ಬೆಂಗಳೂರು, ಜನವರಿ 09: ನಗರದ ಮ್ಯೂಸಿಯಮ್ಗಳಿಗೆ (Museum) ಬಾಂಬ್ ಬೆದರಿಕೆ (Bomb Threat Call) ಇಮೇಲ್ ಬಂದಿದ್ದ ಪ್ರಕರಣದ ತನಿಖೆಯಲ್ಲಿ ಪೊಲೀಸರಿಗೆ ಮಹತ್ವದ ವಿಚಾರವೊಂದು ತಿಳಿದುಬಂದಿದೆ. ದುಷ್ಕರ್ಮಿಗಳು ವಿಪಿಎನ್ (ವರ್ಚುವಲ್ ಪ್ರೈವೇಟ್ ನೆಟ್ ವರ್ಕ್) ಬಳಸಿ ಇಮೇಲ್ ಮಾಡಿರುವುದು ಪೊಲೀಸರಿಗೆ ತಿಳಿದಿದೆ. ದುಷ್ಕರ್ಮಿಗಳು ಗೂಗಲ್ ಇ-ಮೇಲ್ ವೆಬ್ ಬಳಸಿಯೇ ಮೇಲ್ ಮಾಡಿದ್ದಾರೆ. ಆದರೆ ನೆಟ್ವರ್ಕ್ ಮಾತ್ರ ವಿಪಿಎನ್ ಬಳಸಿದ್ದಾರೆ. ಹೀಗಾಗಿ ಕೇಂದ್ರ ವಿಭಾಗದ ಪೊಲೀಸರಿಂದ (Police) ತನಿಖೆ ಮುಂದುವರೆದಿದೆ.
ವಿಪಿಎನ್ ನೆಟ್ವರ್ಕ್ ಬಳಸಿಕೊಂಡರೇ ಐಪಿ ಅಡ್ರೆಸ್ ಟ್ರೇಸ್ ಮಾಡುವುದು ಕಷ್ಟವಾಗುತ್ತದೆ. ಸಾಧಾರಣವಾಗಿ ಇಂತಹ ಪ್ರಕರಣಗಳಲ್ಲಿ ಐಪಿ ಅಡ್ರೆಸ್ ಟ್ರೇಸ್ ಮಾಡಲು ಕಷ್ಟವಾಗುತ್ತದೆ. ಬೇರೆ ಬೇರೆ ದೇಶಗಳಿಂದ ಮೇಲ್ ಬಂದಿರುವ ಹಾಗೆ ಐಪಿ ಅಡ್ರೆಸ್ ತೋರಿಸುತ್ತದೆ. ಈ ಪ್ರಕರಣದಲ್ಲಿ ಐಪಿ ಅಡ್ರೆಸ್ ಮೂರು ದೇಶದ ಲೊಕೇಷನ್ಗಳನ್ನು ತೋರಿಸುತ್ತಿದೆ. ಇದರಿಂದ ಪೊಲೀಸರಿಗೆ ತಲೆನೋವಾಗಿದೆ. ಆದರೆ ಅದರ ಸರಿಯಾದ ಐಪಿ ಅಡ್ರೆಸ್ ಹುಡುಕಲು ಕಾಲಾವಕಾಶ ಬೇಕು.
ಇದನ್ನೂ ಓದಿ: Bomb Threat: ದೇಶದ 20ಕ್ಕೂ ಹೆಚ್ಚು ಮ್ಯೂಸಿಯಂಗಳಿಗೆ ಬಾಂಬ್ ಬೆದರಿಕೆ ಕರೆ
ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ (Terrorizers 111) ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು.
ಕಳೆದ ವರ್ಷ ಡಿಸೆಂಬರ್ನಲ್ಲಿ ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಈ ಪ್ರಕರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಬಳಸಲಾದ ಇ-ಮೇಲ್ ಐಡಿ ನಕಲು ಎಂಬುದು ಪತ್ತೆಯಾಗಿತ್ತು. ಕೃತ್ಯ ಎಸಗಲೆಂದೆ ಆರೋಪಿಗಳು ನಕಲಿ ಐಡಿ ಸೃಷ್ಟಿಸಿದ್ದರು. ದುಷ್ಕರ್ಮಿ ವರ್ಚ್ಯುಯಲ್ ಪ್ರವೇಟ್ ನೆಟ್ವರ್ಕ್ (ವಿಪಿಎನ್) ಬಳಸಿ ಇ-ಮೇಲ್ ಸಂದೇಶಗಳನ್ನು ಕಳುಹಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ