ್ ಪ್ರದೇಶದ ಬಳಿ ಒಂದರಿಂದ ಒಂದೂವರೆ ಎಕರೆ ಪ್ರದೇಶವನ್ನು ಸುರಂಗ ಕಾಮಗಾರಿಗೆ ಬೇಕಾದ ಉಪಕರಣಗಳನ್ನು ಸಂಗ್ರಹಿಸಲು ಬಳಸಲಾಗುವುದು. ಅದನ್ನು ನಂತರ ಮರುಸ್ಥಾಪಿಸಲಾಗುತ್ತದೆ. ಲಾಲ್‌ಬಾಗ್ ಗಡಿಯಲ್ಲಿರುವ ಅಶೋಕ ಸ್ತಂಭದ ಕಡೆಗೆ ಅದಕ್ಕೆ ಪ್ರವೇಶ ದ್ವಾರವನ್ನು ಒದಗಿಸಲಾಗುವುದು. ಸುರಂಗ ರಸ್ತೆ ಯೋಜನೆಯಿಂದ ಲಾಲ್‌ಬಾಗ್‌ಗೆ ಯಾವುದೇ ಹಾನಿಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಸುಮಾರು 240 ಎಕರೆ ವ್ಯಾಪಿಸಿರುವ ಲಾಲ್ ಬಾಗ್ ಬೆಂಗಳೂರಿನ ಪ್ರಮುಖ ಆಕರ್ಷಣೇಯ ಕೇಂದ್ರಗಳಲ್ಲಿ ಒಂದಾಗಿದೆ. ಹಲವು ಶತಮಾನಗಳಷ್ಟು ಹಳೆಯದಾದ ಮರಗಳನ್ನು ಒಳಗೊಂಡಂತೆ ಅಪರೂಪದ ಸಸ್ಯಗಳನ್ನು ಹೊಂದಿರುವ ಸಸ್ಯೋದ್ಯಾನ ಆಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Sat, 11 October 25

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ