AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್ಟಿಗರ ಮನಗೆದ್ದ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು: ಸಚಿವರ ಕಾರ್ಯವೈಖರಿಗೆ ಧನ್ಯವಾದಗಳ ಸುರಿಮಳೆ!

ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲೇ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ ಸಿಕ್ಕಿದೆ. ದಕ್ಷಿಣ ಭಾರತದ ಮೊದಲ ಸ್ಲೀಪರ್ ವಂದೇ ಭಾರತ್ ರೈಲು ಸೇವೆಯು 16 ಗಂಟೆಗಳಲ್ಲಿ ಪ್ರಯಾಣ ಪೂರೈಸಲಿದ್ದು, ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಆರಂಭಗೊಂಡಿರುವ ಈ ನೂತನ ರೈಲಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಯಾಣಿಕರು ಹಾಗೂ ನೆಟ್ಟಿಗರಿಂದ ವ್ಯಾಪಕ ಮೆಚ್ಚುಗೆ ಮತ್ತು ಧನ್ಯವಾದಗಳ ಸುರಿಮಳೆ ವ್ಯಕ್ತವಾಗಿದೆ.

ನೆಟ್ಟಿಗರ ಮನಗೆದ್ದ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು: ಸಚಿವರ ಕಾರ್ಯವೈಖರಿಗೆ ಧನ್ಯವಾದಗಳ ಸುರಿಮಳೆ!
ನೆಟ್ಟಿಗರ ಮನಗೆದ್ದ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು
ಭಾವನಾ ಹೆಗಡೆ
|

Updated on: Nov 02, 2026 | 11:54 AM

Share

ಮುಖ್ಯಾಂಶಗಳು

  • ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ ಸಿಕ್ಕಿದೆ.
  • 16 ಬೋಗಿಗಳ ಈ ರೈಲು 16 ಗಂಟೆಗಳಲ್ಲಿ ಮುಂಬೈ ತಲುಪಲಿದೆ.
  • ನೂತನ ಸ್ಲೀಪರ್ ರೈಲು ಸೇವೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಬೆಂಗಳೂರು, ನವೆಂಬರ್ 02: ಕನ್ನಡ ರಾಜ್ಯೋತ್ಸವದ (ನ. 1) ಸಂಭ್ರಮದಂದೇ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು-ಮುಂಬೈ ‘ವಂದೇ ಭಾರತ್ ಸ್ಲೀಪರ್’ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಇದು ದಕ್ಷಿಣ ಭಾರತದ ಮೊದಲ ಹಾಗೂ ದೇಶದ 3ನೇ ವಂದೇ ಭಾರತ್ ಸ್ಲೀಪರ್ ರೈಲಾಗಿದ್ದು, ಕಲಬುರಗಿ ಮಾರ್ಗವಾಗಿ 16 ಗಂಟೆಗಳಲ್ಲಿ ಮುಂಬೈ ತಲುಪಲಿದೆ. 16 ಆಧುನಿಕ ಬೋಗಿಗಳನ್ನು ಹೊಂದಿರುವ ಈ ರೈಲು ನವೆಂಬರ್ 3ರಿಂದ ನಿಯಮಿತ ವಾಣಿಜ್ಯ ಸಂಚಾರ ಆರಂಭಿಸಲಿದೆ. ಈ ನೂತನ ಸ್ಲೀಪರ್ ರೈಲಿನ ಸೇವೆಗೆ ಸಾರ್ವಜನಿಕರಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ಹಾಗೂ ತೀವ್ರ ಹರ್ಷ ವ್ಯಕ್ತವಾಗಿದೆ. ಅನೇಕ ಪ್ರಯಾಣಿಕರು ಹಾಗೂ ನೆಟ್ಟಿಗರು ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವರ ಈ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಪ್ರಧಾನಿ ಹಾಗೂ ರೈಲ್ವೆ ಸಚಿವರ ಕಾರ್ಯವೈಖರಿಗೆ ಮೆಚ್ಚುಗೆ

ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಯೋಗಾನಂದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ದಕ್ಷಿಣ ಭಾರತದ ಮೊದಲ ಹಾಗೂ ದೇಶದ ಮೂರನೇ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ ನೀಡಿದ್ದಾರೆ. ಸಾರ್ವಜನಿಕರು ಸಾಮಾಜಿಕ ಜಾಲತಾಣ ಎಕ್ಸ್ (X) ವೇದಿಕೆಯಲ್ಲಿ ತಮ್ಮ ಹರ್ಷವನ್ನು ಹೊರಹಾಕಿದ್ದು, ಸಚಿವರ ಕಾರ್ಯಕ್ಷಮತೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. @tiraspeaks ಎಂಬ ಬಳಕೆದಾರರು ರೈಲ್ವೆ ಸಚಿವರ ಅಭಿವೃದ್ಧಿ ಪರ ಕೆಲಸಗಳನ್ನು ಕೊಂಡಾಡುತ್ತಾ, ನಿಮ್ಮ ಕೆಲಸಕ್ಕೆ ತಕ್ಕಷ್ಟು ಪ್ರಶಂಸೆ ಸಿಗುತ್ತಿಲ್ಲ ಎಂದು ಭಾವನಾತ್ಮಕವಾಗಿ ಬೆಂಬಲ ಸೂಚಿಸಿದ್ದಾರೆ.

ಪ್ರಯಾಣಿಕರಿಂದ ಧನ್ಯವಾದಗಳ ಸುರಿಮಳೆ

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಆರಂಭವಾಗಿರುವುದು ಎರಡು ಮಹಾನಗರಗಳ ನಡುವಿನ ಸಂಪರ್ಕವನ್ನು ಮತ್ತಷ್ಟು ಸುಲಭಗೊಳಿಸಿದೆ.  ದೇಶದ ಪ್ರಧಾನಮಂತ್ರಿಗಳು ಹಾಗೂ ರೈಲ್ವೆ ಸಚಿವರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಪರಿಚಯಿಸಲಾಗಿರುವ ಈ ಹೊಸ ಸ್ಲೀಪರ್ ರೈಲು ಸೇವೆಯು ಪ್ರಯಾಣಿಕರ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಿದ್ದು, ರೈಲ್ವೆ ಇಲಾಖೆಯ ಆಧುನಿಕೀಕರಣಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇಲಾಖೆಯ ಸಾಧನೆಗೆ ಮೆಚ್ಚುಗೆಯೊಂದಿಗೆ ವಿಭಿನ್ನ ಮನವಿ

ರೈಲ್ವೆ ಇಲಾಖೆ ಮತ್ತು ಸೆಮಿಕಂಡಕ್ಟರ್ ವಲಯದಲ್ಲಿ ತಂದಿರುವ ಕ್ರಾಂತಿಕಾರಿ ಬದಲಾವಣೆಗಳನ್ನು ಸಾರ್ವಜನಿಕರು ಎಕ್ಸ್ ತಾಣದಲ್ಲಿ ವ್ಯಾಪಕವಾಗಿ ಕೊಂಡಾಡುತ್ತಿದ್ದಾರೆ. ರೈಲ್ವೆ ಸಚಿವರ ಕಾರ್ಯವೈಖರಿಯನ್ನು ಶ್ಲಾಘಿಸುವ ಜೊತೆಗೆ, ಇತರ ಜವಾಬ್ದಾರಿಗಳ ಕುರಿತು ತಮ್ಮ ಅನಿಸಿಕೆಗಳನ್ನು ತಿಳಿಸಿದ್ದಾರೆ. ಒಟ್ಟಾರೆ ರೈಲ್ವೆ ವಲಯದಲ್ಲಿ ಆಗುತ್ತಿರುವ ನವೀನ ಬದಲಾವಣೆಗಳು ಮತ್ತು ವಂದೇ ಭಾರತ್ ಸ್ಲೀಪರ್ ರೈಲಿನ ಸೇವೆ ದೇಶಾದ್ಯಂತ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.

LIVE TV

ಭಾರತೀಯ ರೈಲ್ವೆಯ ಗುಣಮಟ್ಟದ ಸೇವೆಗೆ ಪ್ರಶಂಸೆ

ದೇಶದ ಮೂಲಭೂತ ಸೌಕರ್ಯ ಅಭಿವೃದ್ಧಿಯಲ್ಲಿ ರೈಲ್ವೆ ಇಲಾಖೆ ಮುಂಚೂಣಿಯಲ್ಲಿದೆ ಎಂಬುದಕ್ಕೆ ಈ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸಾಕ್ಷಿಯಾಗಿದೆ.  ಸಚಿವ ಅಶ್ವಿನಿ ವೈಷ್ಣವ್ ಹಾಗೂ ಭಾರತೀಯ ರೈಲ್ವೆಯವರು ತೋರಿಸುತ್ತಿರುವ ಪರಿಶ್ರಮ ಮತ್ತು ಗುಣಮಟ್ಟದ ಸೇವೆ ನಿಜಕ್ಕೂ ಅಭಿನಂದನಾರ್ಹ ಎಂದಿದ್ದಾರೆ. ಕೇಂದ್ರ ಸರ್ಕಾರದ ಈ ಮಹತ್ವಾಕಾರದ ಯೋಜನೆಯು ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಐಷರಾಮಿ ಅನುಭವ ನೀಡಲಿದೆ ಎಂದು ನೆಟ್ಟಿಗರು ಕೊಂಡಾಡುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ನಂದಿನಿ ಹಾಲು ದರ ಏರಿಕೆ ಪರಿಣಾಮ: ರಾಜ್ಯಾದ್ಯಂತ ಕಾಫಿ, ಟೀ ಬೆಲೆ ₹5 ಹೆಚ್ಚಳ
ನಂದಿನಿ ಹಾಲು ದರ ಏರಿಕೆ ಪರಿಣಾಮ: ರಾಜ್ಯಾದ್ಯಂತ ಕಾಫಿ, ಟೀ ಬೆಲೆ ₹5 ಹೆಚ್ಚಳ
‘ಧಮ್ ಇದ್ರೆ ಬಿಚ್ಚಿಡು’; ಗಾನವಿ-ಆಸಿಯಾ ಮಧ್ಯೆ ನಡೆಯಿತು ದೊಡ್ಡ ವಾಕ್ಸಮರ
‘ಧಮ್ ಇದ್ರೆ ಬಿಚ್ಚಿಡು’; ಗಾನವಿ-ಆಸಿಯಾ ಮಧ್ಯೆ ನಡೆಯಿತು ದೊಡ್ಡ ವಾಕ್ಸಮರ
ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಸತ್ತ ನಾಲ್ವರ ಮೃತದೇಹ ಬೆಂಗಳೂರಿಗೆ
ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಸತ್ತ ನಾಲ್ವರ ಮೃತದೇಹ ಬೆಂಗಳೂರಿಗೆ
ಶಿವಲಿಂಗೇಗೌಡ ಕಬಡ್ಡಿ ಅಖಾಡಕ್ಕಿಳಿದು ರೈಡ್ ಮಾಡಿದ ಸ್ಟೈಲ್ ನೋಡಿ
ಶಿವಲಿಂಗೇಗೌಡ ಕಬಡ್ಡಿ ಅಖಾಡಕ್ಕಿಳಿದು ರೈಡ್ ಮಾಡಿದ ಸ್ಟೈಲ್ ನೋಡಿ
ಇಂದು ಕಾಲಾಷ್ಟಮಿ; ಕಾಲಭೈರವನ ಆರಾಧನೆಗೆ ಸೂಕ್ತ ದಿನ
ಇಂದು ಕಾಲಾಷ್ಟಮಿ; ಕಾಲಭೈರವನ ಆರಾಧನೆಗೆ ಸೂಕ್ತ ದಿನ
ಮೆರವಣಿಗೆಯಲ್ಲಿ ಗಮನ ಸೆಳೆದ ರೋಬೋಟಿಕ್​ ಆನೆಗಳು!
ಮೆರವಣಿಗೆಯಲ್ಲಿ ಗಮನ ಸೆಳೆದ ರೋಬೋಟಿಕ್​ ಆನೆಗಳು!
ಹಾಸನಾಂಬ ಸನ್ನಿಧಾನಕ್ಕೆ ಹರಿದುಬರುತ್ತಿದೆ ಕೋಟಿ ಕೋಟಿ ದುಡ್ಡು!
ಹಾಸನಾಂಬ ಸನ್ನಿಧಾನಕ್ಕೆ ಹರಿದುಬರುತ್ತಿದೆ ಕೋಟಿ ಕೋಟಿ ದುಡ್ಡು!
ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹುಟ್ಟಿದರೆ ಕನ್ನಡ ನಾಡಲಿ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಸಚಿವ ಶಿವಲಿಂಗೇಗೌಡ
ಹುಟ್ಟಿದರೆ ಕನ್ನಡ ನಾಡಲಿ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಸಚಿವ ಶಿವಲಿಂಗೇಗೌಡ
ಸುದೀಪ್ ಎದುರು, ಸೋನಿಕಾ-ಧನುಶ್​​ ಅವರ ಮಿಮಿಕ್ ಮಾಡಿದ ತಾಂಡವ್-ಪ್ರಶಾಂತ್
ಸುದೀಪ್ ಎದುರು, ಸೋನಿಕಾ-ಧನುಶ್​​ ಅವರ ಮಿಮಿಕ್ ಮಾಡಿದ ತಾಂಡವ್-ಪ್ರಶಾಂತ್