
ಬೆಂಗಳೂರು, ನವೆಂಬರ್ 02: ಕನ್ನಡ ರಾಜ್ಯೋತ್ಸವದ (ನ. 1) ಸಂಭ್ರಮದಂದೇ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು-ಮುಂಬೈ ‘ವಂದೇ ಭಾರತ್ ಸ್ಲೀಪರ್’ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಇದು ದಕ್ಷಿಣ ಭಾರತದ ಮೊದಲ ಹಾಗೂ ದೇಶದ 3ನೇ ವಂದೇ ಭಾರತ್ ಸ್ಲೀಪರ್ ರೈಲಾಗಿದ್ದು, ಕಲಬುರಗಿ ಮಾರ್ಗವಾಗಿ 16 ಗಂಟೆಗಳಲ್ಲಿ ಮುಂಬೈ ತಲುಪಲಿದೆ. 16 ಆಧುನಿಕ ಬೋಗಿಗಳನ್ನು ಹೊಂದಿರುವ ಈ ರೈಲು ನವೆಂಬರ್ 3ರಿಂದ ನಿಯಮಿತ ವಾಣಿಜ್ಯ ಸಂಚಾರ ಆರಂಭಿಸಲಿದೆ. ಈ ನೂತನ ಸ್ಲೀಪರ್ ರೈಲಿನ ಸೇವೆಗೆ ಸಾರ್ವಜನಿಕರಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ಹಾಗೂ ತೀವ್ರ ಹರ್ಷ ವ್ಯಕ್ತವಾಗಿದೆ. ಅನೇಕ ಪ್ರಯಾಣಿಕರು ಹಾಗೂ ನೆಟ್ಟಿಗರು ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವರ ಈ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಯೋಗಾನಂದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ದಕ್ಷಿಣ ಭಾರತದ ಮೊದಲ ಹಾಗೂ ದೇಶದ ಮೂರನೇ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ ನೀಡಿದ್ದಾರೆ. ಸಾರ್ವಜನಿಕರು ಸಾಮಾಜಿಕ ಜಾಲತಾಣ ಎಕ್ಸ್ (X) ವೇದಿಕೆಯಲ್ಲಿ ತಮ್ಮ ಹರ್ಷವನ್ನು ಹೊರಹಾಕಿದ್ದು, ಸಚಿವರ ಕಾರ್ಯಕ್ಷಮತೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. @tiraspeaks ಎಂಬ ಬಳಕೆದಾರರು ರೈಲ್ವೆ ಸಚಿವರ ಅಭಿವೃದ್ಧಿ ಪರ ಕೆಲಸಗಳನ್ನು ಕೊಂಡಾಡುತ್ತಾ, ನಿಮ್ಮ ಕೆಲಸಕ್ಕೆ ತಕ್ಕಷ್ಟು ಪ್ರಶಂಸೆ ಸಿಗುತ್ತಿಲ್ಲ ಎಂದು ಭಾವನಾತ್ಮಕವಾಗಿ ಬೆಂಬಲ ಸೂಚಿಸಿದ್ದಾರೆ.
ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಆರಂಭವಾಗಿರುವುದು ಎರಡು ಮಹಾನಗರಗಳ ನಡುವಿನ ಸಂಪರ್ಕವನ್ನು ಮತ್ತಷ್ಟು ಸುಲಭಗೊಳಿಸಿದೆ. ದೇಶದ ಪ್ರಧಾನಮಂತ್ರಿಗಳು ಹಾಗೂ ರೈಲ್ವೆ ಸಚಿವರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಪರಿಚಯಿಸಲಾಗಿರುವ ಈ ಹೊಸ ಸ್ಲೀಪರ್ ರೈಲು ಸೇವೆಯು ಪ್ರಯಾಣಿಕರ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಿದ್ದು, ರೈಲ್ವೆ ಇಲಾಖೆಯ ಆಧುನಿಕೀಕರಣಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರೈಲ್ವೆ ಇಲಾಖೆ ಮತ್ತು ಸೆಮಿಕಂಡಕ್ಟರ್ ವಲಯದಲ್ಲಿ ತಂದಿರುವ ಕ್ರಾಂತಿಕಾರಿ ಬದಲಾವಣೆಗಳನ್ನು ಸಾರ್ವಜನಿಕರು ಎಕ್ಸ್ ತಾಣದಲ್ಲಿ ವ್ಯಾಪಕವಾಗಿ ಕೊಂಡಾಡುತ್ತಿದ್ದಾರೆ. ರೈಲ್ವೆ ಸಚಿವರ ಕಾರ್ಯವೈಖರಿಯನ್ನು ಶ್ಲಾಘಿಸುವ ಜೊತೆಗೆ, ಇತರ ಜವಾಬ್ದಾರಿಗಳ ಕುರಿತು ತಮ್ಮ ಅನಿಸಿಕೆಗಳನ್ನು ತಿಳಿಸಿದ್ದಾರೆ. ಒಟ್ಟಾರೆ ರೈಲ್ವೆ ವಲಯದಲ್ಲಿ ಆಗುತ್ತಿರುವ ನವೀನ ಬದಲಾವಣೆಗಳು ಮತ್ತು ವಂದೇ ಭಾರತ್ ಸ್ಲೀಪರ್ ರೈಲಿನ ಸೇವೆ ದೇಶಾದ್ಯಂತ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.
ದೇಶದ ಮೂಲಭೂತ ಸೌಕರ್ಯ ಅಭಿವೃದ್ಧಿಯಲ್ಲಿ ರೈಲ್ವೆ ಇಲಾಖೆ ಮುಂಚೂಣಿಯಲ್ಲಿದೆ ಎಂಬುದಕ್ಕೆ ಈ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸಾಕ್ಷಿಯಾಗಿದೆ. ಸಚಿವ ಅಶ್ವಿನಿ ವೈಷ್ಣವ್ ಹಾಗೂ ಭಾರತೀಯ ರೈಲ್ವೆಯವರು ತೋರಿಸುತ್ತಿರುವ ಪರಿಶ್ರಮ ಮತ್ತು ಗುಣಮಟ್ಟದ ಸೇವೆ ನಿಜಕ್ಕೂ ಅಭಿನಂದನಾರ್ಹ ಎಂದಿದ್ದಾರೆ. ಕೇಂದ್ರ ಸರ್ಕಾರದ ಈ ಮಹತ್ವಾಕಾರದ ಯೋಜನೆಯು ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಐಷರಾಮಿ ಅನುಭವ ನೀಡಲಿದೆ ಎಂದು ನೆಟ್ಟಿಗರು ಕೊಂಡಾಡುತ್ತಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ