ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ ಭೇದಿಸಿದ ಬೆಂಗಳೂರು ಪೊಲೀಸರು: 24 ಗಂಟೆಯಲ್ಲಿ ಆರೋಪಿಯ ಬಂಧನ

Bangalore Crime News: ಬೆಂಗಳೂರು ಹೊರವಲಯದ ತಿಮ್ಮಪ್ಪ ಕೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣವನ್ನು ಪೊಲೀಸರು 24 ಗಂಟೆಯೊಳಗೆ ಭೇದಿಸಿದ್ದಾರೆ. ಚಿನ್ನಾಭರಣ ದೋಚುವ ಉದ್ದೇಶದ ಆರೋಪದಡಿ ಕೊಲೆ ನಡೆದಿದೆ ಎನ್ನಲಾಗಿದ್ದು, ಈ ಸಂಬಂಧ 21 ವರ್ಷದ ಯುವಕನನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ ಭೇದಿಸಿದ ಬೆಂಗಳೂರು ಪೊಲೀಸರು: 24 ಗಂಟೆಯಲ್ಲಿ ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ

Updated on: Jul 23, 2026 | 8:58 AM

ಮುಖ್ಯಾಂಶಗಳು

  • ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದ ಪ್ರಕರಣ
  • ಶವ ಪತ್ತೆಯಾದ 24 ಗಂಟೆಯಲ್ಲಿ ಪ್ರಕರಣ ಭೇದಿಸಿದ ಬೆಂಗಳೂರು ಪೊಲೀಸರು
  • ಕೃತ್ಯದ ಕಾರಣ ಬಹಿರಂಗ, ಆರೋಪಿಯ ಬಂಧನ

ಬೆಂಗಳೂರು, ಜುಲೈ 23: ಬೆಂಗಳೂರಿನ (Bengaluru) ಕೆಂಗೇರಿ ಸಮೀಪದ ರಾಮೋಹಳ್ಳಿಯ ತಿಮ್ಮಪ್ಪ ಕೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ, ಶವ ಪತ್ತೆಯಾದ 24 ಗಂಟೆಯೊಳಗೆ 21 ವರ್ಷದ ಯುವಕನನ್ನು ಬಂಧಿಸಲಾಗಿದ್ದು, ಚಿನ್ನಾಭರಣ ದೋಚುವ ಉದ್ದೇಶದಿಂದ ಮಹಿಳೆಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಚಿನ್ನಾಭರಣಕ್ಕಾಗಿ ಚಲ್ಲಘಟ್ಟ ಜಯಮ್ಮ ಹತ್ಯೆ ಶಂಕೆ

ಪೊಲೀಸರ ಮಾಹಿತಿ ಪ್ರಕಾರ, ಮೃತರನ್ನು ಕೆಂಗೇರಿ ಸಮೀಪದ ಚಲ್ಲಘಟ್ಟ ನಿವಾಸಿ 61 ವರ್ಷದ ಜಯಮ್ಮ ಎಂದು ಗುರುತಿಸಲಾಗಿದೆ. ಅವರು ನಾಪತ್ತೆಯಾಗಿದ್ದ ಬಗ್ಗೆ ಕುಟುಂಬದವರು ದೂರು ನೀಡಿದ್ದರು. ಜುಲೈ 21ರಂದು ತಿಮ್ಮಪ್ಪ ಕೆರೆಯಲ್ಲಿ ಕೆಂಪು ಬಣ್ಣದ ಸೂಟ್‌ಕೇಸ್‌ನಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು.

ತನಿಖೆ ವೇಳೆ ಕುಂಬಳಗೋಡು ಪೊಲೀಸರು ಚಲ್ಲಘಟ್ಟ ನಿವಾಸಿ 21 ವರ್ಷದ ಗಗನ್ ಆರ್‌ನನ್ನು ಬಂಧಿಸಿದ್ದಾರೆ. ಆರೋಪಿ ಚಿನ್ನಾಭರಣ ಕಳವು ಮಾಡುವ ಉದ್ದೇಶದಿಂದ ಜಯಮ್ಮ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ ಆರೋಪಿ

ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಯು ಮಹಿಳೆಯ ಚಿನ್ನದ ಸರ ಹಾಗೂ ಕಿವಿಯೋಲೆಗಳನ್ನು ತೆಗೆದುಕೊಂಡ ನಂತರ ಮೃತದೇಹವನ್ನು ಮನೆಯಲ್ಲಿದ್ದ ಸೂಟ್‌ಕೇಸ್‌ನಲ್ಲಿ ಇರಿಸಿ, ಅದನ್ನು ಕೆರೆಯಲ್ಲಿ ಬಿಸಾಡಿದ್ದಾನೆ. ಈ ಮೂಲಕ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್: ಮೂವರು ಅರೆಸ್ಟ್

ಪ್ರಕರಣವನ್ನು ವಿಶೇಷ ತನಿಖಾ ತಂಡ 24 ಗಂಟೆಯೊಳಗೆ ಭೇದಿಸಿದ್ದು, ಸಿಸಿಟಿವಿ ದೃಶ್ಯಗಳು ಸೇರಿದಂತೆ ವೈಜ್ಞಾನಿಕ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us