AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಮ್ಯೂಸಿಯಮ್​ಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ಪೊಲೀಸರಿಗೆ ತಲೆನೋವಾದ ಆರೋಪಿಗಳ ಲೊಕೇಷನ್ ​ಟ್ರೇಸ್​ ​

ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿರುವ ಮ್ಯೂಸಿಯಂಗಳಿಗೆ ಬಾಂಬ್​ ಬೆದರಿಕೆ ಇಮೇಲ್​ ಬಂದಿತ್ತು. ಈ ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ವಿಚಾರವೊಂದು ತಿಳಿದಿದೆ. ಅದು ದುಷ್ಕರ್ಮಿಗಳು ವಿಪಿಎನ್ (ವರ್ಚುವಲ್ ಪ್ರೈವೇಟ್ ನೆಟ್ ವರ್ಕ್) ಬಳಸಿ ಇಮೇಲ್. ಇದು ಪೊಲೀಸರಿಗೆ ತಲೆನೋವಾಗಿದೆ.

ಬೆಂಗಳೂರಿನ ಮ್ಯೂಸಿಯಮ್​ಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ಪೊಲೀಸರಿಗೆ ತಲೆನೋವಾದ ಆರೋಪಿಗಳ ಲೊಕೇಷನ್ ​ಟ್ರೇಸ್​ ​
ಸಾಂದರ್ಭಿಕ ಚಿತ್ರ
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on: Jan 09, 2024 | 8:06 AM

Share

ಬೆಂಗಳೂರು, ಜನವರಿ 09: ನಗರದ ಮ್ಯೂಸಿಯಮ್​ಗಳಿಗೆ (Museum) ಬಾಂಬ್ ಬೆದರಿಕೆ (Bomb Threat Call) ಇಮೇಲ್ ಬಂದಿದ್ದ ಪ್ರಕರಣದ ತನಿಖೆಯಲ್ಲಿ ಪೊಲೀಸರಿಗೆ ಮಹತ್ವದ ವಿಚಾರವೊಂದು ತಿಳಿದುಬಂದಿದೆ. ದುಷ್ಕರ್ಮಿಗಳು ವಿಪಿಎನ್ (ವರ್ಚುವಲ್ ಪ್ರೈವೇಟ್ ನೆಟ್ ವರ್ಕ್) ಬಳಸಿ ಇಮೇಲ್ ಮಾಡಿರುವುದು ಪೊಲೀಸರಿಗೆ ತಿಳಿದಿದೆ. ದುಷ್ಕರ್ಮಿಗಳು ಗೂಗಲ್ ಇ-ಮೇಲ್ ವೆಬ್ ಬಳಸಿಯೇ ಮೇಲ್ ಮಾಡಿದ್ದಾರೆ. ಆದರೆ ನೆಟ್​ವರ್ಕ್ ಮಾತ್ರ ವಿಪಿಎನ್ ಬಳಸಿದ್ದಾರೆ. ಹೀಗಾಗಿ ಕೇಂದ್ರ ವಿಭಾಗದ ಪೊಲೀಸರಿಂದ (Police) ತನಿಖೆ ಮುಂದುವರೆದಿದೆ.

ವಿಪಿಎನ್ ನೆಟ್​ವರ್ಕ್ ಬಳಸಿಕೊಂಡರೇ ಐಪಿ ಅಡ್ರೆಸ್ ಟ್ರೇಸ್ ಮಾಡುವುದು ಕಷ್ಟವಾಗುತ್ತದೆ. ಸಾಧಾರಣವಾಗಿ ಇಂತಹ ಪ್ರಕರಣಗಳಲ್ಲಿ ಐಪಿ ಅಡ್ರೆಸ್ ಟ್ರೇಸ್ ಮಾಡಲು ಕಷ್ಟವಾಗುತ್ತದೆ. ಬೇರೆ ಬೇರೆ ದೇಶಗಳಿಂದ ಮೇಲ್ ಬಂದಿರುವ ಹಾಗೆ ಐಪಿ ಅಡ್ರೆಸ್ ತೋರಿಸುತ್ತದೆ. ಈ ಪ್ರಕರಣದಲ್ಲಿ ಐಪಿ ಅಡ್ರೆಸ್ ಮೂರು ದೇಶದ ಲೊಕೇಷನ್​ಗಳನ್ನು ತೋರಿಸುತ್ತಿದೆ. ಇದರಿಂದ ಪೊಲೀಸರಿಗೆ ತಲೆನೋವಾಗಿದೆ. ಆದರೆ ಅದರ ಸರಿಯಾದ ಐಪಿ ಅಡ್ರೆಸ್ ಹುಡುಕಲು ಕಾಲಾವಕಾಶ ಬೇಕು.

ಇದನ್ನೂ ಓದಿ: Bomb Threat: ದೇಶದ 20ಕ್ಕೂ ಹೆಚ್ಚು ಮ್ಯೂಸಿಯಂಗಳಿಗೆ ಬಾಂಬ್​ ಬೆದರಿಕೆ ಕರೆ

ಏನಿದು ಪ್ರಕರಣ

ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ (Terrorizers 111) ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು.

ಶಾಲೆಗಳಿಗೆ ಬಾಂಬ್​ ಬೆದರಿಕೆಗೂ ವಿಪಿಎನ್​ ಬಳಕೆ

ಕಳೆದ ವರ್ಷ ಡಿಸೆಂಬರ್​ನಲ್ಲಿ ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಬಂದಿತ್ತು. ಈ ಪ್ರಕರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಬಳಸಲಾದ ಇ-ಮೇಲ್​ ಐಡಿ ನಕಲು ಎಂಬುದು ಪತ್ತೆಯಾಗಿತ್ತು. ಕೃತ್ಯ ಎಸಗಲೆಂದೆ ಆರೋಪಿಗಳು ನಕಲಿ ಐಡಿ ಸೃಷ್ಟಿಸಿದ್ದರು. ದುಷ್ಕರ್ಮಿ ವರ್ಚ್ಯುಯಲ್ ಪ್ರವೇಟ್ ನೆಟ್ವರ್ಕ್ (ವಿಪಿಎನ್) ಬಳಸಿ ಇ-ಮೇಲ್ ಸಂದೇಶಗಳನ್ನು ಕಳುಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು